ಪತ್ನಿಯೊಂದಿಗೆ ಚಾಮುಂಡಿ ತಾಯಿ ದರ್ಶನ ಪಡೆದ ನಟ ದರ್ಶನ್: ಭಕ್ತ ಸಾಗರದ ಮಧ್ಯೆ ವಿಶೇಷ ಪೂಜೆ ಸಲ್ಲಿಕೆ

Published : Jul 04, 2025, 09:43 AM IST
darshan

ಸಾರಾಂಶ

ಆಷಾಢ ಮಾಸದ ಎರಡನೇ ಶುಕ್ರವಾರದಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ದಂಪತಿ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದು ವಾಪಸ್ ಆಗಿದ್ದಾರೆ.

ಮೈಸೂರು (ಜು.04): ಆಷಾಢ ಮಾಸದ ಎರಡನೇ ಶುಕ್ರವಾರದಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ದಂಪತಿ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದು ವಾಪಸ್ ಆಗಿದ್ದಾರೆ. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್‌ ನೀಡಿದ್ದಾರೆ. ಪ್ರತಿ ವರ್ಷವೂ ಆಷಾಢದಲ್ಲಿ ದರ್ಶನ್ ಚಾಮುಂಡಿಯ ಆಶೀರ್ವಾದ ಪಡೆಯುತ್ತಾರೆ. ಕಳೆದ ಬಾರಿ ಜೈಲಿನಲ್ಲಿದ್ದ ಕಾರಣ ದೇವಿಯ ದರ್ಶನ ಮಾಡಿರಲಿಲ್ಲ. ಹಾಗಾಗಿ ಇಂದು ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ಭೇಟಿ ನೀಡಿದ್ದರು. ದೇವಸ್ಥಾನಕ್ಕೆ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ: ಬೆಳಗ್ಗೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯುತ್ತಿದ್ದು, ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರವೇ ಹರಿದು ಬಂದಿದೆ. ಗರ್ಭ ಗುಡಿಯ ಚಾಮುಂಡಿ ತಾಯಿ ಲಕ್ಷ್ಮೀ ಅಲಂಕಾರದಿಂದ‌ ಕಂಗೊಳಿಸುತ್ತಿದೆ. ಬೆಳಗ್ಗೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಮಾಡಲಾಗುತ್ತಿದ್ದು, ಸರತಿ ಸಾಲಿನಲ್ಲಿ ಭಕ್ತರು ನಿಂತು ತಾಯಿ ದರ್ಶನ ಪಡೆಯುತ್ತಿದ್ದಾರೆ. ಮುಂಜಾನೇ 5 ಗಂಟೆಯಿಂದ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಿಲಾಗಿದ್ದು, ವಿವಿಧ ಬಗೆಯ ಹೂ ಹಾಗೂ ಮಾವಿನ ಕಾಯಿಯಿಂದ ದೇವಾಲಯದ ಆವರಣವನ್ನು ಅಲಂಕಾರ ಮಾಡಲಾಗಿದೆ.

ಮೆಟ್ಟಲು ಮೂಲಕ ಬೆಟ್ಟ ಹತ್ತಿ ಬಂದರೇ ನೇರ ದರ್ಶನದ ವ್ಯವಸ್ಥೆಯನ್ನು ಇದೀಗ ಜಿಲ್ಲಾಡಳಿತ ರದ್ದುಗೊಳಿಸಿದೆ. ಇನ್ನು ಕಳೆದ ವಾರ ಮೆಟ್ಟಿಲುಗಳು ಮೂಲಕವೇ 60 ರಿಂದ 70 ಸಾವಿರ ಬಂದ ಕಾರಣ ಸಾಕಷ್ಟು ಗೊಂದಲಗಳಾಗಿತ್ತು. ಈ ಬಾರಿ ಬೆಳಗ್ಗೆ 5 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಬರಲು ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ 300 ರೂಪಾಯಿ, 2000 ರೂಪಾಯಿ ಟಿಕೇಟ್ ವ್ಯವಸ್ಥೆಯನ್ನು ಕಲ್ಪಿಸಲಾಆಗಿದ್ದು, ಬ್ಯಾರಿಕೇಡ್ ಅಳವಡಿಸಿ ಪ್ರತ್ಯೇಕ ಸರತಿ ಸಾಲುಗಳನ್ನು ಸೃಷ್ಟಿಸಿ ನೂಕು ನುಗ್ಗಲನ್ನು ಪೊಲೀಸರು ನಿಯಂತ್ರಿಸುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ದೈವದ ಮಾತು ನಿಜವಾಯ್ತು, ಹರಕೆ ತೀರಿಸಲು ದಂಪತಿ ಸಮೇತ ಬಂದ ರಿಷಬ್ ಶೆಟ್ಟಿ
ಯಶ್- ರಾಧಿಕಾ ಪುತ್ರಿಗೆ 7 ವರ್ಷಗಳ ಸಂಭ್ರಮ: ಹುಟ್ಟುಹಬ್ಬದ ಕ್ಯೂಟ್​ ಫೋಟೋಗಳು ಇಲ್ಲಿವೆ