ದೀಕ್ಷಿತ್ ಶೆಟ್ಟಿ ಜೊತೆ ನಟಿ ಬೃಂದಾ ಆಚಾರ್ಯ ಕಂಡಿದ್ದೆಲ್ಲಿ? ಅಸಲಿ ಕತೆಯೇನು?

Published : Apr 18, 2025, 05:41 PM ISTUpdated : Apr 18, 2025, 05:50 PM IST
ದೀಕ್ಷಿತ್ ಶೆಟ್ಟಿ ಜೊತೆ ನಟಿ ಬೃಂದಾ ಆಚಾರ್ಯ ಕಂಡಿದ್ದೆಲ್ಲಿ? ಅಸಲಿ ಕತೆಯೇನು?

ಸಾರಾಂಶ

ದೀಕ್ಷಿತ್ ಶೆಟ್ಟಿ ನಾಯಕರಾಗಿ ಮತ್ತು ಬೃಂದಾ ಆಚಾರ್ಯ ನಾಯಕಿಯಾಗಿ ನಟಿಸಿರುವ, ಅಭಿಷೇಕ್ ಎಂ ನಿರ್ದೇಶನದ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾದ ‘ಹರ ಓಂ’ ಎಂಬ ಶಿವನ ಹಾಡು ಎಂಆರ್‌ಟಿ ಮ್ಯೂಸಿಕ್ (ಲಹರಿ) ಮೂಲಕ ಬಿಡುಗಡೆಯಾಗಿದೆ. 

ದೀಕ್ಷಿತ್ ಶೆಟ್ಟಿ ನಾಯಕರಾಗಿ ಮತ್ತು ಬೃಂದಾ ಆಚಾರ್ಯ ನಾಯಕಿಯಾಗಿ ನಟಿಸಿರುವ, ಅಭಿಷೇಕ್ ಎಂ ನಿರ್ದೇಶನದ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾದ ‘ಹರ ಓಂ’ ಎಂಬ ಶಿವನ ಹಾಡು ಎಂಆರ್‌ಟಿ ಮ್ಯೂಸಿಕ್ (ಲಹರಿ) ಮೂಲಕ ಬಿಡುಗಡೆಯಾಗಿದೆ. ಲಹರಿ ವೇಲು ಈ ಹಾಡು ಬಿಡುಗಡೆ ಮಾಡಿದ್ದಾರೆ. ‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್ ಈ ಸಿನಿಮಾ ನಿರ್ಮಿಸಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿರುವ ಈ ಹಾಡಿಗೆ ನಾಗಾರ್ಜುನ ಶರ್ಮ ಗೀತ ರಚನೆ ಮಾಡಿದ್ದಾರೆ. 

ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ಹಾಡು ಸಹ ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಕನ್ನಡದಲ್ಲಿ ಶಿಲ್ಪ ಹಾಗೂ ತೆಲುಗಿನಲ್ಲಿ ಮಂಗ್ಲಿ ಹಾಡಿದ್ದಾರೆ. ನಿರ್ದೇಶಕ ಅಭಿಷೇಕ್, ‘ಇದು ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈಗ ಬಿಡುಗಡೆಯಾಗಿರುವ ಹಾಡು ಚಿತ್ರದ ಪ್ರೀ ಕ್ಲೈಮ್ಯಾಕ್ಸ್‌ನಲ್ಲಿ ಬರುತ್ತದೆ. ಚಿತ್ರದ ಕಥೆಗೂ ಹಾಗೂ ಈ ಹಾಡಿಗೂ ಸಂಬಂಧವಿದೆ’ ಎಂದರು. ಛಾಯಾಗ್ರಾಹಕ ಅಭಿಷೇಕ್ ಕಾಸರಗೋಡು, ಕಲಾವಿದರಾದ ಶ್ರೀವತ್ಸ, ಶ್ರೇಯಸ್ ಶರ್ಮ, ಅಶ್ವಿನ್, ವಿನುತ್ ಹಾಗೂ ನೃತ್ಯ ಸಂಯೋಜನೆ ಮಾಡಿರುವ ಉಷಾ ಭಂಡಾರಿ ಮತ್ತು ದರ್ಶನ್ ಇದ್ದರು.

ಬ್ಯಾಂಕ್ ದರೋಡೆ ಮಾಡಲು ಹೊರಟವರ ಹಾಸ್ಯ ಕಥೆ ಈ ಸಿನಿಮಾದ್ದು. ತುಮಕೂರು ಹಾಗೂ ಚಿತ್ರದುರ್ಗದ ಸುತ್ತಮುತ್ತ ಸದ್ಯ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ, ಬಹುಪರಾಕ್ ಮತ್ತು ಆಪರೇಷನ್ ಅಲಮೇಲಮ್ಮ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನೆಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. 'ಪಿನಾಕ' ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಮೂಲಕ ಚೊಚ್ಚಲ ಬಾರಿ ನಿರ್ದೇಶನಕ್ಕೆ ಇಳಿದಿದ್ದಾರೆ

ರಚನಾ ಮಾಡರ್ನ್‌ ಹುಡುಗಿ, ರಾಕೇಶ್‌ ಹಳ‍್ಳಿ ಹುಡುಗ.. ಇವರಿಬ್ಬರ ಮಧ್ಯೆ ನಾಯಿಗೇನು ಕೆಲಸ?

ಬ್ಯಾಂಕ್ ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಸಹಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಭರತ್, ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ. ಬೆಂಗಳೂರು, ತುಮಕೂರು ಹಾಗು ಚಿತ್ರದುರ್ಗ ಸುತ್ತಮುತ್ತ ಚಿತ್ರೀಕರಣ ಮುಗಿದಿದೆ‌‌. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