ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್; ಮಾ.12ರಿಂದ ಮೈಸೂರಿನಲ್ಲಿ 4 ದಿನ ಡವಿಲ್ ಚಿತ್ರೀಕರಣಕ್ಕೆ ಅನುಮತಿ!

Published : Mar 11, 2025, 01:08 PM ISTUpdated : Mar 11, 2025, 02:00 PM IST
ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್; ಮಾ.12ರಿಂದ ಮೈಸೂರಿನಲ್ಲಿ 4 ದಿನ ಡವಿಲ್ ಚಿತ್ರೀಕರಣಕ್ಕೆ ಅನುಮತಿ!

ಸಾರಾಂಶ

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಂತರ ಮೈಸೂರಿನಲ್ಲಿ "ಡೆವಿಲ್" ಚಿತ್ರದ ಚಿತ್ರೀಕರಣಕ್ಕೆ ಮರಳಿದ್ದಾರೆ. ಮಾರ್ಚ್ 12 ರಿಂದ 15 ರವರೆಗೆ ಚಿತ್ರೀಕರಣ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಡಿಸಿಪಿ ಮುತ್ತುರಾಜ್ ಅನುಮತಿ ನೀಡಿದ್ದಾರೆ. ಸರ್ಕಾರಿ ಅತಿಥಿ ಗೃಹ ಮತ್ತು ಲಲಿತಮಹಲ್ ಅರಮನೆಯಲ್ಲಿ ಚಿತ್ರೀಕರಣ ನಡೆಯಲಿದ್ದು, ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಅವಕಾಶವಿದೆ. ಭದ್ರತೆಗಾಗಿ 32 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಚಿತ್ರತಂಡ 1.64 ಲಕ್ಷ ರೂ. ಪಾವತಿಸಿದೆ.

ಮೈಸೂರು (ಮಾ.11): ಕನ್ನಡ ಚಿತ್ರರಂಗದ ನಟ ದರ್ಶನ್ ತೂಗುದೀಪ ಅವರಿಂದ ಅಭಿಮಾನಿಳಿಗೆ ಶುಭ ಸುದ್ದಿಯೊಂದು ಹೊರಬಿದ್ದಿದೆ. ನಟ ದರ್ಶನ್ ಇದೇ ಮಾ.12ರಿಂದ ಮಾ.15ರವರೆಗೆ ಡೆವಿಲ್ ಸಿನಿಮಾ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುವುದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿದೆ. ಮೈಸೂರಿನಲ್ಲಿ ಚಿತ್ರೀಕರಣ ಮಾಡುವ ವೇಳೆ 32 ಜನ ಪೊಲೀಸ್ ಸಿಬ್ಬಂದಿ ಕಣ್ಗಾವಲಿಗೆ ನಿಯೋಜನೆ ಮಾಡಲಾಗಿದೆ.

ಮೈಸೂರಿನಲ್ಲಿ ಡೆವಿಲ್ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ತಂಗಿದ್ದ ನಟ ದರ್ಶನ್ ತೂಗುದೀಪ ಅವರನ್ನು ಪೊಲೀಸರು ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಪೊಲೀಸರು ಹೋಟೆಲ್‌ನಿಂದಲೇ ಬಂಧಿಸಿ ಕರೆದೊಯ್ದಿದ್ದರು. ಈವರೆಗೆ ಸುಮಾರು ಒಂದೂವರೆ ವರ್ಷಗಳ ಕಾಲ ನಟ ದರ್ಶನ್ ಕೊಲೆ ಕೇಸಿನ ವಿಚಾರಣೆ, ನ್ಯಾಯಾಂಗ ಬಂಧನ, ಜೈಲು ಶಿಕ್ಷೆ, ಕೋರ್ಟ್‌ಗೆ ಅಲೆದಾಡುವುದು ಸೇರಿದಂತೆ ಸಮಯ ಕಳೆದಿದ್ದಾರೆ. ಆದರೆ, ನಟ ದರ್ಶನ್ ಜೈಲು ಸೇರಿದ್ದರಿಂದ ಅವರೊಂದಿಗೆ ಸಿನಿಮಾ ಮಾಡುವುದಕ್ಕೆ ಹಣ ಹೂಡಿಕೆ ಮಾಡಿದ್ದ ಡೆವಿಲ್ ಸಿನಿಮಾ ನಿರ್ಮಾಪಕರು ಕಂಗಾಲಾಗಿದ್ದರು. ಇನ್ನು ಅಭಿಮಾನಿಗಳು ಕೂಡ ತೀವ್ರ ನಿರಾಸೆ ಅನುಭವಿಸಿದ್ದರು. ಇದೀಗ ನಟ ದರ್ಶನ್‌ಗೆ ನಾಲ್ಕು ದಿನಗಳ ಕಾಲ ಡೆವಿಲ್ ಸಿನಿಮಾ ಶೂಟಿಂಗ್‌ನಲ್ಲಿ ಮೈಸೂರಿನಲ್ಲಿ ಭಾಗವಹಿಸಲು ಅನುಮತಿ ಸಿಕ್ಕಿದೆ.

