ಎಡಗೈ ಬಳಕೆದಾರರಿಗೆ ಗುಡ್ ನ್ಯೂಸ್, ನಿಮಗಾಗಿ ಒಂದು ಸಿನಿಮಾವನ್ನೇ ಮಾಡಲಾಗಿದೆ ನೋಡಿ!

By Shriram Bhat  |  First Published Aug 17, 2024, 4:13 PM IST

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ದೂದ್ ಪೇಡ...


ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನದಂದು ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಎಡಗೈ ಬಳಸುವವರನ್ನೇ ಗಮನದಲ್ಲಿಟ್ಟುಕೊಂಡು, ಅವರ ಜೀವನ ಶೈಲಿ ಕುರಿತು ಈ ಚಿತ್ರ ಕಟ್ಟಿಕೊಡಲಾಗಿದೆ. ಅದರಂತೆಯೇ ಪೋಸ್ಟರ್ ಕೂಡ  ಆಕರ್ಷಕವಾಗಿದೆ. ಸೆಟ್ಟೇರಿದ ದಿನದಂದಲೂ ಚಿತ್ರತಂಡ ವಿಭಿನ್ನ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರೇಕ್ಷಕರ ಕುತೂಹಲವನ್ನು ಹೆಚ್ಚು ಮಾಡಿದೆ.

ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸಿದ್ದು, ದಿಗ್ಗಿಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

Tap to resize

Latest Videos

ತಮಿಳು ಡೈರೆಕ್ಟರ್ ಜೊತೆ ಕರುನಾಡ ಚಕ್ರವರ್ತಿ ಶಿವಣ್ಣ; ಸೆಟ್ಟೇರಿತು 131ನೇ ಸಿನಿಮಾ!

ಎಡಗೈ ಅಪಘಾತಕ್ಕೆ ಕಾರಣ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.

ಅಂದಹಾಗೆ, ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ತೆರೆಗೆ ಬರಲು ಸಜ್ಜಾಗಿದೆ. ಚಿತ್ರತಂಡ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದು, ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರಲಿದೆ. ನಟ ದಿಗಂತ್ ನಟಿಸಿರುವ ಚಿತ್ರಗಳು ಇತ್ತೀಚೆಗೆ ಒಂದಾದ ಬಳಿಕ ಮತ್ತೊಂದರಂತೆ ಸೆಟ್‌ ಏರುತ್ತಿವೆ ಹಾಗೂ ತೆರೆಗೆ ಬರುತ್ತಿವೆ. 

ಆನಂದ್ ಚಿತ್ರಕ್ಕೆ ನಾಯಕಿಯಾಗಿ ಮೊದಲು ಆಯ್ಕೆಯಾಗಿದ್ದು ಸುಧಾರಾಣಿ ಅಲ್ಲ, ಮತ್ತೊಬ್ಬರು!

click me!