
ಸ್ಟಾರ್ ನಟರು ಅಭಿನಯದ ದೊಡ್ಡ ಚಿತ್ರಗಳೂ ಸೇರಿದಂತೆ ಹಲವು ಚಿತ್ರಗಳು ಬಿಡುಗಡೆಯ ಸರದಿಗಾಗಿ ಕಾಯುತ್ತಿವೆ. ಈ ಲೆಕ್ಕದಲ್ಲಿ ನೋಡುವುದಾದರೆ ಚಿತ್ರಮಂದಿರಗಳು ಬಾಗಿಲು ತೆರೆದ ಕೂಡಲೇ ಮೊದಲು ಬರುವ ಚಿತ್ರ ‘ಸಲಗ’. ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ ಈ ಚಿತ್ರ ಆಗಸ್ಟ್ ತಿಂಗಳಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದೆ.
ದುಬಾರಿ ಬಜೆಟ್‌ನಲ್ಲಿ ಪ್ರಮೋಷನ್‌ಗೆಂದು ಸಾಂಗ್ ಶೂಟ್ ಮಾಡಿದ ಸಲಗ ಟೀಂ!
‘ಜುಲೈ ತಿಂಗಳ ಕೊನೆಯ ವಾರದಲ್ಲಿ ಚಿತ್ರಮಂದಿರಗಳ ಬಾಗಿಲು ತೆರೆಯುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಸರ್ಕಾರ ಕೂಡ ಯೋಚನೆ ಮಾಡಿದ್ದು, ಚಿತ್ರರಂಗದ ವತಿಯಿಂದಲೂ ಮನವಿ ಮಾಡಿಕೊಂಡಿದ್ದೇವೆ. ಒಂದು ವೇಳೆ ಚಿತ್ರಮಂದಿರಗಳು ಬಾಗಿಲು ತೆರೆದರೆ ಆಗಸ್ಟ್ ತಿಂಗಳಲ್ಲಿ ನಾವು ಸಲಗ ಚಿತ್ರವನ್ನು ಬಿಡುಗಡೆ ಮಾಡಲಿದ್ದೇವೆ.
ಚಿತ್ರಮಂದಿರಗಳು ಬಾಗಿಲು ತೆರೆದು, ಶೇ.100ರಷ್ಟುಸೀಟು ಭರ್ತಿಗೆ ಅವಕಾಶ ಕೊಟ್ಟಕೂಡಲೇ ಮೊದಲ ಚಿತ್ರವಾಗಿ ನಮ್ಮ ಸಲಗ ಬರುತ್ತಿದೆ. ಅನಗತ್ಯ ಸ್ಪರ್ಧೆ ಆಗದಂತೆ ಮಾತುಕತೆ ಮಾಡಿಕೊಂಡು ಚಿತ್ರಗಳನ್ನು ಬಿಡುಗಡೆ ಮಾಡುತ್ತೇವೆ. ಆಗಸ್ಟ್‌ನಲ್ಲಿ ಸಲಗ ತೆರೆಗೆ ಬರುವುದು ಪಕ್ಕಾ’ ಎಂಬುದು ನಿರ್ಮಾಪಕ ಕೆ ಪಿ ಶ್ರೀಕಾಂತ್ ಮಾತು.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.