ಶಾಸಕ ಸಿ ಪಿ ಯೋಗೇಶ್ವರ್ ಪುತ್ರ ಧ್ಯಾನ್‌ ಸಿನಿಮಾಗೆ ಎಂಟ್ರಿ; ಸಿಎಂ ಡಿಕೆ ಶಿವಕುಮಾರ್‌ ಆಶೀರ್ವಾದ

Published : Jul 05, 2026, 06:45 PM IST
Dhyan Yogeshwar DK Shivakumar

ಸಾರಾಂಶ

ಈ ಎರಡೂ ಬಹುನಿರೀಕ್ಷಿತ ಚಿತ್ರಗಳ ಜಂಟಿ ಮುಹೂರ್ತ ಸಮಾರಂಭವು ಇಂದು ಭಾನುವಾರ ಅತ್ಯಂತ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಗಮಿಸಿ ಚಿತ್ರದ ಮುುಹೂರ್ತಕ್ಕೆ ಚಾಲನೆ ನೀಡಿ ಹೀರೋ ಧ್ಯಾನ್ ಅವರಿಗೆ ಶುಭ ಹಾರೈಸಿದರು.

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿಪಿ ಯೋಗೇಶ್ವರ್‌ (CP Yogeshwar) ಪುತ್ರ ಧ್ಯಾನ್ (Dhyan Yogeshwar) ಕನ್ನಡ ಚಿತ್ರರಂಗಕ್ಕೆ ಹೊಸ ಹೀರೋ ಆಗಿ ಎಂಟ್ರಿಯಾಗಿದ್ದಾರೆ. ಧ್ಯಾನ್ ಅವರ ಚೊಚ್ಚಲ ಪ್ರವೇಶದಲ್ಲಿಯೇ ಒಟ್ಟೊಟ್ಟಿಗೆ ಎರಡು ಅದ್ದೂರಿ ಸಿನಿಮಾಗಳು ಘೋಷಣೆಯಾಗಿದ್ದು, ಎರಡೂ ಚಿತ್ರಗಳಲ್ಲಿ ತಂದೆ-ಮಗ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡಲಿರುವುದು ವಿಶೇಷ. ಇಂದು (05 July 2026) ನಡೆದ ಅದ್ದೂರಿ ಮುಹೂರ್ತ ಸಮಾರಂಭಕ್ಕೆ ಸಿಎಂ ಡಿಕೆ ಶಿವಕುಮಾರ್, ನಿರ್ದೇಶಕ ನಾಗಣ್ಣ, ಚಿತ್ರರಂಗ ಹಾಗೂ ರಾಜಕೀಯ ರಂಗದ ಗಣ್ಯರು ಸೇರಿದಂತೆ ಬಹಳಷ್ಟು ಮಹನೀಯರು ಹಾಜರಿದ್ದರು.

ಸಿಎಂ ಡಿ ಕೆ ಶಿವಕುಮಾರ್ ಚಾಲನೆ

ಈ ಎರಡೂ ಬಹುನಿರೀಕ್ಷಿತ ಚಿತ್ರಗಳ ಜಂಟಿ ಮುಹೂರ್ತ ಸಮಾರಂಭವು ಇಂದು ಭಾನುವಾರ ಅತ್ಯಂತ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಗಮಿಸಿ ಚಿತ್ರದ ಮುುಹೂರ್ತಕ್ಕೆ ಚಾಲನೆ ನೀಡಿ ಹೀರೋ ಧ್ಯಾನ್ ಅವರಿಗೆ ಶುಭ ಹಾರೈಸಿದರು. ಕೇಂದ್ರ ಸಚಿವರಾದ ವಿ. ಸೋಮಣ್ಣ ಸೇರಿದಂತೆ ರಾಜಕೀಯ ಹಾಗೂ ಚಿತ್ರರಂಗದ ಹಲವು ಗಣ್ಯರು, ಹಿತೈಷಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಧ್ಯಾನ್‌ ಸಿನಿಮಾಗೆ ನಾಗಣ್ಣ ನಿರ್ದೇಶನ

