
ಕನ್ನಡ ಚಿತ್ರರಂಗದ ನಿರ್ದೇಶಕ ಪವನ್ ಕುಮಾರ್ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿತ್ತು. ಮನೆಯಲ್ಲಿಯೇ ಕ್ವಾರಂಟೈನ್ ಅಗಿ ಚೇತರಿಸಿಕೊಂಡು, ಈಗ ಮತ್ತೆ ಕೆಲಸಕ್ಕೆ ಮರಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ತಮ್ಮ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ್ದಾರೆ.
'ಕನ್ನಡಿಯಲ್ಲಿ ಕಾಣಿಸುತ್ತಿರುವ ವ್ಯಕ್ತಿ ನಾನೇ. ಆ್ಯಂಟಿಬಾಡೀಸ್ ಲೋಡ್ ಅಗಿರುವ ದೇಹ ಆರೋಗ್ಯವಾಗಿದೆ. ದ್ವಿತ್ವ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾದ ಕಾರಣ ಸೋಷಿಯಲ್ ಮೀಡಿಯಾದಿಂದಲೂ ಕೊಂಚ ದೂರ ಉಳಿದೆ. ಇದನ್ನು ಮೊದಲೇ ತಿಳಿಸುವುದಕ್ಕೆ ಮರೆತೆ. ನಮ್ಮ ಆರೋಗ್ಯದ ಬಗ್ಗೆ ವಿಚಾರಿಸಲು ಮೆಸೇಜ್ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು,' ಎಂದು ಪವನ್ ಬರೆದುಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆಯೇ ಪ್ರೀ ಪ್ರೊಡಕ್ಷನ್ ಕೆಲಸಗಳನ್ನು ಆರಂಭಿಸಿರುವ ಪವನ್ ಶೀಘ್ರದಲ್ಲಿಯೇ ಚಿತ್ರೀಕರಣ ಆರಂಭಿಸಲಿದ್ದಾರೆ. ಪುನೀತ್ ರಾಜ್‌ಕುಮಾರ್ ಹಾಗೂ ಪವನ್ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಹೊಂಬಾಳೆ ಫಿಲಂ ಬಂಡವಾಳ ಹಾಕಿದೆ. ಪೂರ್ಣಚಂದ್ರ ತೇಜಸ್ವಿ ಈ ಚಿತ್ರದ ಮ್ಯೂಸಿಕ್ ಕಂಪೋಸರ್ ಆಗಿದ್ದು,ಇನ್ನುಳಿದ ತಾರಾ ಬಳಗದ ಬಗ್ಗೆ ಇನ್ನೂ ರಿವೀಲ್ ಮಾಡಬೇಕಿದೆ.
ನಟ ಪುನೀತ್ ರಾಜ್‌ಕುಮಾರ್ ಸದ್ಯ ಡಾಕ್ಯೂಮೆಂಟರಿಗಾಗಿ ಕರ್ನಾಟಕ ಟೂರ್‌ನಲ್ಲಿ ಬ್ಯುಸಿಯಾಗಿದ್ದಾರೆ. ಜೇಮ್ಸ್ ಚಿತ್ರದ ನಂತರ ಅಪ್ಪು ದ್ವೀತ್ವ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.