ಸುಷ್ಮಿತಾ ಜೊತೆ ನ್ಯೂ ಇಯರ್ ಟೈಮಲ್ಲಿ'ಕಾಟನ್ ಕ್ಯಾಂಡಿ' ತಂದ ಚಂದನ್ ಶೆಟ್ಟಿ!

Published : Dec 27, 2024, 12:31 PM IST
ಸುಷ್ಮಿತಾ ಜೊತೆ ನ್ಯೂ ಇಯರ್ ಟೈಮಲ್ಲಿ'ಕಾಟನ್ ಕ್ಯಾಂಡಿ' ತಂದ ಚಂದನ್ ಶೆಟ್ಟಿ!

ಸಾರಾಂಶ

ಚಂದನ್ ಶೆಟ್ಟಿ ನಿರ್ದೇಶನ ಮತ್ತು ಸಂಗೀತದ 'ಕಾಟನ್ ಕ್ಯಾಂಡಿ' ಮ್ಯೂಸಿಕ್ ವಿಡಿಯೋ ಬಿಡುಗಡೆಯಾಗಿದೆ. ಸುಷ್ಮಿತಾ ಗೋಪಿನಾಥ್ ಜೊತೆಗಿನ ಈ ಹಾಡು ಹೊಸವರ್ಷದ ಕೊಡುಗೆಯೆಂದು ಚಂದನ್ ಹೇಳಿದ್ದಾರೆ. ಅದ್ದೂರಿಯಾಗಿ ಚಿತ್ರೀಕರಿಸಲಾದ ಈ ವಿಡಿಯೋದಲ್ಲಿ ಚಂದನ್-ಸುಷ್ಮಿತಾ ಜೋಡಿ ಮೋಡಿ ಮಾಡಿದೆ. ಅಭಿಮಾನಿಗಳ ಬೇಡಿಕೆಗೆ ಸ್ಪಂದಿಸಿ ಹೊಸ ಹಾಡು ತಂದಿರುವ ಚಂದನ್, ಪ್ರೇಕ್ಷಕರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾರೆ.

ನಟ-ಗಾಯಕ ಹಾಗು ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ  (Chandan Shetty) ಮ್ಯೂಸಿಕ್ ವಿಡಿಯೋ 'ಕಾಟನ್ ಕ್ಯಾಂಡಿ' ರಿಲಿಸ್ ಆಗಿದ್ದು ಸದ್ಯ ಟ್ರೆಂಡಿಂಗ್ ಕ್ರಿಯೇಟ್ ಮಾಡಿದೆ. 'ಕಾಟನ್ ಕ್ಯಾಂಡಿ' ಹೆಸರಿನ ಮ್ಯೂಸಿಕ್ ವಿಡಿಯೋದಲ್ಲಿ ನಟ, ಗಾಯಕ ಚಂದನ್ ಶೆಟ್ಟಿ ಜೋಡಿಯಾಗಿ ಸುಷ್ಮಿತಾ ಗೋಪಿನಾಥ್ ನಟಿಸಿದ್ದಾರೆ. ಈ ಹಾಡಿನಲ್ಲಿ ಚಂದನ್-ಸುಷ್ಮಿತಾ ಜೋಡಿ ಸಕತ್ ಮೋಡಿ ಮಾಡಿದ್ದಾರೆ, ಮೇಡ್ ಫಾರ್ ಈಚ್ ಅದರ್' ಎಂಬಂತೆ ಚಿಂದಿ ಮಾಡಿದ್ದಾರೆ. 

ಇಂದು, ಅಂದರೆ 27 ಡಿಸೆಂಬರ್ 2024ರಂದು ಈ ಕಾಟನ್ ಕ್ಯಾಂಡಿ ರಿಲೀಸ್ ಆಗಿದೆ. ಈ ಮೊದಲಿನ ಎಲ್ಲದಕ್ಕಿಂತ ವಿಶೇಷವಾದ ಸಂಗೀತದ ರಸದೌತಣ ಇದರಲ್ಲಿದೆ ಎನ್ನಬಹುದು. ಏಕೆಂದರೆ, ಈ ವಿಡಿಯೋವನ್ನು ಹೆಚ್ಚು ಅದ್ದೂರಿಯಾಗಿ ಶೂಟ್ ಮಾಡಲಾಗಿದೆ, ಈ ಮ್ಯೂಸಿಕ್ ಸಾಂಗ್‌ಗೆ ಹೆಚ್ಚಿನ ತಯಾರಿ ಮಾಡಿಕೊಂಡಿದ್ದರು ಚಂದನ್ ಶೆಟ್ಟಿ. ಈ ಮ್ಯೂಸಿಕ್ ವಿಡಿಯೋವನ್ನು ಸ್ವತಃ ಚಂದನ್ ಶೆಟ್ಟಿಯವರೇ ನಿರ್ದೇಶನ ಕೂಡ ಮಾಡಿದ್ದಾರೆ. 

