ಅಮ್ಮು‌ ಎಂದ ಸ್ಮೈಲ್ ಗುರು ರಕ್ಷಿತ್, ವಿಭಿನ್ನವಾಗಿ ಟೈಟಲ್ ಲಾಂಚ್ ಮಾಡಿದ ಚಿತ್ರತಂಡ!

Published : Sep 08, 2024, 07:36 PM IST
ಅಮ್ಮು‌ ಎಂದ ಸ್ಮೈಲ್ ಗುರು ರಕ್ಷಿತ್, ವಿಭಿನ್ನವಾಗಿ ಟೈಟಲ್ ಲಾಂಚ್ ಮಾಡಿದ ಚಿತ್ರತಂಡ!

ಸಾರಾಂಶ

ಮಹೇಶ್ ಬಾಬು ಅವರು ಪ್ರತಿ ಸಿನಿಮಾದಲ್ಲಿಯೂ ಹೊಸ ಪ್ರತಿಭೆಗಳನ್ನು ಪರಿಚಯಿಸುತ್ತಿದ್ದಾರೆ. ಈಗ ಅವರು ಈ ಸಿನಿಮಾ ಮೂಲಕ  ಕನ್ನಡತಿ, 'ಅವನು ಮತ್ತೆ ಶ್ರಾವಣಿ 2' ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದ 'ಸ್ಮೈಲ್ ಗುರು' ರಕ್ಷಿತ್ ಅವರನ್ನು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯ ಮಾಡುತ್ತಿದ್ದಾರೆ.

ಡಾ ಪುನೀತ್ ರಾಜ್ ಕುಮಾರ್ ಜೊತೆ 'ಆಕಾಶ್', 'ಅರಸು' ಪ್ರಜ್ವಲ್ ದೇವರಾಜ್‌ ನಟನೆಯ 'ಮೆರವಣಿಗೆ' ಯಂತಹ ಸೂಪರ್ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು ಅವರ ಮುಂಬರುವ ಹೊಸ ಸಿನಿಮಾದ ಟೈಟಲ್ ಬಿಡುಗಡೆ ಮಾಡಲಾಗಿದೆ. ವಿಭಿನ್ನವಾಗಿ ಚಿತ್ರತಂಡ ಶೀರ್ಷಿಕೆಯನ್ನು ಅನಾವರಣ ಮಾಡಿದೆ. 

ಪುದುಚೇರಿಯ 82 ಸಮುದ್ರದ ಆಳದಲ್ಲಿ ಸ್ಕೂಬಾ ಡೈಯಿಂಗ್ ಮೂಲಕ ಚಿತ್ರತಂಡ ಟೈಟಲ್ ರಿವೀಲ್ ಮಾಡಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. 'ಭೀಮ' ದುನಿಯಾ ವಿಜಯ್ ಅವರು ಮಹೇಶ್ ಬಾಬು ಅವರ ಹೊಸ ಪ್ರಯತ್ನಕ್ಕೆ ಸಾಥ್ ಕೊಟ್ಟರು. 

ಮಹೇಶ್ ಬಾಬು ಅವರು ಪ್ರತಿ ಸಿನಿಮಾದಲ್ಲಿಯೂ ಹೊಸ ಪ್ರತಿಭೆಗಳನ್ನು ಪರಿಚಯಿಸುತ್ತಿದ್ದಾರೆ. ಈಗ ಅವರು ಈ ಸಿನಿಮಾ ಮೂಲಕ  ಕನ್ನಡತಿ, 'ಅವನು ಮತ್ತೆ ಶ್ರಾವಣಿ 2' ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದ 'ಸ್ಮೈಲ್ ಗುರು' ರಕ್ಷಿತ್ ಅವರನ್ನು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯ ಮಾಡುತ್ತಿದ್ದಾರೆ. ಇದು ನಾಯಕನಾಗಿ ರಕ್ಷಿತ್ ಗೂ ಮೊದಲ ಹೆಜ್ಜೆ.ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಪಯಣಕ್ಕೆ 'ಅಮ್ಮು' ಎಂಬ ಕ್ಲಾಸ್ ಶೀರ್ಷಿಕೆ ಇಡಲಾಗಿದೆ.

ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಎಂಗೇಜ್ಮೆಂಟ್ & ಮದುವೆ ಸುದ್ದಿ ಹಬ್ಬಿದ್ಯಾಕೆ?

