ಹಂಸಲೇಖ ಚೆನ್ನಾಗಿದ್ದಾರೆ, ಅನಾರೋಗ್ಯ ಸುದ್ದಿ ಸುಳ್ಳು: ಕುಟುಂಬ ಸ್ಪಷ್ಟನೆ

Published : Oct 11, 2022, 12:59 AM IST
ಹಂಸಲೇಖ ಚೆನ್ನಾಗಿದ್ದಾರೆ, ಅನಾರೋಗ್ಯ ಸುದ್ದಿ ಸುಳ್ಳು: ಕುಟುಂಬ ಸ್ಪಷ್ಟನೆ

ಸಾರಾಂಶ

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಹೃದಯ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಸೋಮವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದರೆ ಆ ವದಂತಿಯನ್ನು ಹಂಸಲೇಖ ಕುಟುಂಬ ಸಾರಾಸಗಟಾಗಿ ಅಲ್ಲಗಳೆದಿದೆ.

ಬೆಂಗಳೂರು (ಅ.11): ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಹೃದಯ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಸೋಮವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದರೆ ಆ ವದಂತಿಯನ್ನು ಹಂಸಲೇಖ ಕುಟುಂಬ ಸಾರಾಸಗಟಾಗಿ ಅಲ್ಲಗಳೆದಿದೆ. ಈ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಹಂಸಲೇಖ ಪುತ್ರ ಸೂರ್ಯಪ್ರಕಾಶ್‌ ಮತ್ತು ಪುತ್ರಿ ತೇಜಸ್ವಿನಿ ಹಂಸಲೇಖ, ‘ನಮ್ಮ ತಂದೆ ಡಾ.ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿರುವುದಾಗಿ ಒಂದು ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿದೆ. 

ಅಂದು ಗೋಕಾಕ್‌ ಚಳುವಳಿ, ಇಂದು ಕುಪ್ಪಳಿ ಕಹಳೆ: ಹಂಸಲೇಖ

ಈ ವದಂತಿ ಸುಳ್ಳಾಗಿದ್ದು, ಇದರಿಂದ ಅಭಿಮಾನಿಗಳು ಆತಂಕ ಪಡಬಾರದು ಹಾಗೂ ಈ ವದಂತಿ ಹರಡದಂತೆ ನೋಡಿಕೊಳ್ಳಬೇಕು’ ಎಂದು ಕೇಳಿಕೊಂಡಿದ್ದಾರೆ. ಹಂಸಲೇಖ ಅವರಿಗೆ ಹೃದಯ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಡಿ ಅಭಿಮಾನಿ ಬಳಗದಲ್ಲಿ ಆತಂಕ ಹರಡಿತ್ತು. ಕುಟುಂಬ ವರ್ಗ ಸ್ಪಷ್ಟನೆ ನೀಡಿದ ಬಳಿಕ ಅಭಿಮಾನಿಗಳು ನಿರಾಳರಾಗಿದ್ದಾರೆ.

Hamsalekha: ಶೂದ್ರ ಪದವನ್ನು ಎಲ್ಲ ನಿಘಂಟುಗಳಿಂದ ತೆಗೆದು ಹಾಕಿ

ಒಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು: ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಆದರೆ ಈ ಹಿಂದೆ ಹಂಸಲೇಖ ಒಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಹಾಗಾಗಿ ಎದೆ ನೋವು ಕಾಣಿಸಿಕೊಂಡ ತಕ್ಷಣ ಆತಂಕ ಮನೆ ಮಾಡಿತ್ತು. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯವಾಗಿದ್ದಾರೆ ಗಾಬರಿ ಪಡಬೇಕಾಗಿಲ್ಲ ಎಂದು ವೈದ್ಯರು ಸೂಚಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
ಒಂದೇ ದಿನದಲ್ಲಿ ದಾಖಲೆ ಬರೆದ ಸುದೀಪ್​ Mark Trailer​: ಇಷ್ಟೊಂದು Views​ ಆಗಿದ್ದು ನಿಜನಾ? ಏನಿದು ಚರ್ಚೆ?