ರಕ್ಷಿತ್ ಅಂಥ ವ್ಯಕ್ತಿಯನ್ನು ಕಳೆದುಕೊಂಡವರು ನತದೃಷ್ಟರು; ಸಂತೋಷ್ ಆನಂದ್ ರಾಮ್ ಟಾಂಗ್ ಕೊಟ್ಟಿದ್ದು ಯಾರಿಗೆ?

By Shruiti G Krishna  |  First Published Jun 7, 2022, 4:52 PM IST

777 ಚಾರ್ಲಿ ವೀಕ್ಷಿಸಿದ ಬಳಿಕ ರಾಜಕುಮಾರ ನಿರ್ದೇಶಕ ಸಂತೋಷ್ ಆನಂದ್ ರಾಮ್ ಚಿತ್ರವನ್ನು  ಹಾಡಿ ಹೊಗಳಿದ್ದಾರೆ. ಅಲ್ಲದೇ ರಕ್ಷಿತ್ ಶೆಟ್ಟಿಯನ್ನು ಕೊಂಡಾಡಿದ್ದಾರೆ.ಸಂತೋಷ್ ಆನಂದ್ ರಾಮ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸಂತೋಷ್ ಆನಂದ್ ರಾಮ್ ಬರೆದ ಸಾಲು ಈಗ ವೈರಲ್ ಆಗುತ್ತಿದೆ.


ಸ್ಯಾಂಡಲ್ ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ(Rakshith Shetty) ಸದ್ಯ 777 ಚಾರ್ಲಿ(777 Charlie) ಸಿನಿಮಾದ ಬಿಡುಗಡೆ ತಯಾರಿಯಲ್ಲಿದ್ದಾರೆ. ಸದ್ಯ ಸಿನಿಮಾತಂಡ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದ್ದು ಅನೇಕ ಕಡೆ ಪ್ರೀಮಿಯರ್ ಶೋ ಕೂಡ ಮಾಡಲಾಗಿದೆ. ಚಾರ್ಲಿ ಈಗಾಗಲೇ ಟ್ರೈಲರ್ ಮೂಲಕ ಭಾರಿ ಹೈಪ್ ಕ್ರಿಯೇಟ್ ಮಾಡಿದ್ದು ಬಿಡುಗಡೆಗೆ ದಿನಗಣಗೆ ಪ್ರಾರಂಭವಾಗಿದೆ. ಮನುಷ್ಯ ಮತ್ತು ನಾಯಿಯ ಭಾವನಾತ್ಮಕ ಸಂಬಂಧದ ಬಗ್ಗೆ ಇರುವ ಚಾರ್ಲಿಯನ್ನು ಚಿತ್ರಮಂದಿರಗಳಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಅಂದಹಾಗೆ ಈಗಾಗಲೇ ದೇಶದ ಅನೇಕ ಕಡೆ ಪ್ರೀಮಿಯರ್ ಮಾಡಲಾಗಿದೆ. ಎಲ್ಲಾ ಕಡೆಯೂ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಭಾಷೆಯ ಅಭಿಮಾನಿಗಳು ಸಹ ಚಾರ್ಲಿಯನ್ನು ಹಾಡಿಹೊಗಳುತ್ತಿದ್ದಾರೆ. ಇತ್ತೀಚಿಗಷ್ಟೆ ಕರ್ನಾಟಕದಲ್ಲೂ ಚಾರ್ಲಿ ಸೆಲೆಬ್ರಿಟಿ ಶೋ ಮಾಡಲಾಗಿತ್ತು. ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಚಾರ್ಲಿ ಸಿನಿಮಾ ನೋಡಿ ಕಣ್ತುಂಬಿಕೊಂಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ರಾಜಕುಮಾರ ನಿರ್ದೇಶಕ ಸಂತೋಷ್ ಆನಂದ್ ರಾಮ್(Santhosh Anandram) 777 ಚಾರ್ಲಿಯನ್ನು ಹಾಡಿ ಹೊಗಳಿದ್ದಾರೆ. ಅಲ್ಲದೇ ರಕ್ಷಿತ್ ಶೆಟ್ಟಿಯನ್ನು ಕೊಂಡಾಡಿದ್ದಾರೆ.

Tap to resize

Latest Videos

ಸಿನಿಮಾ ವೀಕ್ಷಿಸಿದ ಬಳಿಕ ಸಂತೋಷ್ ಆನಂದ್ ರಾಮ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸಂತೋಷ್ ಆನಂದ್ ರಾಮ್ ಬರೆದ ಸಾಲು ಈಗ ವೈರಲ್ ಆಗುತ್ತಿದೆ. ಅಷ್ಟಕ್ಕೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಬರೆದ ಪತ್ರದಲ್ಲಿ ಏನಿದೆ ಅಂತೀರಾ, ನಾ ಕಂಡ ಚಾರ್ಲಿ ಎಂದು ಕ್ಯಾಪ್ಷನ್ ನೀಡಿ ಸಂತೋಷ್ ಮನುಷ್ಯನಲ್ಲಿರುವ ಮನುಷ್ಯತ್ವವನ್ನು ಅರ್ಥ ಮಾಡಿಸುವ ಸಿನಿಮಾ ಎಂದಿದ್ದಾರೆ.