ಪಿ.ಎಂ.ಜಿ ಫಿಲಂ ಪ್ರೊಡಕ್ಷನ್ ಪ್ರೈ. ಲಿ. ಸಂಸ್ಥೆಯ ಬ್ಯಾನರ್ ಅಡಿಯಲ್ಲಿ ಧ್ಯಾನ್ ಯೋಗೇಶ್ವರ್ ಅವರನ್ನು ನಾಯಕನನ್ನಾಗಿ ಪರಿಚಯಿಸಲಾಗುತ್ತಿದೆ. ಹಿರಿಯ ನಿರ್ದೇಶಕ ನಾಗಣ್ಣ ಆ್ಯಕ್ಷನ್ ಕಟ್ ಹೇಳಲಿರುವ ಈ ಚಿತ್ರಕ್ಕೆ 'ಕರ್ಣಾಟಬಲಂ ಅಜೇಯಂ' (Karnata Balam Ajeyam) ಎಂದು ಹೆಸರಿಡಲಾಗಿದೆ. ಈ ಚಿತ್ರದ ಮೂಲಕ ಸಿ. ಪಿ. ಯೋಗೇಶ್ವರ್ ಅವರು ಸುಮಾರು 25 ವರ್ಷಗಳ ಸುದೀರ್ಘ ಬಿಡುವಿನ ಬಳಿಕ ಮತ್ತೆ ಬಣ್ಣದ ಪ್ರಪಂಚಕ್ಕೆ ಮರಳುತ್ತಿರುವುದು ವಿಶೇಷ.

ಚಿತ್ರದಲ್ಲಿ ಧ್ಯಾನ್ ಜೊತೆಗೆ ಯೋಗೇಶ್ವರ್ ಕೂಡ ಪ್ರಮುಖ ಪಾತ್ರದಲ್ಲಿದ್ದು, ಮಿಸ್ ಯೂನಿವರ್ಸ್ ಇಂಡಿಯಾ ಮಣಿಕ ವಿಶ್ವಕರ್ಮ, ಮಿಸ್ ಯೂನಿವರ್ಸ್ ಇಂಡಿಯಾ ರನ್ನರ್ ಅಪ್ ರೇಖಾ ಪಾಂಡೆ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಜಗಪತಿ ಬಾಬು ಪ್ರಮುಖ ತಾರಾಗಣದಲ್ಲಿದ್ದಾರೆ.

‘ಸೈನಿಕ’ ಸೀಕ್ವೆಲ್

ಸಿಪಿ ಯೋಗೇಶ್ವರ್ ಅವರ ಹೋಮ್ ಬ್ಯಾನರ್ 'ರಾಜಯೋಗಿ ಫಿಲಂಸ್' ಮೂಲಕ 25 ವರ್ಷಗಳ ಹಿಂದೆ ತೆರೆಕಂಡು ಸೂಪರ್ ಹಿಟ್ ಆಗಿದ್ದ 'ಸೈನಿಕ' ಚಿತ್ರದ ಮುಂದುವರಿದ ಭಾಗ 'ಸೈನಿಕ 2' ಚಿತ್ರವನ್ನೂ ಸಹ ಇದೇ ಸಂದರ್ಭದಲ್ಲಿ ಘೋಷಣೆ ಮಾಡಲಾಗಿದೆ. ಈ ಚಿತ್ರವನ್ನು ಪುನೀತ್ ರುದ್ರನಾಗ್ ನಿರ್ದೇಶಿಸಲಿದ್ದು, ಸಿಪಿ ಯೋಗೇಶ್ವರ್ ಹಾಗೂ ಪುತ್ರ ಧ್ಯಾನ್ ಇಬ್ಬರೂ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರದ ಮಿಕ್ಕ ತಾರಾಗಣದ ಬಗೆಗಿನ ಮಾಹಿತಿ ಇನ್ನಷ್ಟೇ ಹೊರಬೀಳಲಿದೆ.

Source: Kannada Prabha (ಕನ್ನಡ ಪ್ರಭ) 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ; ಸಿಎಂ ಜೊತೆ ಮಹತ್ವದ ಚರ್ಚೆ ನಡೆಸಿದ ನಟ