ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ 'ನಿದ್ರಾದೇವಿ Next Door'ಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್

Published : Feb 26, 2024, 04:25 PM ISTUpdated : Feb 26, 2024, 04:59 PM IST
ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ 'ನಿದ್ರಾದೇವಿ Next Door'ಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್

ಸಾರಾಂಶ

ಎರಡು ವರ್ಷದ ಹಿಂದೆಯೇ ನನಗೆ ನಿರ್ದೇಶಕರು ಸಿನಿಮಾದ ಕಥೆ ಹೇಳಿದ್ದರು. ಆಗ ಕ್ಯಾರಕ್ಟರ್ ಬೇರೆ ಇತ್ತು.  ಈಗ ಕ್ಯಾರೆಕ್ಟರ್ ಬೇರೆ ಇದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ...

ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ಮತ್ತೊಂದು ವಿಭಿನ್ನ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಬೆಂಗಳೂರಿನ ಬನಶಂಕರಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಪ್ರವೀರ್ ಶೆಟ್ಟಿಯ ಹೊಸ ಪ್ರಯತ್ನದ 'ನಿದ್ರಾದೇವಿ Next Door'ಗೆ ಸಾಥ್ ಕೊಟ್ಟರು. ಚಿತ್ರಕ್ಕೆ ಕ್ಲಾಪ್ ಮಾಡಿದ ಕನಸುಗಾರ ಇಡೀ ತಂಡಕ್ಕೆ ಶುಭ ಹಾರೈಸಿದರು.

ಯುವ ಪ್ರತಿಭೆ  ಸುರಾಗ್ ಸಾಗರ್  'ನಿದ್ರಾದೇವಿ Next Door'ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ರಿಷಿಕಾ ನಾಯಕ್ ಚಿತ್ರಕ್ಕೆ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಮುಹೂರ್ತ ಸಮಾರಂಭದ ಬಳಿಕ ಮಾತನಾಡಿದ ನಿರ್ದೇಶಕ ಸುರಾಗ್ ಸಾಗರ್, 'ರವಿ ಸರ್ ನಮ್ಮ ಸಿನಿಮಾಗೆ ಕ್ಲಾಪ್ ಮಾಡಿದ್ದು ಖುಷಿ ಕೊಟ್ಟಿದೆ. ಅವರು ವಿಭಿನ್ನ ಟೈಟಲ್ ಮೂಲಕ ಬರ್ತಾರೆ.  ನಮ್ಮ ಟೈಟಲ್ ಕೂಡ ವಿಭಿನ್ನವಾಗಿದೆ. ಇದು ಕಾಕತಾಳೀಯ' ಎಂದರು.  

ಕನ್ನಡದ 'ಕಿಸ್'​ ಚೆಲುವೆಗೆ ಕೂಡಿ ಬಂತಾ ಕಂಕಣ ಭಾಗ್ಯ; ಸ್ಟಾರ್ ಕುಟುಂಬಕ್ಕೆ ಸೊಸೆಯಾಗ್ತಾರಾ ಶ್ರೀಲೀಲಾ?

'ಇಬ್ಬರದೂ ನಿದ್ದೆ ಇಲ್ಲದರ ಜರ್ನಿ. ಅವ್ರಿಗೆ ಯಾಕೆ ನಿದ್ದೆ ಬರಲ್ಲ. ಇದಕ್ಕೆ ಪರಿಹಾರ ಏನು. ಅದರೊಳಗೆ ಅವರು ಕಂಡುಕೊಳ್ಳುವ ಲವ್ ಸ್ಟೋರಿ. ಇದಕ್ಕೆಲ್ಲಾ ಸಿನಿಮಾ ನೋಡಬೇಕು' ಎಂದರು. ನಿರ್ಮಾಪಕ ಜಯರಾಮ್ ದೇವಸಮುದ್ರ ಮಾತನಾಡಿ, 'ಪ್ರವೀಣ್ ಶೆಟ್ಟಿ ಅವರಿಗೋಸ್ಕರ್ ಈ ಪ್ರಾಜೆಕ್ಟ್ ಗೆ ಹಣ ಹಾಕುತ್ತಿದ್ದೇನೆ. ಕಥೆ ಬಹಳ ಚೆನ್ನಾಗಿದೆ. ನನಗೆ ಸುರಾಗ್ ಕಥೆ ಹೇಳಿದಾಗ ಫಸ್ಟ್ ಇಂಪ್ರೆಷನ್ ನಲ್ಲಿಯೇ ಇಷ್ಟವಾಯ್ತು. ಪ್ರತಿಯೊಬ್ಬರು ಲೈಫ್ ನಲ್ಲಿ ನಡೆಯುವ ಕೆಲ ಘಟನೆಗಳು ಜೀವನದಲ್ಲಿವೆ.  ಕಾಮಿಡಿ ಜೊತೆಗೆ ಒಂದು ಸಂದೇಶ ಚಿತ್ರದಲ್ಲಿದೆ' ಎಂದು ತಿಳಿಸಿದರು. 

