ಫೋಟೋ ಜೊತೆ ನಿಂತ ಪ್ರಕಾಶ್ ರಾಜ್; ನಿರ್ದಿಗಂತ ಮೂಲಕ ಎಂಥ ಕಥೆಯನ್ನು ಪ್ರೆಸೆಂಟ್ ಮಾಡ್ತಿದ್ದಾರೆ ನೋಡ್ರಿ!

Published : Feb 14, 2024, 12:44 PM ISTUpdated : Feb 14, 2024, 05:57 PM IST
ಫೋಟೋ ಜೊತೆ ನಿಂತ ಪ್ರಕಾಶ್ ರಾಜ್; ನಿರ್ದಿಗಂತ ಮೂಲಕ ಎಂಥ ಕಥೆಯನ್ನು ಪ್ರೆಸೆಂಟ್ ಮಾಡ್ತಿದ್ದಾರೆ ನೋಡ್ರಿ!

ಸಾರಾಂಶ

ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದ ಫೋಟೋ ಸಿನಿಮಾ ಸದ್ಯದಲ್ಲೇ ತೆರೆಗೆ ಬರ್ತಿದೆ. ಕೋವಿಡ್ ಸಮಯದ ಕಥೆಗೀಗ ಜೊತೆಯಾಗಿದ್ದಾರೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್ .

ಕನ್ನಡ ಸಿನಿಮಾರಂಗವೀಗ ಬೇರೆಯದ್ದೇ ದಿಕ್ಕಿಗೆ ಹೊರಳಿದೆ. ಸೋಲು ಗೆಲುವಿನಾಚೆ ಲೆಕ್ಕಚಾರ ಹಾಕಿದರೂ ಹೊಸ ಹುರುಪು, ಹೊಸ ಹರಿವು, ಹೊಸ ಆಲೋಚನೆಗಳಿಂದ ಬೇರೆಯದ್ದೇ ಆಯಾಮ ಪಡೆದಿದೆ. ಅದರ ಮುಂದುವರೆದ ಭಾಗವಾಗಿ ಗೋಚರಿಸುತ್ತಿರುವ ಚಿತ್ರ ಫೋಟೋ..ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದ ಫೋಟೋ ಸಿನಿಮಾ ಸದ್ಯದಲ್ಲೇ ತೆರೆಗೆ ಬರ್ತಿದೆ. ಕೋವಿಡ್ ಸಮಯದ ಕಥೆಗೀಗ ಜೊತೆಯಾಗಿದ್ದಾರೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್ (Prakash Raj) .

ಫೋಟೋ ಸಿನಿಮಾವನ್ನು 'ನಿರ್ದಿಗಂತ'ದ ಮೂಲಕ (Prakash Rai) ಪ್ರಕಾಶ್ ರೈ (ರಾಜ್) ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಮೂಲಕ ಹೈದ್ರಾಬಾದ್ ಕರ್ನಾಟಕದ ಕಥೆಗೆ ನಿರ್ದಿಗಂತ ಜೊತೆಯಾಗಿ ನಿಂತಿದೆ. ರಾಯಚೂರು‌ ಮೂಲದ ಯುವ ಪ್ರತಿಭೆ ಉತ್ಸವ್ ಗೋನವಾರ ಚೊಚ್ಚಲ ಪ್ರಯತ್ನ ಫೋಟೋ. ಕಳೆದ ಏಳು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿರುವ ಅವರು ಈ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟು ಸ್ವಾತಂತ್ರ್ಯ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ಅಯ್ಯೋ, ನಟ ನಾನಿಗೆ ಹುಚ್ಚ ಅಂದಿದ್ಯಾಕೆ; ಪವರ್ ಕಟ್ ಆದ್ರೆ ಹಾಗೆಲ್ಲಾ ಮಾಡ್ತಿದ್ರಾ 'ಈಗ' ನಟ!

ಲಾಕ್‌ಡೌನ್‌ ಸಮಯದಲ್ಲಿ ನಡೆದ ಕಥೆ ಸುತ್ತ ಫೋಟೋ ಸಿನಿಮಾ ಸಾಗುತ್ತದೆ. ಅಪ್ಪ‌-ಮಗನ ಬಾಂಧವ್ಯ, ಭಾವನಾತ್ಮಕ ಎಳೆ ಇಟ್ಟುಕೊಂಡು  ಹಲವು ವಿಷಯಗಳನ್ನು ಬಹಳ ನೈಜವಾಗಿ ಮನಸ್ಸಿಗೆ ನಾಟುವಂತೆ ಕಟ್ಟುಕೊಟ್ಟಿದ್ದಾರೆ ನಿರ್ದೇಶಕ ಉತ್ಸವ್. 

ರಾಕ್‌ಲೈನ್ ವೆಂಕಟೇಶ್ ನನ್ನ ಹಿಂದಿರುವ ನಿಜವಾದ ದೊಡ್ಡ ಶಕ್ತಿ; ಸುಮಲತಾ ಅಂಬರೀಷ್

ಮಸಾರಿ ಟಾಕೀಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಫೋಟೋ ಸಿನಿಮಾದಲ್ಲಿ ಮಹಾದೇವ ಹಡಪದ್, ಸಂಧ್ಯಾ ಅರಕೆರೆ, ಜಹಾಂಗೀರ್, ಮತ್ತು ವೀರೇಶ್ ಗೊನ್ವಾರ್ ನಟಿಸಿದ್ದಾರೆ. ಚಿತ್ರಕ್ಕೆ ದಿನೇಶ್ ದಿವಾಕರನ್ ಅವರ ಛಾಯಾಗ್ರಹಣ ಮತ್ತು ರವಿ ಹಿರೇಮಠ್ ಅವರ ಶಬ್ದ ವಿನ್ಯಾಸ, ಶಿವರಾಜ್ ಮೆಹೂ ಸಂಕಲನದ ಶ್ರಮ ಚಿತ್ರಕ್ಕಿದೆ.

ಸಾಯುವುದಕ್ಕೆ ಎರಡು ದಶಕಗಳ ಮೊದಲೇ ಸಾವಿನ ಬಾಗಿಲು ತಟ್ಟಿ ಬಂದಿದ್ದರು ನಟ ವಿಷ್ಣುವರ್ಧನ್!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ಧಂ' ಬೇಕಲೇ ಎಂದಿದ್ದ ದರ್ಶನ್‌ಗೆ ಟಾಂಗ್ ಕೊಟ್ರಾ ಸುದೀಪ್? ಏನಿದು ಮಾರ್ಕ್ ಡೈಲಾಗ್ ಮರ್ಮ?
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!