ದುನಿಯಾ ವಿಜಯ್ ಕುಮಾರ್ 'ನಾನು, ಪ್ರೇಮ್ ಸಿನಿಮಾ ಆಳಕ್ಕೆ ಇಳಿದಿದ್ದೇವೆ. ನಮ್ಮ ಮಕ್ಕಳಿಗೆ ಒಳ್ಳೆದಾಗಲಿ ಎಂದು. ನಮಗೆ ಸಿನಿಮಾ ಬಿಟ್ಟರೆ ಬೇರೆ ಗೊತ್ತಿಲ್ಲ. ನಿಮ್ಮೆಲ್ಲರ ಆಶೀರ್ವಾದ , ಎಲ್ಲಾ ಹೀರೋ ಅಭಿಮಾನಿಗಳ ಆಶೀರ್ವಾದ ಈ ಮಕ್ಕಳ ಮೇಲೆ ಇರಲಿ. ಇವರು ಮುಂದೆ ಇಂಡಸ್ಟ್ರಿಯನ್ನು ಬೇರೆ ರೂಪಕ್ಕೆ ತೆಗೆದುಕೊಂಡು ಮುಂದೆ ಬರುತ್ತಿರುವುದು ನಿಮ್ಮ ಆಶೀರ್ವಾದ ಪಡೆಯಲು. ತಪ್ಪು ಮಾಡಿದರೆ ತಿದ್ದಿ. 

ನಾವು ಸಿನಿಮಾಗಾಗಿ ತುಂಬಾ ತ್ಯಾಗ ಮಾಡಿದ್ದೇವೆ. ಕಥೆ ಹೇಳದೆ ಮಹೇಶ್ ಅಣ್ಣನಿಗೆ ನಾವು ಸಿನಿಮಾ ಮಾಡಿ ಎಂದು ಕೇಳಿಕೊಳ್ಳುತ್ತೇವೆ. ತುಂಬಾ ಹಳೆ ನಿರ್ದೇಶಕರು. ಅದ್ಭುತ ವ್ಯಕ್ತಿತ್ವ. ಬದಲಾಗದೆ, ಏನೂ ಅಹಂ ಇಲ್ಲದೇ ಇರುವುವವರು. ಇಡೀ ಸಿನಿಮಾ ತಂಡಕ್ಕೆ ಒಳ್ಳೆಯದಾಗಲಿ' ಎಂದರು. 

ನಿರ್ದೇಶಕರಾದ ಮಹೇಶ್ ಬಾಬು ಮಾತನಾಡಿ, 'ವಜ್ರೇಶ್ವರಿ ಕಂಬೈನ್ಸ್ ಮೂಲಕ ನನ್ನನ್ನು ನಿರ್ದೇಶಕರಾಗಿ ಪರಿಚಯಿಸಿದವರು ಪಾರ್ವತಮ್ಮ, ರಾಜ್ ಕುಮಾರ್ ಸರ್ ಹಾಗೂ ಅವರ ಕುಟುಂಬ. ಶಿವಣ್ಣ, ರಾಘಣ್ಣ, ಎಲ್ಲದಕ್ಕಿಂತ ಹೆಚ್ಚಿನದಾಗಿ ಅಪ್ಪು ಸರ್.  ಅನುರಾಗ್, ಮಿಥುನ್ ಹಾಗೂ ಬಚ್ಚನ್ ಚೇತು. ಈ ಮೂರು ಜನ ಸಿನಿಮಾ ಮಾಡಬೇಕು ಎಂದರು. 

ಆರ್ಮುಗಂ ರವಿಶಂಕರ್ ಪುತ್ರನಿಗೆ ಶಿವಣ್ಣ ಸಾಥ್; ಅದ್ವೇ ಕನಸು 'ಸುಬ್ರಹ್ಮಣ್ಯ' ಫಸ್ಟ್ ಲುಕ್ ರಿಲೀಸ್

