1000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಡೆವಿಲ್ ರಿಲೀಸ್: ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್‌

Published : Dec 11, 2025, 09:09 AM IST
Devil

ಸಾರಾಂಶ

ದರ್ಶನ್‌ ನಟನೆಯ ‘ದಿ ಡೆವಿಲ್‌’ ಇಂದು 1000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದ್ದು, ಬೆಳಿಗ್ಗೆ 6.05 ನಿಮಿಷಕ್ಕೆ ಮೊದಲ ಪ್ರದರ್ಶನ ಆರಂಭವಾಗಲಿದೆ. ಒಂದು ದಿನದಲ್ಲಿ ಸುಮಾರು 200 ಪ್ರದರ್ಶನ ಕಾಣುವ ಸಾಧ್ಯತೆ ಇದೆ.

ದರ್ಶನ್‌ ನಟನೆಯ ‘ದಿ ಡೆವಿಲ್‌’ ಇಂದು 1000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದ್ದು, ಬೆಳಿಗ್ಗೆ 6.05 ನಿಮಿಷಕ್ಕೆ ಮೊದಲ ಪ್ರದರ್ಶನ ಆರಂಭವಾಗಲಿದೆ. ಒಂದು ದಿನದಲ್ಲಿ ಸುಮಾರು 200 ಪ್ರದರ್ಶನ ಕಾಣುವ ಸಾಧ್ಯತೆ ಇದೆ. ಬೆಂಗಳೂರಿನ ಮಾಲ್‌ ಆಫ್‌ ಏಷ್ಯಾದಲ್ಲಿಯೇ ಸುಮಾರು 33 ಪ್ರದರ್ಶನಗಳನ್ನು ನಿಗದಿಪಡಿಸಲಾಗಿದೆ. ನಾಲ್ಕು ದಿನಗಳ ಹಿಂದೆಯೇ ಸಿಂಗಲ್‌ ಸ್ಕ್ರೀನ್‌ಗಳಿಗೆ ಮುಂಗಡ ಬುಕಿಂಗ್‌ ಆರಂಭವಾಗಿದ್ದರೂ ಮಲ್ಟಿಪ್ಲೆಕ್ಸ್‌ಗಳಲ್ಲಿ ನಿನ್ನೆ ಮಧ್ಯಾಹ್ನ 3.30ರ ಸುಮಾರಿಗಷ್ಟೇ ಬುಕಿಂಗ್‌ ತೆರೆಯಲಾಗಿದೆ. ಡೆವಿಲ್‌ ಸಿನಿಮಾಗೆ ನಿರೀಕ್ಷೆ ಹೆಚ್ಚಿರುವುದರಿಂದ ಗರಿಷ್ಠ ಟಿಕೆಟ್‌ ದರ 1200 ರು. ಇಡಲಾಗಿದೆ. ಈ ಸಿನಿಮಾ ಅವಧಿ 2 ಗಂಟೆ 49 ನಿಮಿಷ ಇದೆ.

ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಇಂದು ನರ್ತಕಿ ಥೇಟರಿನಲ್ಲಿ ಅಭಿಮಾನಿಗಳೊಂದಿಗೆ ಮೊದಲ ಪ್ರದರ್ಶನ ವೀಕ್ಷಿಸಲಿದ್ದಾರೆ. ಬೆಂಗಳೂರಿನ ಹಲವು ಚಿತ್ರಮಂದಿರಗಳಲ್ಲಿ ದರ್ಶನ್‌ ಬೃಹತ್‌ ಕಟೌಟ್‌ ನಿಲ್ಲಿಸಲಾಗಿದ್ದು, ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಲಾಗಿದೆ. ಸಿದ್ದೇಶ್ವರ ಚಿತ್ರಮಂದಿರದಲ್ಲಿ ಚಾಮುಂಡೇಶ್ವರಿ ದೇವಿಯ ಮೂರ್ತಿ ತಂದು ಪೂಜೆ ಸಲ್ಲಿಸಲಾಗಿದೆ. ಶಿವರಾಜ್‌ ಕುಮಾರ್‌, ರಿಷಬ್‌ ಶೆಟ್ಟಿ, ಜೋಗಿ ಪ್ರೇಮ್‌ ಸೇರಿದಂತೆ ಸೆಲೆಬ್ರಿಟಿಗಳು ದರ್ಶನ್‌ ಸಿನಿಮಾ ಬೆಂಬಲಿಸಿದ್ದಾರೆ.

ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್‌

ಈ ಸಂದರ್ಭದಲ್ಲಿ ದರ್ಶನ್‌ ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ‘ನನ್ನ ಪ್ರೀತಿಯ ಸೆಲೆಬ್ರಿಟೀಸ್‌, ನಿಮಗೆ ನೇರವಾಗಿ ಹೃದಯದಿಂದ ಈ ಸಂದೇಶ ನೀಡುತ್ತಿದ್ದೇನೆ. ನಿಮ್ಮ ಪ್ರತೀ ಸಂದೇಶವೂ ಪತ್ನಿ ವಿಜಿ ಮೂಲಕ ನನ್ನನ್ನು ತಲುಪುತ್ತಿದೆ. ನೀವು ಯಾವುದೇ ಗಾಳಿ ಸುದ್ದಿ, ವದಂತಿ, ನೆಗೆಟಿವ್‌ ವಿಚಾರಗಳಿಂದ ನಿಮ್ಮ ಹೃದಯಕ್ಕೆ ಘಾಸಿ ಮಾಡಿಕೊಳ್ಳಬೇಡಿ. ನೀವು ನನ್ನ ಮೇಲಿಟ್ಟಿರುವ ನಂಬಿಕೆಯಿಂದಲೇ ನಾನಿವತ್ತು ಗಟ್ಟಿಯಾಗಿ ನಿಲ್ಲುವುದು ಸಾಧ್ಯವಾಗಿದೆ. ನನ್ನ ನೀವೇ ನನ್ನ ಶಕ್ತಿ, ನೀವೇ ನನ್ನ ಕುಟುಂಬ. ಬದುಕಿನ ಈ ಹಂತದಲ್ಲಿ ನನ್ನ ಅತೀ ದೊಡ್ಡ ಶಕ್ತಿಯಾಗಿರುವಿರಿ. ಬೇಸರ ಮಾಡಿಕೊಳ್ಳದೇ ನಿಮ್ಮ ಶಕ್ತಿ, ಎನರ್ಜಿಯನ್ನು ಡೆವಿಲ್‌ ಸಿನಿಮಾಕ್ಕೆ ನೀಡಿರಿ’ ಎಂದು ಹೇಳಿದ್ದಾರೆ.

‘ನಾನು ನಾನಾಗಿರುವುದಕ್ಕೆ ಕಾರಣ ನೀವು. ನೀವು ನನ್ನ ಮೇಲಿಟ್ಟಿರುವ ನಂಬಿಕೆ, ಅಗಾಧ ಪ್ರೀತಿಯನ್ನು ಡೆವಿಲ್‌ ಸಿನಿಮಾ ಮೇಲೂ ಇಡುತ್ತೀರಿ ಅಂತ ತಿಳಿದಿದೆ. ನಿಮ್ಮನ್ನು ಮತ್ತೆ ನೋಡಲು ಕಾತರದಿಂದಿದ್ದೇನೆ. ನೀವು ಗೋಡೆಯಂತೆ ನನ್ನ ಸುತ್ತ ನಿಂತಿರುವಾಗ ನಿಮ್ಮ ಕಣ್ಣುಗಳನ್ನೇ ದಿಟ್ಟಿಸಿ ಕೃತಜ್ಞತೆ ಸಲ್ಲಿಸುವ ದಿನಕ್ಕೆ ಎದುರು ನೋಡುತ್ತಿದ್ದೇನೆ. ನೀವು ನನ್ನನ್ನು ನಂಬಿದಂತೆ, ನಾನು ನಿಮ್ಮನ್ನು ನಂಬುತ್ತೇನೆ. ಕಾಲ ಬಂದಾಗ ಸತ್ಯದ ಅರಿವು ಆಗಲೇ ಬೇಕು. ಅಲ್ಲಿಯವರೆಗೆ ಹೃದಯ, ಮನಸ್ಸು ಗಟ್ಟಿ ಮಾಡಿಕೊಂಡಿರಿ. ನಿಮ್ಮ ಪ್ರೀತಿ ಎಂದೂ ಅಲುಗಾಡದಂತಿರಲಿ’ ಎಂದೂ ದರ್ಶನ್‌ ಹೇಳಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಶಿರಡಿ ಸಾಯಿಬಾಬಾಗೆ ಬಲು ದುಬಾರಿಯ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ: ಕಾರಣವೂ ರಿವೀಲ್​!
34th Wedding Anniversary : ಅಂಬಿ ನೆನಪಲ್ಲಿ ಸುಮಲತಾ ಭಾವನಾತ್ಮಕ ಪೋಸ್ಟ್