
ಬೆಂಗಳೂರು (ಫೆ. 24) ಒಂದು ಕಡೆ ಜಗ್ಗೇಶ್ ಮತ್ತು ದರ್ಶನ್ ನಡುವೆ ಹುಟ್ಟಿಕೊಂಡಿದ್ದ ಭಿನ್ನಾಭಿಪ್ರಾಯಗಳು ಕೊನೆಯಾಗಿವೆ. ಇನ್ನೊಂದು ಕಡೆ ಪೊಗರು ವಿವಾದ ಸಹ ಅಂತ್ಯವಾಗಿದೆ.
ನಂದ ಕಿಶೋರ್ ನಿರ್ದೇಶನದ 'ಪೊಗರು' ಸಿನಿಮಾದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಲಾಗಿದೆ ಎನ್ನುವ ದೊಡ್ಡ ಆರೋಪ ಕೇಳಿ ಬಂದಿತ್ತು. ಕೊನೆಗೆ ಚಿತ್ರತಂಡ ವಿವಾದಿತ ದೃಶ್ಯಗಳನ್ನು ಹಿಂದಕ್ಕೆ ಪಡೆದಿತ್ತು.
ಈ ನಡುವೆ ಸೋಶಿಯಲ್ ಮೀಡಿಯಾ ಮುಖೇನ ಅಭಿಮಾನಿಗಳ ಮುಂದೆ ಬಂದಿರುವ ನಾಯಕ ನಟ ಧ್ರುವ ಸರ್ಜಾ ಸಹ ಕ್ಷಮೆಯಾಚಿಸಿದ್ದಾರೆ. "ನಮ್ಮ ಇಡೀ ಕುಟುಂಬ ಹನುಮ ಭಕ್ತರು, ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ದತಿ ಆಚರಿಸುತ್ತಾ, ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿ ಬದುಕಿದ್ದೇವೆ.
ಯಾವೆಲ್ಲ ದೃಶ್ಯಗಳಿಗೆ ಪೊಗರು ಕತ್ತರಿ
ಕಲೆಯೇ ಧರ್ಮ, ನಾವು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ. ಚಿತ್ರದ ಕಥೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹಾ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ. ಈ ಕಾರಣಕ್ಕಾಗಿ ಬೇಷರತ್ ಕ್ಷಮೆ ಕೇಳುತ್ತೇನೆ' ಎಂದು ಬರೆದುಕೊಂಡಿದ್ದಾರೆ.
"ನಿಮಗೆ ಬೇಸರವಾಗಿರೋ ದೃಶ್ಯಗಳನ್ನು ಕತ್ತರಿಸಿದ್ದೇವೆ. ಮತ್ತೆ ಸೆನ್ಸಾರ್ ಆದಮೇಲೆ ನಿಮ್ಮೆದುರು ಮಾತನಾಡೋಣ ಎಂದು ನಾನೇ ನಿರ್ಧರಿಸಿದ್ದೆ. ಈಗ ಅದನ್ನು ಸರಿಪಡಿಸಲು ತಂತ್ರಜ್ಞರ ತಂಡ ಸಿದ್ದವಾಗಿದೆ.ನನ್ನ ಮನವಿಯನ್ನು ಪುರಸ್ಕರಿಸಿ ಎಂದಿನಂತೆ ನಿಮ್ಮ ಆಶೀರ್ವಾದವಿರಲಿ.. ಜೈ ಹನುಮಾನ್ ಎಂದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.