
ಸ್ಯಾಂಡಲ್‌ವುಡ್ ಒಂಟಿ ಸಲಗ ದುನಿಯಾ ವಿಜಯ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ 'ಸಲಗ' ಸಿನಿಮಾ ಇದೇ ಅಗಸ್ಟ್ 20ರಂದು ಬಿಡುಗಡೆ ಮಾಡಲಾಗುತ್ತಿದೆ. ಶ್ರೀ ವರಮಹಾಲಕ್ಷ್ಮಿ ಹಬ್ಬಕ್ಕೆ ವಿಜಿ ಅಭಿಮಾನಿಗಳಿಗೆ ಸಂತೋಷದ ಸುದ್ದಿಯೊಂದನ್ನು ಅನೌನ್ಸ್ ಮಾಡಲಾಗಿದೆ.
ಇಷ್ಟು ದಿನಗಳ ಕಾಲ ತೆರೆ ಮೇಲೆ ನಾಯಕನಾಗಿ ಮಿಂಚುತ್ತಿದ್ದ ವಿಜಯ್ 'ಸಲಗ' ಚಿತ್ರದ ಮೂಲಕ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ. ಕೆಪಿ ಶ್ರೀಕಾಂತ್ ಬಂಡವಾಳ ಹಾಕಿರುವ ಈ ಚಿತ್ರಕ್ಕೆ ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರದ ಸಂಜಯ್ ಆನಂದ್ ನಾಯಕಿ ಆಗಿ ಕಾಣಿಸಿಕೊಂಡಿದ್ದಾರೆ.
'ಜುಲೈ ಕೊನೆಯ ವಾರದಲ್ಲಿ ಚಿತ್ರಮಂದಿರ ಬಾಗಿಲು ತೆರೆಯುವ ನಿರೀಕ್ಷೆ ಇದೆ. ಆಗಸ್ಟ್ ತಿಂಗಳಲ್ಲಿ ನಾವು ಸಲಗ ಬಿಡುಗಡೆ ಮಾಡಲಿದ್ದೇವೆ. ಅನಗತ್ಯ ಸ್ಪರ್ಧೆ ಆಗದಂತೆ ಮಾತುಕತೆ ಮಾಡಿಕೊಂಡು, ಚಿತ್ರಗಳನ್ನು ಬಿಡುಗಡೆ ಮಾಡುತ್ತೇವೆ,' ಎಂದು ನಿರ್ಮಾಪಕ ಶ್ರೀಕಾಂತ್ ಹೇಳಿದ್ದಾರೆ.
ಕೊರೋನಾ ಎರಡನೇ ಅಲೆ ಲಾಕ್‌ಡೌನ್‌ಗೂ ಮುನ್ನವೇ ಸಲಗ ಚಿತ್ರದ ಪ್ರಮೋಷನ್ ಸಾಂಗ್ ಚಿತ್ರೀಕರಣ ಮಾಡಲಾಗಿತ್ತು. ದುಬಾರಿ ಸೆಟ್ ಹಾಕುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಅಲ್ಲದೆ ಒಮ್ಮೆ ದುನಿಯಾ ವಿಜಯ್ ನಿವಾಸಕ್ಕೆ ಭೇಟಿ ನೀಡಿದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಪ್ಪದೇ ಸಿನಿಮಾ ನೋಡುವ ಭರವಸೆ ನೀಡಿದ್ದಾರೆ.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.