
ಬೆಂಗಳೂರು (ಅ.16): ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಿಸುತ್ತಿದ್ದ ಶ್ರೀನಿವಾಸ್ ಎಂಬುವವರನ್ನು ತೂಗುದೀಪ ಪರಿವಾರ ಹಾಗೂ ಅಭಿಮಾನಿ ಸಂಘಧ ವ್ಯಾವಹಾರಿಕ ಚಟುವಟಿಕೆಗಳಿಂದ ದೂರ ಇರಿಸಲಾಗಿದೆ ಎಂದು ಡಿ ಕಂಪನಿ ಫ್ಯಾನ್ಸ್ ಅಸೋಸಿಯೇಶನ್ ಅಧಿಕೃತಪಡಿಸಿದೆ.
"
ಇನ್ಮುಂದೆ ಶ್ರೀನಿವಾಸ್ ಅವರ ಜೊತೆ ಡಿ ಬಾಸ್ ಹೆಸರಿನಲ್ಲಿ ಯಾವುದೇ ವ್ಯವಹಾರ ಮಾಡುವಂತಿಲ್ಲ ಎಂದು ಡಿ ಕಂಪನಿ ಫ್ಯಾನ್ಸ್ ಅಸೋಸಿಯೇಶನ್ ಹೇಳಿದೆ. ಶ್ರೀನಿವಾಸ್ ಅವರು ಸಾಕಷ್ಟು ಸಮಯಗಳಿಂದ ದರ್ಶನ್ ಬಳಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಗೆಟ್ ಪಾಸ್ ಗೆ ಅಧಿಕೃತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ಕಾರಣಗಳಿಂದ ದೂರ ಸರಿಸಲಾಗಿದೆ ಎಂದು ಹೇಳಲಾಗಿದೆ.
ಮತ್ತೆ ಸ್ಯಾಂಡಲ್ ವುಡ್ ಗೆ ಮರುಳುತ್ತಾರಾ ಬ್ಯೂಟಿ ಕ್ವೀನ್ ರಮ್ಯಾ?
ಇವರಿಗೂ ಮೊದಲು ಮಲ್ಲಿಕಾರ್ಜುನ್ ಎಂಬುವವರು ಮ್ಯಾನೆಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರ ಮೇಲೆ ಮೋಸದ ಆರೋಪ ಕೇಳಿ ಬಂದಿತ್ತು. ಅವರನ್ನು ಹೊರಗೆ ಕಳುಹಿಸಲಾಗಿತ್ತು. ಆ ನಂತರ ಶ್ರೀನಿವಾಸ್ ಅವರು ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ಕೆಲಸಕ್ಕೆ ಸೇರಿ 8 ತಿಂಗಳಾಗಿತ್ತು.
ದರ್ಶನ್ ಜೊತೆ ಕೆಲಸ ಬಿಟ್ಟಿರೋ ವಿಚಾರವಾಗಿ ದರ್ಶನ್ ಮ್ಯಾನೇಜರ್ ಶ್ರೀನಿವಾಸ್ ಸ್ಪಷ್ಟನೆ ನೀಡಿದ್ದಾರೆ. ದರ್ಶನ್ ಮತ್ತು ನನ್ನ ಮಧ್ಯೆ ಮನಸ್ತಾಪ ಇರೋದು ನಿಜ. ಕೆಲಸದ ವಿಚಾರವಾಗಿ ಭಿನ್ನಾಭಿಪ್ರಾಯ ಬಂದಿದೆ. ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಬೇಡಿ. ನನಗೂ ಕುಟುಂಬ ಇದೆ ನಾನು ಎಲ್ಲಿಯೂ ಓಡಿಹೋಗಿಲ್ಲ ಎಂದು ಶ್ರೀನಿವಾಸ್ ಮನವಿ ಮಾಡಿಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.