ಈ ಬಗ್ಗೆ ಚಂದನ್ ಶೆಟ್ಟಿ ಅವರು 'ನನಗೆ ಈ ಕಾಟನ್ ಕ್ಯಾಂಡಿ ತುಂಬಾ ಮುಖ್ಯವಾದ ಪ್ರಾಜೆಕ್ಟ್ ಆಗಿದೆ. ಏಕೆಂದರೆ, ಇತ್ತೀಚೆಗೆ ನನ್ನ ಯಾವುದೇ ಹೊಸ ಸಾಂಗ್ ಬಿಡುಗಡೆ ಆಗಿಲ್ಲ. ನನ್ನ ಅಭಿಮಾನಿಗಳು ಬೇಡಿಕೆ ಇಟ್ಟಿದ್ದರು, ಆದರೆ ನನಗೆ ನನ್ನ ಬೇರೆಬೇರೆ ಕೆಲಸಗಳ ಕಾರಣಕ್ಕೆ ಕೊಡಲು ಅಸಾಧ್ಯವಾಗಿತ್ತು. ಇದೀಗ ಎಲ್ಲವೂ ಅಂದುಕೊಂಡಂತೆ ಮೂಡಿ ಬಂದಿದ್ದು, ವಿಡಿಯೋ ಸಾಂಗ್ ಲಾಂಚ್ ಬಳಿಕ ನನ್ನ ಫ್ಯಾನ್ಸ್ ಹಾಗೂ ಮ್ಯೂಸಿಕ್ ಲವರ್ ರಿಯಾಕ್ಷನ್ ಹೇಗಿರಬಹುದು ಎಂಬ ಬಗ್ಗೆ ನನಗೆ ಕುತೂಹಲವಿದೆ. ಇದು ನ್ಯೂ ಈಯರ್‌ಗೆ ಗಿಫ್ಟ್' ಎಂದಿದ್ದಾರೆ. 

ಸಿಎಂ ಆಫರ್ ಬಂದ್ರೂ 'ಬೇಡ' ಅಂದಿದ್ದೇಕೆ ಸೋನು ಸೂದ್? ಕೊನೆಗೂ ಹೊರಬಿತ್ತು ಸೀಕ್ರೆಟ್!

ಕನ್ನಡ ಸಿನಿಮಾಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡ್ ಮಾಡುತ್ತಿರುವ, ಟ್ರೆಂಡಿಂಗ್‌ನಲ್ಲಿರುವ ಗಾಯಕ, ಮ್ಯೂಸಿಕ್ ಕಂಪೋಸರ್, ಲಿರಿಸಿಸ್ಟ್ ಮತ್ತು ರ್‍ಯಾಪರ್ ಅಂದ್ರೆ ಅದು ಚಂದನ್ ಶೆಟ್ಟಿ ಮತ್ತೆ ಹೊಸ ಹುರುಪಿನೊಂದಿಗೆ ಪುಟಿದೇಳುತ್ತಿದ್ದಾರೆ. ತಮ್ಮ ಹೊಚ್ಚ ಹೊಸ ಶೈಲಿಯ ಕಾಟನ್ ಕ್ಯಾಂಡಿ ಹಾಡಿನ ಮೂಲಕ ಯುವ ಜನತೆ ಹುಚ್ಚೆದ್ದು ಕುಣಿಯುವಂತೆ ಮಾಡಿದ್ದಾರೆ. ಈ ಮೊದಲು ಬಂದಿದ್ದ 'ಪಾರ್ಟಿ ಆಂಥಮ್, ಚಾಕಲೇಟ್ ಗರ್ಲ್ (Chocolate Girl) ಹಾಡು, ಮೊದಲಾದ ಹಾಡುಗಳು ಸೋಶಿಯಲ್ ಮೀಡೀಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. 

