
ಉಪೇಂದ್ರ ಹಾಗೂ ಸುದೀಪ್ ನಟನೆಯ ಕಬ್ಜದ ಡಬ್ಬಿಂಗ್ ಆರಂಭವಾಗಿದೆ. ಏಳು ಭಾಷೆಗಳಲ್ಲಿ ಏಕಕಾಲಕ್ಕೆ ಡಬ್ಬಿಂಗ್ ನಡೆಯುತ್ತಿದೆ. ಒಂದು ಹಾಡಿನ ಚಿತ್ರೀಕರಣ ಬಿಟ್ಟು ಉಳಿದೆಲ್ಲ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಆರ್ ಚಂದ್ರು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಉಪೇಂದ್ರ ಜೊತೆಗೆ ಶ್ರೀಯಾ ಶರಣ್ ಮುಖ್ಯಪಾತ್ರದಲ್ಲಿದ್ದಾರೆ. ಹಾಡೊಂದರಲ್ಲಿ ಬಾಲಿವುಡ್ ನಟಿ ಕಾಣಿಸಿಕೊಳ್ಳಲಿದ್ದಾರೆ ಎಂದು ಆರ್ ಚಂದ್ರು ತಿಳಿಸಿದ್ದಾರೆ.
ನಿರ್ದೇಶಕ R ಚಂದ್ರು ಸ್ಪಷ್ಟನೆ:
. ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಬಿಡುಗಡೆ ಮಾಡಲು ತಯಾರಿ ನಡೆಯುತ್ತಿದೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ಕಿಚ್ಚ ಸುದೀಪ್(Sudeep) ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸುದೀಪ್ ಲುಕ್ ಬಿಡುಗಡೆಯಾಗಿದ್ದು ಅಭಿಮಾನಿಗಳಿಂದ ಭಾರಿ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಕಬ್ಜ ಸಿನಿಮಾದಿಂದ ಕಿಚ್ಚ ಸುದೀಪ್ ಔಟ್ ಆಗಿದ್ದಾರೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಕೇಳಿಬರುತ್ತಿದ್ದು ಈ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ರ್ದೇಶಕ ಆರ್ ಚಂದ್ರು ವಿರುದ್ಧ ಮುನಿಸಿಕೊಂಡಿರುವ ಸುದೀಪ್ ಚಿತ್ರದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಮಾತು ಕೇಳಿಬಂದಿದೆ. ಆದರೀಗ ಈ ಬಗ್ಗೆ ನಿರ್ದೇಶಕ ಆರ್ ಚಂದ್ರು(R Chandru) ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಚಂದ್ರು, ಇದೆಲ್ಲ ವದಂತಿ ಅಷ್ಟೆ, ಸುದೀಪ್ ಸಿನಿಮಾದಿಂದ ಹೊರನಡೆದಿಲ್ಲ ಎಂದು ಹೇಳಿದ್ದಾರೆ. 'ಎಲ್ಲರಿಗೂ ನಮಸ್ಕಾರ, ನಿನ್ನೆಯಿಂದ ಸುದೀಪ್ ಅವರು ಕಬ್ಜ ಚಿತ್ರತಂಡದಿಂದ ಹೊರಗೆ ನಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ, ಆ ಸುದ್ದಿ ಸತ್ಯಕ್ಕೆ ದೂರವಾದದ್ದು. ಶ್ರೀ ಕಿಚ್ಚ ಸುದೀಪ್ ಅವರು ಈಗಾಗಲೇ ಕಬ್ಜ ಚಿತ್ರೀಕರಣದಲ್ಲಿ ಪಾಲ್ಗೊಂಡು ನಟಿಸಿದ್ದಾರೆ. ಹಾಗಾಗಿ ದಯವಿಟ್ಟು ಈ ರೀತಿಯ ಸುಳ್ಳು ಸುದ್ದಿಗೆ ಯಾರು ಕಿವಿ ಕೊಡಬಾರದು' ಎಂದು ಹೇಳಿದ್ದಾರೆ. ಆರ್ ಚಂದ್ರು ಪ್ರತಿಕ್ರಿಯೆ ಅಭಿಮಾನಿಗಳಲ್ಲಿದ್ದ ಗೊಂದಲಕ್ಕೆ ತೆರೆಎಳೆದಿದೆ.
ವದಂತಿ ಏನು?
ದೊಡ್ಡ ಮಟ್ಟದಲ್ಲಿ ಬರ್ತಿರುವ ಕಬ್ಜ ಸಿನಿಮಾದಲ್ಲಿ ದೊಡ್ಡ ಸ್ಟಾರ್ ಕಾಸ್ಟ್ ಇದೆ. ಕೊರೊನಾದಿಂದ ಸಿನಿಮಾ ಚಿತ್ರೀಕರಣ ತಡವಾಗಿದ್ದಲ್ಲದೇ ಉಪೇಂದ್ರ ಮತ್ತು ಕಿಚ್ಚ ಸುದೀಪ್ ಡೇಟ್ ಕ್ಲ್ಯಾಶ್ ಆಗಿದೆ. ಹಾಗಾಗಿ ಸಿನಿಮಾ ಬೇಗ ಮುಗಿಸಲು ಆರ್ ಚಂದ್ರುಗೆ ಸಮಸ್ಯೆಯಾಗಿದೆ. ಒತ್ತಡದಲ್ಲಿರುವ ಚಂದ್ರು ಸುದೀಪ್ ಅವರ ಕೆಲವು ಬಿಲ್ಡಪ್ ಶಾಟ್ ಗಳನ್ನು ಡೂಪ್ ಬಳಸಿ ಚಿತ್ರೀಕರಿಸಿದ್ದರಂತೆ. ಇದು ಸುದೀಪ್ ಗೆ ಗೊತ್ತಾಗುತ್ತಿದ್ದಂತೆ ಆರ್ ಚಂದ್ರು ವಿರುದ್ಧ ಗರಂ ಆಗಿದ್ದಾರೆ, ಅಲ್ಲದೆ ಸಿನಿಮಾದಿಂದನೇ ಹೊರನಡೆದಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.