ಕೆಟ್ಟ ಚಟಗಳಿಲ್ಲದ ಸಾಫ್ಟ್ ಫ್ಯಾಮಿಲಿ ಬಾಯ್; ಸಮಂತಾ ಮಾತಿಗೆ ಮುಗುಳ್ನಕ್ಕ ವಿಜಯ್ ದೇವರಕೊಂಡ

ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ, 'ನಿದ್ರೆ ಬರದಿರುವ ಹುಡುಗ ಏನೇನೂ ಕಷ್ಟಪಡುತ್ತಾನೆ. ಅದರ ಸುತ್ತ ನನ್ನ ಪಾತ್ರ ಸಾಗುತ್ತದೆ. ನನ್ನದು ಇಂಟ್ರೆಸ್ಟಿಂಗ್ ಪಾತ್ರ. ಈ ಹಿಂದಿನ ಚಿತ್ರಗಳಿಗೆ ಹೋಲಿಕೆ ಮಾಡಿದರೆ ಇದು ವಿಭಿನ್ನ ಪಾತ್ರ. ಕಳೆದೊಂದು ತಿಂಗಳಿನಿಂದ ರಿಹರ್ಸಲ್ ಮಾಡುತ್ತಿದ್ದೇವೆ' ಎಂದರು. 

ಕರ್ನಾಟಕದಲ್ಲಿದ್ದ ಜಮೀನು ಕಳೆದುಕೊಂಡ್ವಿ, ಚೆನ್ನೈನಲ್ಲಿ ಚಿಕ್ಕ ಮನೆಯಲ್ಲಿದ್ವಿ; ಎಸ್‌ಎಸ್‌ ರಾಜಮೌಳಿ

ನಾಯಕಿ ರಿಷಿಕಾ ನಾಯಕ್ ಮಾತನಾಡಿ, 'ಎರಡು ವರ್ಷದ ಹಿಂದೆಯೇ ನನಗೆ ನಿರ್ದೇಶಕರು ಸಿನಿಮಾದ ಕಥೆ ಹೇಳಿದ್ದರು. ಆಗ ಕ್ಯಾರಕ್ಟರ್ ಬೇರೆ ಇತ್ತು.  ಈಗ ಕ್ಯಾರೆಕ್ಟರ್ ಬೇರೆ ಇದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ' ಎಂದು ತಿಳಿಸಿದರು.

ಸದ್ಯದಲ್ಲೇ 'ಶಿವ'ನಾಗಿ ಬರಲಿದ್ದಾರೆ ಪ್ರಭಾಸ್; ಪಾರ್ವತಿಯಾಗಿ ಮಿಂಚಲಿದ್ದಾರಾ ಕಂಗನಾ ರಣಾವತ್?

ಯುರೋಪ್ ನ ಪ್ರೇಗ್ ಫಿಲ್ಮ್ ಸ್ಕೂಲ್ನಲ್ಲಿ ನಿರ್ದೇಶಕ ಪಟು ಕಲಿತಿರುವ ಸುರಾಗ್ ಸಾಗರ್ ಎಂಟ್ರೋಪಿ ಕಿರುಚಿತ್ರದ ಮೂಲಕ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಇದೀಗ ಸುರಾಗ್ 'ನಿದ್ರಾದೇವಿ Next Door'ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು, ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಗಳದಲ್ಲಿ ಇದ್ದಾರೆ.

ನಟ ವಿನೋದ್ ರಾಜ್ ಮದುವೆ ಗುಟ್ಟಾಗಿ ಇಟ್ಟಿದ್ದು ಯಾಕೆ; ಸ್ಪಷ್ಟ ಉತ್ತರ ಇಲ್ಲಿದೆ ನೋಡಿ!

ರಾಜು ಬೋನಗಾನಿ ಅವರ ರೋಡಿಯಂ ಎಂಟರ್‌ಟೈನ್‌ಮೆಂಟ್ ಸಹಯೋಗದೊಂದಿಗೆ ಸೂರಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸಿರುವ ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ. ಈ ತಿಂಗಳಾತ್ಯಂತಕ್ಕೆ 'ನಿದ್ರಾದೇವಿ Next Door'ತಂಡ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್