ಇದೀಗ ಚಂದನ್ ಶೆಟ್ಟಿ ಹೊಸ ವರ್ಷಕ್ಕೆ ಮತ್ತೊಂದು ಪಾರ್ಟಿ ಹಾಡಿನ (party song) ಮೂಲಕ ಬಂದಿದ್ದಾರೆ. ಈ ಬಾರಿಯ ಈ ಪಾರ್ಟಿ ಹಾಡಲ್ಲಿ ನಟಿ ಸುಷ್ಮಿತಾ ಗೋಪಿನಾಥ್ ಕಾಣಿಸಿಕೊಂಡಿದ್ದಾರೆ. ಸುಷ್ಮಿತಾ ಅವರು ಕನ್ನಡ ಹಾಗೂ ತೆಲುಗು ಸಿನಿಮಾಗಳು, ಜಾಹೀರಾತುಗಳಲ್ಲಿ ನಟಿಸಿ ಮೆಚ್ಚುಗೆ ಪಡೆದಿರುವ ನಟಿ. ಇದೀಗ ಚಂದನ್ ಹಾಗೂ ಸುಷ್ಮಿತಾ ಜೋಡಿ ತಮ್ಮ ಕಾಟನ್ ಕ್ಯಾಂಡಿ ಹಾಡಿನ ಮೂಲಕ ಮೋಡಿ ಮಾಡಿದ್ದಾರೆ. ಗ್ರೀಷ್ಮಾ ಗೌಡ ಅವರು ಈ ಹಾಡಿನ ಸಹ-ನಿರ್ಮಾಪಕರು.

ಚಂದನ್ ಶೆಟ್ಟಿ 2011 ರಿಂದಲೂ ತಮ್ಮ ರ್‍ಯಾಪ್ ಸಾಂಗ್ಸ್‌ಗಳ (Rap songs) ಮೂಲಕ ಸದ್ದು ಮಾಡುತ್ತಿದ್ದಾರೆ. ಇಲ್ಲಿವರೆಗೆ ಬರೋಬ್ಬರಿ 15ಕ್ಕಿಂತ ಹೆಚ್ಚು ಹಾಡುಗಳನ್ನು ಇವರು ಕಂಪೋಸ್ ಮಾಡಿ ಹಾಡಿದ್ದಾರೆ. ಜೊತೆಗೆ, ಸಿನಿಮಾಗಳಲ್ಲೂ ಹಾಡುವ ಮೂಲಕ ಅಲ್ಲೂ ಗೆಲುವಿನ ನಗೆ ಬೀರಿದ್ದಾರೆ. ಇದೀಗ ಹೊಸ ವರ್ಷಕ್ಕೆ 'ಕಾಟನ್ ಕ್ಯಾಂಡಿ' ಹೆಸರಿನ ಹೊಸ ಹಾಡಿನೊಂದಿಗೆ ಫ್ಯಾನ್ಸ್‌ ಮುಂದೆ ಬಂದಿದ್ದಾರೆ. 

ದರ್ಶನ್-ಸುದೀಪ್ ಒಂದಾಗುವ ಸುದಿನ ಹತ್ತಿರ ಬಂದಿದೆ; ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ!

ಚಂದನ್ ಶೆಟ್ಟಿಯವರ ಮೂರೇ ಮೂರು ಪೆಗ್ಗಿಗೆ ಹಾಡು, ಇವತ್ತಿಗೂ ಯುವಕರ ಫೇವರಿಟ್ ಆಗಿದೆ. ಅಷ್ಟೇ ಅಲ್ಲದೇ  'ಲಕಲಕ ಲ್ಯಾಂಬರ್ಗಿನಿ, ಟಕೀಲಾ, ತ್ರೀ ಪೆಗ್, ಪಾಟಿ ಫ್ರೀಕ್, ಟಾಪ್‌ ಟು ಗಾಂಚಾಲಿ, ಕರಾಬು, ಕೋಲುಮಂಡೆ' ಹಾಡುಗಳು ಸಖತ್ ಸೌಂಡ್ ಮಾಡಿದ್ದವು. ಇದೀಗ ಹೊಸ ಹಾಡು 'ಕಾಟನ್ ಕ್ಯಾಂಡಿ' ಮೂಲಕ ಹೊಸ ವರ್ಷದ ಗಿಫ್ಟ್ ಕೊಟ್ಟು ಪ್ರೇಕ್ಷಕರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾರೆ ಚಂದನ್ ಶೆಟ್ಟಿ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು: Shiva Rajkumar
ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್