
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್, ಸಪ್ತಾ ಕಾವೂರು ಮುಖ್ಯ ಪಾತ್ರದಲ್ಲಿ ನಟಿಸಿರುವ ‘ತನುಜಾ’ ಚಿತ್ರದ ಮೋಶನ್ ಪೋಸ್ಟರ್ ಬಿಡುಗಡೆಯಾಗಿದೆ. ಕೊರೋನಾ ವೇಳೆ ನೀಟ್ ಪರೀಕ್ಷೆ ಬರೆಯಲಾಗದೇ ಒದ್ದಾಡಿದ ಹುಡುಗಿಗೆ ಮುಖ್ಯಮಂತ್ರಿಗಳೇ ಕೇಂದ್ರದ ನೆರವು ಪಡೆದು ಪರೀಕ್ಷೆ ಬರೆಯಲು ಸಹಕರಿಸುವ ಕಥೆ ಈ ಚಿತ್ರದ್ದು. ವಿಶ್ವೇಶ್ವರ ಭಟ್ ಅಂಕಣದಿಂದ ಸ್ಫೂರ್ತಿ ಪಡೆದು ಹರೀಶ್ ಎಂ ಡಿ ಹಳ್ಳಿ ಈ ಚಿತ್ರ ನಿರ್ದೇಶಿಸಿದ್ದಾರೆ.
ಪೋಸ್ಟರ್ ಬಿಡುಗಡೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವೇಶ್ವರ ಭಟ್, 'ನನ್ನ ಅಂಕಣ ಓದಿ ಕೆಲವರು ಸಿನಿಮಾ ಮಾಡುವುದಾಗಿ ಹೇಳಿದರು. ಅದರಲ್ಲಿ ಹರೀಶ್ ಕೂಡ ಒಬ್ಬರು. ಅವರ ಸಿನಿಮಾ ಮೇಲಿನ ಆಸಕ್ತಿ ಹಾಗೂ ಶ್ರದ್ದೆ ನಿಜಕ್ಕೂ ನನಗೆ ಆಶ್ಚರ್ಯ ಉಂಟು ಮಾಡಿತು ಚಿತ್ರ ಮಾಡುವಲ್ಲಿ ಹರೀಶ್ ಸಾಕಷ್ಟು ಪರಿಶ್ರಮವನ್ನು ಪಟ್ಟಿದ್ದಾರೆ. ಬಹಳ ಕನಸುಗಳನ್ನು ಭರವಸೆ ಇಟ್ಟುಕೊಂಡಿರುವ ನಿರ್ದೇಶಕ ಅವರು. 'ತನುಜಾ' ಚಿತ್ರವನ್ನು ಅವರು ಚೆನ್ನಾಗಿ ನಿರ್ದೇಶಿಸಿದ್ದಾರೆ. ನಾನು ಕೂಡ ಅಭಿನಯಿಸಿದ್ದೇನೆ. ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಾಗೂ ಸಚಿವ ಸುಧಾಕರ್ ಅವರು ಸಹ ತನುಜಾ ಪರೀಕ್ಷೆ ಬರೆಯಲು ಮಾಡಿದ್ದ ಉಪಕಾರ ಸ್ಮರಣೀಯ. ಈ ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದಿದ್ದು, ಚಿತ್ರದ ಕೊನೆಯಲ್ಲಿ ಅವರು ಕೆಲವು ಸೆಕೆಂಡ್ ಗಳ ಕಾಲ ಅವರು ಮಾತನಾಡುವ ಸಾಧ್ಯತೆ ಇದೆ' ಎಂದರು.
'ತನುಜಾ' ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮಾಜಿ ಸಿಎಂ ಯಡಿಯೂರಪ್ಪ!
ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಹರೀಶ್, 'ನನ್ನ ನಿರ್ದೇಶನದ ಈ ಚಿತ್ರಕ್ಕೆ ನನ್ನ ಹಲವು ಸ್ನೇಹಿತರು ಬಂಡವಾಳ ಹೂಡಿದ್ದಾರೆ. ಒಂದು ದಿನದಲ್ಲಿ ನಡೆಯುವ ಕಥೆ ಇದು. ನೀಟ್ ಪರೀಕ್ಷೆ ಬರೆಯಲು ಸುಮಾರು 350ಕಿ.ಮೀ. ದೂರ ಪ್ರಯಾಣ ಮಾಡಿ, ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಕಥೆಯೇ ರೋಚಕತೆಯಿಂದ ಕೂಡಿತ್ತು. ಈ ವಿಚಾರ ಎಲ್ಲರ ಕುತೂಹಲ ಕೆರಳಿಸಿತ್ತು. ಈ ಒನ್‌ಲೈನ್ ಸ್ಟೋರಿಯನ್ನು ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಶಿವಮೊಗ್ಗ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಒಂದು ಟೇಕ್ ಸಹ ತೆಗೆದುಕೊಳ್ಳದ ಯಡಿಯೂರಪ್ಪ ಲೀಲಾಜಾಲವಾಗಿ ನಟಿಸಿದ್ದರ ಬಗ್ಗೆ ಹೇಳಿದರು. ಸಚಿವ ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್ ಮುಂತಾದ ಗಣ್ಯರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಕೊನೆಗೂ ಗುಡ್ ನ್ಯೂಸ್ ಕೊಟ್ಟ ರಮ್ಯಾ; ಮತ್ತೆ ಚಿತ್ರರಂಗಕ್ಕೆ ಮೋಹಕತಾರೆ ವಾಪಾಸ್
ಇನ್ನು 'ನಾನು ಈ ಸಿನಿಮಾ ಮಾಡದೆ ಹೋಗಿದ್ದರೆ, ನನಗೆ ತುಂಬಾ ನಷ್ಟವಾಗುತ್ತಿತ್ತು. ಈ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನನಗೆ ಖುಷಿಯಾಗಿದೆ' ಎನ್ನುತ್ತಾರೆ 'ತನುಜಾ' ಚಿತ್ರದ ಮುಖ್ಯ ಪಾತ್ರಧಾರಿ ಸಪ್ತ ಪಾವೂರ್. ರಾಜೇಶ್ ನಟರಂಗ ತನುಜಾ ಪರೀಕ್ಷೆ ಬರೆಯಲು ಮುಖ್ಯ ಕಾರಣಕರ್ತರಾದ ಪರಿಶ್ರಮ ನೀಟ್ ಅಕಾಡೆಮಿಯ ಪ್ರದೀಪ್ ಈಶ್ವರ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಯಡಿಯೂರಪ್ಪ, ಸುಧಾಕರ್ ಹಾಗೂ ವಿಶ್ವೇಶ್ವರ ಭಟ್ ನೈಜ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಪ್ರದ್ಯೋತನ್ ಸಂಗೀತ, ರವೀಂದ್ರನಾಥ್ ಛಾಯಾಗ್ರಹಣವಿದೆ. ನಿರ್ಮಾಪಕರಾದ ಚಂದ್ರಶೇಖರ್ ಗೌಡ ಮತ್ತು ಪ್ರಕಾಶ್ ಮದ್ದೂರು ಉಪಸ್ಥಿತರಿದ್ದರು. ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.