ನಮ್ಮನೆ ನಾಯಿಯನ್ನು ಇಂಜೆಕ್ಷನ್ ಕೊಟ್ಟು ಸಾಯಿಸಿದ್ರು; ನೋವಿನ ಘಟನೆ ಬಿಚ್ಚಿಟ್ಟ ರಕ್ಷಿತ್ ಶೆಟ್ಟಿ

'ಮನುಷ್ಯನಲ್ಲಿರುವ ಮನುಷ್ಯತ್ವವನ್ನು ಅರ್ಥ ಮಾಡಿಸುವ ಸಿನಿಮಾ ಚಾರ್ಲಿ. ರಕ್ಷಿತ್ ಶೆಟ್ಟಿ ಶ್ರೇಷ್ಠವಾದ ಮಾನವೀಯತೆಯನ್ನು ಮೆರೆದಿದ್ದಾರೆ. ನೈಜ ಬದುಕಿನಲ್ಲಿ ಅಂತ ವ್ಯಕ್ತಿಯಾಗಿದ್ದರೆ ಮಾತ್ರ ಮೂರು ವರ್ಷ ಕಾದು ಈ ಚಿತ್ರವನ್ನು ತೆರೆ ಮೇಲೆ ತರಲು ಸಾಧ್ಯ. ಇಂಥ ವ್ಯಕ್ತಿಯನ್ನು ಕಳೆದುಕೊಂಡವರು ನತದೃಷ್ಟರು. ಕಿರಣ್ ರಾಜ್ ಹಾಗೂ ತಂಡಕ್ಕೆ ಶುಭಾಶಯಗಳು'ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದರಲ್ಲಿ ಇಂಥ ವ್ಯಕ್ತಿಯನ್ನು ಕಳೆದುಕೊಂಡವರು ನತದೃಷ್ಟರು ಎನ್ನುವ ಸಾಲು ವೈರಲ್ ಆಗುತ್ತಿದೆ. ಈ ಸಾಲನ್ನು ಸಂತೋಷ್ ಆನಂದ್ ರಾಮ್ ಹೇಳಿದ್ದು ಯಾರಿಗೆ ಎನ್ನುವ ಚರ್ಚೆ ಪ್ರಾರಂಭವಾಗಿದೆ. ಅಂದಹಾಗೆ ಅಭಿಮಾನಿಗಳು ಕಾಮೆಂಟ್ ಮಾಡಿ ಯಾರಿಗೆ ಹೇಳಿದ್ದು ಅಂತ ಅರ್ಥ ಆಗಿದೆ ಎಂದು ಹೇಳುತ್ತಿದ್ದಾರೆ. ಯಾರಿಗೆ ಅರ್ಥ ಆಗಬೇಕೊ ಅವರಿಗೆ ಈಗಾಗಲೇ ಅರ್ಥ ಆಗಿದೆ ಎಂದು ಇನ್ನು ಕೆಲವರು ಹೇಳುತ್ತಿದ್ದಾರೆ.

ನಾ ಕಂಡ pic.twitter.com/Pd2Dc2TgqT

— Santhosh Ananddram (@SanthoshAnand15)

ಸಂತೋಷ್ ಆನಂದ್ ರಾಮ್ ಸದ್ಯ ಯುವರಾಜ್ ಕುಮಾರ್ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ಈಗಾಗಲೇ ಸಿನಿಮಾ ಅನೌನ್ಸ್ ಆಗಿದೆ. ಸಿನಿಮಾದ ಅಪ್ ಡೇಟ್ ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಸಿನಿಮಾದ ಟೈಟಲ್, ನಾಯಕಿ ಸೇರಿದಂತೆ ಚಿತ್ರದ ಬಗ್ಗೆ ಅಪ್ ಡೇಟ್ ನೀಡಿ ಎಂದು ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಂತೋಷ್ ಆನಂದ್ ರಾಮ್ ಅಕ್ಟೋಬರ್ ನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.

ಹ್ಯಾಪಿ ಬರ್ತ್ ಡೇ ರಕ್ಸ್ ಎಂದ ರುಕ್ಮಿಣಿ; ಈ ಜೋಡಿ ಎಷ್ಟು ಚಂದ ಅಲ್ವಾ ಅಂದ್ರು ಫ್ಯಾನ್ಸ್!

ಇನ್ನು 777 ಚಾರ್ಲಿ ಬಗ್ಗೆ ಹೇಳುವುದಾರೆ ಜೂನ್ 10ರಂದು ಚಾರ್ಲಿ ಚಿತ್ರಮಂದಿರದ ಅಂಗಳಕ್ಕೆ ಎಂಟ್ರಿ ಕೊಡುತ್ತಿದೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆ ಮತ್ತು ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಈಗಾಗಲೇ ಆನ್ ಲೈನ್ ಬುಕ್ಕಿಂಗ್ ಓಪನ್ ಮಾಡಿದ್ದು ಟಿಕೆಟ್ ಸೋಲ್ಡ್ ಔಟ್ ಆಗಿವೆ. ಬೆಂಗಳೂರಿನಲ್ಲಿ ಜೂನ್ 9ರಂದೆ ಅನೇಕ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.

click me!