ಲೂಸ್ ಮಾದ ಯೋಗೇಶ್ 'ಸಿದ್ಲಿಂಗು' ಸಿನಿಮಾಗೆ ಮುಹೂರ್ತ ಆಯ್ತು; ಸೋನು ಗೌಡ ಹೀರೋಯಿನ್!

Published : Mar 22, 2024, 07:11 PM ISTUpdated : Mar 23, 2024, 10:34 AM IST
ಲೂಸ್ ಮಾದ ಯೋಗೇಶ್ 'ಸಿದ್ಲಿಂಗು' ಸಿನಿಮಾಗೆ ಮುಹೂರ್ತ ಆಯ್ತು; ಸೋನು ಗೌಡ ಹೀರೋಯಿನ್!

ಸಾರಾಂಶ

ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಸಿನಿಮಾಗಳ ಬಳಿಕ ಡಬಲ್ ಮೀನಿಂಗ್ ಡೈಲಾಗ್ಸ್ಗೆ ಕಡಿವಾಣ ಹಾಕಿ, ಹೊಸ ಹುರುಪು ಹುಮ್ಮಸ್ಸಿನಿಂದ ಸಿದ್ಲಿಂಗು-2 ಮಾಡೋಕೆ ಮುಂದಾಗಿದ್ದಾರೆ ವಿಜಯ್ ಪ್ರಸಾದ್. ಇಲ್ಲಿ ಬರೀ ಮೀನಿಂಗ್ ಇರಲಿದೆ. ಡಬಲ್ ಮೀನಿಂಗ್ ಇರಲ್ಲ ಅಂತ ಜನಕ್ಕೆ ಕೈ ಮುಗಿದರು.

ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಚಿತ್ರಗಳ ಬಳಿಕ ಚೇಷ್ಠೆಗೆ ಫುಲ್ಸ್ಟಾಪ್ ಇಟ್ಟಿರೋ ವಿಜಯ್ ಪ್ರಸಾದ್, ಸಿದ್ಲಿಂಗು ಸೀಕ್ವೆಲ್ ಸಿನಿಮಾನ ಕೈಗೆತ್ತಿಕೊಂಡಿದ್ದಾರೆ. ಲೂಸ್ಮಾದ ಯೋಗಿ ಜೊತೆಗೇನೇ ಸಿನಿಮಾ ಶುರು ಮಾಡ್ತಿರೋ ಪ್ರಸಾದ್, ಅಧಿಕೃತವಾಗಿ ನಿರ್ಮಾಪಕರ ಮನೆದೇವರ ಆಲಯದಲ್ಲಿ ಮುಹೂರ್ತ ಕೂಡ ನೆರವೇರಿಸಿದ್ರು. ಮೋಹಕತಾರೆ ರಮ್ಯಾ & ಆಂಡಾಳಮ್ಮ ಇರ್ತಾರಾ..? ಡಬಲ್ ಮೀನಿಂಗ್ ಇರುತ್ತಾ ಇರಲ್ವಾ ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ ಒಮ್ಮೆ ಓದಿ.

ಸಿದ್ಲಿಂಗು.. ಈ ಸಿನಿಮಾ ಬಂದು ಬರೋಬ್ಬರಿ 12 ವರ್ಷಗಳಾಯ್ತು. ಇಂದಿಗೂ ನೋಡುಗರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಅದಕ್ಕೆ ಕಾರಣ ಒಂದೊಳ್ಳೆ ಕಥೆ, ಸಂಬಂಧಗಳ ಮೌಲ್ಯಗಳು, ಕಾಮಿಡಿ, ಪ್ರೀತಿ, ಡೈಲಾಗ್ಸ್, ಸಾಹಿತ್ಯ, ಸಂಗೀತ ಹಾಗೂ ಮೇಕಿಂಗ್. ಹೌದು.. ಎಲ್ಲಾ ಆಂಗಲ್‌ನಿಂದ ಸಿದ್ಲಿಂಗು ವ್ಹಾವ್ ಫೀಲ್ ತರಿಸಿದ ಸಿನಿಮಾ ಆಗಿತ್ತು. ಇದೀಗ ಅದ್ರ ಸೀಕ್ವೆಲ್ ಸಿದ್ಲಿಂಗು-2 ಸೆಟ್ಟೇರಿದೆ.