ದರ್ಶನ್‌ ಡೆವಿಲ್ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ಪ್ಯಾಕಪ್ ಆಗಿದ್ದು, ಇದೀಗ ಪುನಃ ಮೈಸೂರಿನಲ್ಲೇ ಶೂಟಿಂಗ್ ಪುನಾರಂಭ ಆಗಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಮತ್ತೆ ಶೂಟಿಂಗ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಈಗ ಜೈಲಿಂದ ಜಾಮೀನಿನ ಮೇಲೆ ಹೊರಬಂದ ಬಳಿಕ ಮತ್ತೆ ಮೈಸೂರಿನಲ್ಲಿ ಮಾ.12 ರಿಂದ ಮಾ.15 ರವರೆಗೆ ಡೆವಿಲ್ ಸಿನಿಮಾ ಶೂಟಿಂಗ್‌ನಲ್ಲಿ ಕೆಲಸ ಮಾಡಲಿದ್ದಾರೆ. ಇನ್ನು ಸಿನಿಮಾ ಚಿತ್ರೀಕರಣ ಮಾಡುವುದಕ್ಕೆ ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಅವರಿಂದ ಅನುಮತಿ ಸಿಕ್ಕಿದೆ.

ಇದನ್ನೂ ಓದಿ: 'ದಿ ಡೆವಿಲ್' ಸೆಕೆಂಡ್ ಶೆಡ್ಯೂಲ್ ಶುರು, ಮುಂದಿನವಾರ ದರ್ಶನ್ ಶೂಟಿಂಗ್‌ನಲ್ಲಿ ಭಾಗಿ!

ಮಾ.12 ರಿಂದ ಮಾ.14 ರ ವರೆಗೆ ಸರ್ಕಾರಿ ಅಥಿತಿ ಗೃಹದಲ್ಲಿ ಡೆವಿಲ್ ಶೂಟಿಂಗ್ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೂಟಿಂಹಗ್ ಮಾಡಲು ಅನುಮತಿ ಕೊಡಲಾಗಿದೆ. ಇನ್ನು ರಾತ್ರಿ, ತಡರಾತ್ರಿಯಲ್ಲಿ ಶೂಟಿಂಗ್ ಮಾಡುವಂತಿಲ್ಲ. ಜೊತೆಗೆ, ಮಾ.15ರಂದು ಮಾತ್ರ ಲಲಿತಮಹಲ್ ಪ್ಯಾಲೇಸ್‌ನಲ್ಲಿ ಬೆಳಿಗ್ಗೆ 7ಗಂಟೆಯಿಂದ ರಾತ್ರಿ9 ಗಂಟೆವರೆಗೂ ಶೂಟಿಂಗ್ ಮಾಡುವುದಕ್ಕೆ ಪರ್ಮಿಷನ್ ನೀಡಲಾಗಿದೆ. ಇನ್ನು ಡೆವಿಲ್ ಸಿನಿಮಾ ಚಿತ್ರೀಕರಣದ ವೇಳೆ ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಈ ಪೊಲೀಸರು ಚಿತ್ರೀಕರಣದ ವೇಳೆ ದರ್ಶನ್ ಹಾಗೂ ಚಿತ್ರತಂಡಕ್ಕೆ ಭದ್ರತೆ ಒದಗಿಸಲಿದೆ. ಇನ್ನು ಡೆವಿಲ್ ಚಿತ್ರತಂಡವು ಪೊಲೀಸರ ಭದ್ರತೆ ಪಡೆಯಲು 1.64 ಲಕ್ಷ ಹಣ ಪಾವತಿ ಮಾಡಲಾಗಿದೆ.

ಇದನ್ನೂ ಓದಿ: ದರ್ಶನ್‌ ಬಗ್ಗೆ ರಮ್ಯಾ 'ನೋ ಕಾಮೆಂಟ್ಸ್'.. ಹಳೆಯ ಟ್ವೀಟ್ ಮರೆಯದ ನೆಟ್ಟಿಗರ ಟ್ರೋಲ್‌ ರಗಳೆ..!?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