ಈ ಚಿತ್ರ ಆಗಲು ಮುಖ್ಯ ಕಾರಣ ರಕ್ಷಿತ್. ಅವರು ಕಥೆ ಮಾಡಿ ನನ್ನ ಬಳಿ ಹೇಳಿದರು. ಕಥೆ ಕೇಳಿ ನನಗೆ ಸ್ಟ್ರೈಕ್ ಆಯ್ತು. ರಕ್ಷಿತ್ ಗೆ ಒಂದು ಬಿಗ್ ಚಪ್ಪಾಳೆ ಬೇಕು. ಈ ಚಿತ್ರಕ್ಕೆ ಫ್ಯಾಷನೇಟ್ ನಿರ್ಮಾಪಕರು ಸಿಕ್ಕಿದ್ದಾರೆ. ವರ್ಕ್ ಶಾಪ್ ಮಾಡಿದೆ. ಜೆರುಷಾ, ಅಮೃತಾ ಇಬ್ಬರು ಚೆನ್ನಾಗಿ ಆಕ್ಟ್ ಮಾಡುತ್ತಾರೆ. ರಕ್ಷಿತ್ ಒಳ್ಳೆ ನಟ. ಒಂದೊಳ್ಳೆ ತಂಡ ನನಗೆ ಸಿಕ್ಕಿದೆ ಎಂದರು.

ನಟ ಸ್ಮೈಲ್ ಗುರು ರಕ್ಷಿತ್ ಮಾತನಾಡಿ, 'ಈ ಸಮಯದಲ್ಲಿ ನಾನು ಇಬ್ಬರನ್ನೂ ನೆನಪು ಮಾಡಿಕೊಳ್ಳುತ್ತೇನೆ. ಒಬ್ಬರು ಸಂಕಲನಕಾರ ಮಹೇಶ್, ಇನ್ನೊಬ್ಬರು ಮೀಡಿಯಾದವರು. ನಾನು ಬ್ಯಾಗ್ರೌಂಡ್ ಡ್ಯಾನ್ಸರ್ ಆಗಿ ನನ್ನ ಕರಿಯರ್ ಶುರು ಮಾಡಿದ್ದು. ಮನೆಗೆ ಬಂದು ಶಾರ್ಟ್ ಹುಡುಕುತ್ತಿದೆ. ನಾನು ಕಾಣಿಸುತ್ತಿರಲಿಲ್ಲ. ಆಗ ರಿಯಾಲಿಟಿ ಶೋ ಟ್ರೈ ಮಾಡಿದೆ. ಆಗಲೂ ಆಗಲಿಲ್ಲ. 

ಆ ಹಠದಲ್ಲಿ ಶುರು ಮಾಡಿದ್ದು ಸ್ಮೈಲ್ ಗುರು ಶಾರ್ಟ್ ಸಿನಿಮಾ. ಮಹೇಶ್ ಅವರು ಆಗ ಸಾಥ್ ಕೊಟ್ಟರು. ಪದ್ಮಾವತಿ ಕಲರ್ಸ್ ಕನ್ನಡದಿಂದ ನನ್ನ ಕರಿಯರ್ ಶುರುವಾಯ್ತು. ನಾನು ಸಿನಿಮಾ ಮಾಡುತ್ತೇನೆ ಎಂದು ಅಂದೇ ಅಂದುಕೊಂಡಿದ್ದೆ. ಈಗ ಅದು ಆಗಿದೆ. ಈಗ ಟೈಟಲ್ ರಿವೀಲ್ ಆಗಿದೆ. ವಿಭಿನ್ನವಾಗಿ ಟೈಟಲ್ ಲಾಂಚ್ ಮಾಡಿದ್ದೇವೆ' ಎಂದರು.

ಅಘೋರಿ ಪಾತ್ರಕ್ಕಾಗಿ ವಿಭೂತಿ ಬಳಿದುಕೊಂಡಿದ್ದಕ್ಕೆ ರಾಧಿಕಾ ಕುಮಾರಸ್ವಾಮಿಗೆ ಏನಾಗಿತ್ತು ಗೊತ್ತಾ?

ಅಮ್ಮು ಸಿನಿಮಾದಲ್ಲಿ ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಟಗರು ಪಲ್ಯ ಖ್ಯಾತಿಯ ಅಮೃತಾ ಪ್ರೇಮ್ ಹಾಗೂ ವೀರಮದಕರಿ ಸಿನಿಮಾದಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಜೆರುಶಾ ಸಾಥ್ ಕೊಡುತ್ತಿದ್ದಾರೆ. ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. 

ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆ.ಎಸ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ, ಸತ್ಯ ಅವರು ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿರಲಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಲಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