'ಬ್ಲಿಂಕ್'ಗೆ ಬೊಂಬಾಟ್ ರೆಸ್ಪಾನ್ಸ್; ಇದಪ್ಪಾ ಕನ್ನಡ ಸಿನಿಮಾದ ತಾಕತ್ತು ಅಂತಿದಾರಲ್ರೀ!'

ಜಮಾಲಿಗುಡ್ಡ ಚಿತ್ರದ ನಿರ್ಮಾಪಕ ಶ್ರೀಹರಿ ರೆಡ್ಡಿ ಅವ್ರು ತಮ್ಮ ನಿಹಾರಿಕಾ ಫಿಲಂಸ್ ಬ್ಯಾನರ್ನಡಿ ಈ ಚಿತ್ರವನ್ನ ನಿರ್ಮಿಸುತ್ತಿದ್ದು, ವಿಜಯ್ ಪ್ರಸಾದ್ ಅವರೇ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಅಬ್ಬಿಗೆರೆ ಬಳಿ ಇರೋ ಶೆಟ್ಟಿಹಳ್ಳಿ ವಾರ್ಡ್ನ ನಿವಾಸಿಯಾದ ಶ್ರೀಹರಿ ರೆಡ್ಡಿ ಅವ್ರ ಮನೆದೇವ್ರ ಆಲಯದಲ್ಲಿ ಸಿನಿಮಾ ಮುಹೂರ್ತ ಕಂಡಿದೆ. ನಂತ್ರ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ, ಮಾಧ್ಯಮಗಳಿಗೆ ಒಂದಷ್ಟು ಮಾಹಿತಿ ನೀಡಿತು.

'ವಿದ್ಯಾಪತಿ'ಗೆ ಕಿಕ್ ಸ್ಟಾರ್ಟ್; ಹೊಸ ಅವತಾರದಲ್ಲಿ ನಾಗಭೂಷಣ್-ರಂಗಾಯಣ ರಘು

ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಸಿನಿಮಾಗಳ ಬಳಿಕ ಡಬಲ್ ಮೀನಿಂಗ್ ಡೈಲಾಗ್ಸ್ಗೆ ಕಡಿವಾಣ ಹಾಕಿ, ಹೊಸ ಹುರುಪು ಹುಮ್ಮಸ್ಸಿನಿಂದ ಸಿದ್ಲಿಂಗು-2 ಮಾಡೋಕೆ ಮುಂದಾಗಿದ್ದಾರೆ ವಿಜಯ್ ಪ್ರಸಾದ್. ಇಲ್ಲಿ ಬರೀ ಮೀನಿಂಗ್ ಇರಲಿದೆ. ಡಬಲ್ ಮೀನಿಂಗ್ ಇರಲ್ಲ ಅಂತ ಜನಕ್ಕೆ ಕೈ ಮುಗಿದರು. ಅಲ್ಲದೆ, ಯಾರೂ ನಂಬಲಾರದ ಸ್ಥಿತಿಯಲ್ಲಿದ್ದ ತನ್ನನ್ನ ನಂಬಿದ ಪ್ರೊಡ್ಯೂಸರ್ಗೆ ಥ್ಯಾಂಕ್ಸ್ ಹೇಳಿದ್ರು. ಈ ಬಾರಿ 6ರಿಂದ 60 ವರ್ಷದ ಎಲ್ಲರೂ ನೋಡಬಹುದಾದ ಸಿನಿಮಾ ಕೊಡೋ ಭರವಸೆ ನೀಡಿದ್ರು.

