
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep) ನಟನೆಯ ವಿಕ್ರಾಂತ್ ರೋಣ (Vikrant Rona) ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈಗಾಗಲೇ ಟ್ರೈಲರ್ ಮತ್ತು ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ವಿಕ್ರಾಂತ್ ರೋಣ ಇದೇ ತಿಂಗಳು ಜುಲೈ 28ರಂದು ರಿಲೀಸ್ ಆಗುತ್ತಿದೆ. ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಯಗಳಲ್ಲಿ ರಿಲೀಸ್ ಆಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ವಿಕ್ರಾಂತ್ ರೋಣನನ್ನು ಕಣ್ತುಂಬಿ ಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಚಿತ್ರದ ಎರಡು ಹಾಡುಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಮತ್ತು ಕಿಚ್ಚ ಹೆಜ್ಜೆ ಹಾಕಿರುವ ರಾ...ರಾ...ರಕ್ಕಮ್ಮ ಹಾಡು ಈಗಾಗಲೇ ವೈರಲ್ ಆಗಿದ್ದು ಪ್ರತಿಯೊಬ್ಬರು ಮೆಚ್ಚಿದ್ದಾರೆ. ಮೊದಲ ಹಾಡು ರಿಲೀಸ್ ಆಗಿದ್ದು ವೈರಲ್ ಆದ ಬೆನ್ನಲ್ಲೇ ಮತ್ತೊಂದು ಮೆಲೋಡಿ ಹಾಡು ರಿಲೀಸ್ ಆಗಿದೆ. ಅಪ್ಪ ಮಗಳ ಭಾವನಾತ್ಮಕ ಹಾಡು ಇದಾಗಿದೆ. ತಂದೆ ಮುದ್ದು ಮಗಳನ್ನು ಸಮಾಧಾನ ಮಾಡುವ ಹಾಡು ಇದಾಗಿದೆ. ತಂದೆ ಮಗಳಿಗೆ ಹಾಡುವ ಈ ಹಾಡು ಅಭಿಮಾನಿಗಳ ಹೃದಯ ಗೆದ್ದಿದೆ.
ರಾಜಕುಮಾರಿ ಎಂಬ ಲಾಲಿ ಹಾಡು ಅಪ್ಪ-ಮಗಳ ನಡುವಿನ ಬಾಂಧವ್ಯವನ್ನು ಸಾರುತ್ತದೆ. ಅನೂಪ್ ಭಂಡಾರಿ ಅವರ ಸಾಹಿತ್ಯವಿರುವ ಈ ಹಾಡಿಗೆ ಗಾಯಕ ವಿಜಯ್ ಪ್ರಕಾಶ್ ದನಿಗೂಡಿಸಿದ್ದಾರೆ. ಬಿ.ಅಜನೀಶ್ ಲೋಕನಾಥ್ ಅವರ ಮ್ಯೂಸಿಕ್ ಪ್ರೊಸಿಕ್ ಪ್ರೊಗ್ರಾಮಿಂಗ್ ಹಾಗೂ ಅರೇಜ್ಮೆಂಟ್ ಈ ಹಾಡಿಗಿದೆ.
ವಿಕ್ರಾಂತ್ ರೋಣ ಸಿನಿಮಾಗೆ ಕಿಚ್ಚ ಪಡೆದ ಸಂಭಾವನೆ ಎಷ್ಟು ಗೊತ್ತಾ..?
ರಾಜಕುಮಾರಿ ಹಾಡಿನ ಬಗ್ಗೆ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದು, ವಿಕ್ರಾಂತ್ ರೋಣ ಆಲ್ಬಂನಲ್ಲಿರುವ ನನ್ನ ಫೇವರಿಟ್ ಹಾಡು ಇಲ್ಲಿದೆ. ಈ ಹಾಡು ನಿಜಕ್ಕೂ ನನ್ನ ಮನಮುಟ್ಟಿದೆ. ಈ ಹಾಡಿನ ಮೇಕಿಂಗ್ ವೇಳೆ ನಾನು ತುಂಬಾ ಎಂಜಾಯ್ ಮಾಡಿದ್ದೆ ಎಂದು ಹೇಳಿದ್ದರು.
ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ವಿಕ್ರಾಂತ್ ರೋಣಗೆ ಮೊದಲ ಸ್ಥಾನ
ವಿಕ್ರಾಂತ್ ರೋಣ ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿಬಂದ ಸಿನಿಮಾವಾಗಿದೆ. ಜಾಕ್ ಮಂಜು ನಿರ್ಮಾಣದಲ್ಲಿ ಸಿನಿಮಾ ಮೂಡಿಬಂದಿದೆ. ಈ ಸಿನಿಮಾದಲ್ಲಿ ಸುದೀಪ್ ಜೊತೆ ಅನೂಪ್ ಭಂಡಾರಿ ಮತ್ತು ನೀತಾ ಅಶೋಕ್ ನಟಿಸಿದ್ದಾರೆ. ಇನ್ನು ವಿಶೇಷ ಎಂದರೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜಾಕ್ವೆಲಿನ್ ಹೆಜ್ಜೆ ಹಾಕಿರುವ ರಾ..ರಾ.. ರಕ್ಕಮ್ಮ ಹಾಡು ಸೂಪರ್ ಹಿಟ್ ಆಗಿದ್ದು ಸಿನಿ ಪ್ರಿಯರು ಮೆಚ್ಚಿಕೊಂಡಿದ್ದಾರೆ. ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ವಿಕ್ರಾಂತ್ ರೋಣನನ್ನು ಜುಲೈ 28ರಂದು ಕಣ್ತುಂಬಿಕೊಳ್ಳಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.