'ಒಂದು ಮಾನವ ಜೀವವನ್ನು ರಕ್ಷಿಸಿದರೆ....' ಇಸ್ಲಾಂ ಸಂದೇಶವನ್ನು ಮನಮುಟ್ಟುವಂತೆ ಬಿಚ್ಚಿಟ್ಟ ಶಾರುಖ್ ಖಾನ್

ನಾಯಕನಟ ಲೂಸ್ ಮಾದ ಯೋಗಿ ಮಾತನಾಡಿ, ಇದು ನನ್ನ ಕರಿಯರ್‌ಗೆ ಮಹತ್ವದ ತಿರುವು ಕೊಟ್ಟ ಸಿನಿಮಾ. ಹಾಗಾಗಿ ಅದ್ರ ಸೀಕ್ವೆಲ್ ಬರ್ತಿರೋದು ಖುಷಿಯ ವಿಚಾರ. ಹದಿನೈದು ವರ್ಷದ ಗೆಳತಿ ಸೋನು ಗೌಡ ಜೊತೆ ಇಲ್ಲಿಯವರೆಗೂ ಸಿನಿಮಾ ಮಾಡೋ ಅವಕಾಶಗಳು ಸಿಗಲೇ ಇಲ್ಲ. ಇದೀಗ ಒಟ್ಟಿಗೆ ಕೆಲಸ ಮಾಡ್ತಿರೋದು ಸಂತೋಷವಾಗ್ತಿದೆ. ರಮ್ಯಾ ಅವ್ರು ಇರಲ್ಲ, ಆಂಡಾಳಮ್ಮನನ್ನ ಬಿಡಲ್ಲ ಅಂದ್ರು.

ರೌಡಿಸಂ ಕಥೆ ಹೇಳಲು ಹೊರಟ ಸಿಂಹ-ಪ್ರತಾಪ್ ಸಿಂಹ; ಸ್ಯಾಂಡಲ್‌ವುಡ್‌ನಲ್ಲಿ ಬರಲಿದೆ 'ಓಂ ಕಾಳಿ'

ಕಿರಗೂರಿನ ಗಯ್ಯಾಳಿಗಳು ಸಿನಿಮಾದ ಪಾತ್ರ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ಡೈರೆಕ್ಟರ್, ಸಿದ್ಲಿಂಗು-2ಗೆ ಆಫರ್ ಮಾಡಿದ್ದು ನಿಜಕ್ಕೂ ಸರ್ಪ್ರೈಸ್ ಅಂದ್ರು ಸೋನು ಗೌಡ. ಕಲಾವಿದೆಯಾಗಿ ನಾನು ಕೊಟ್ಟ ಪಾತ್ರಕ್ಕೆ ಜೀವ ತುಂಬುತ್ತೇನೆ ಅಂತ ಅವಕಾಶ ನೀಡಿದ ಡೈರೆಕ್ಟರ್ಗೆ ಧನ್ಯವಾದ ಹೇಳಿದ್ರು, ಅಲ್ಲದೆ ಯೋಗಿ ಬಗ್ಗೆ ಕೊಂಡಾಡಿದ್ರು.

ಅನೂಪ್ ಸೀಳಿನ್ ಸಂಗೀತ, ಅರಸು ಅಂತಾರೆ ಸಾಹಿತ್ಯ ಚಿತ್ರಕ್ಕಿರಲಿದ್ದು, ಪದ್ಮಜಾ ರಾಜ್, ಆಂಟೊನಿ ಕಮಲ್, ಮಹಾಂತೇಶ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿರಲಿದೆ. ಮುಂದಿನ ವಾರದಿಂದ ಶೂಟಿಂಗ್ ಶುರುವಾಗಲಿದ್ದು, ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ಮಾಡಲು ಟೀಂ ನಿರ್ಧರಿಸಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!
ಅಂದು ಕನ್ನಡಿಗರ ಕೆಣಕಿದ್ದ ಕರಾವಳಿ ಹುಡುಗಿ ಇಂದು ಮನೆಮಗಳು ಆಗಿದ್ದು ಹೇಗೆ? ಸೀಕ್ರೆಟ್ ಸ್ಟ್ರಾಟಜಿ ಏನು?