ಪರ-ವಿರೋಧ ಚರ್ಚೆ: ಕೊನೆಗೂ ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ

By Suvarna News  |  First Published Nov 14, 2021, 11:40 PM IST

* ವಿವಾದ ಸೃಷ್ಠಿಸಿಕೊಂಡ ಹಿರಿಯ ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖ
* ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ
* ಇದರ ಮಧ್ಯೆ ಕ್ಷಮೆಯಾಚಿಸಿದ ಹಂಸಲೇಖ


ಬೆಂಗಳೂರು, (ನ.14): ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ (Hamsalekha) ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

 ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದೆ. ನೆಟ್ಟಿಗರು ಹಂಸಲೇಖ ಮಾತುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರು ವಿಡಿಯೋ ಮುಖಾಂತರ ಕ್ಷಮೆ ಕೇಳಿದ್ದಾರೆ.

Tap to resize

Latest Videos

ಭಾರತದಲ್ಲಿ ಮೊದಲ ವಿಶ್ವದರ್ಜೆ ರೈಲುನಿಲ್ದಾಣ, ಫ್ಯಾನ್ಸ್ ಜೊತೆ ಚಿತ್ರ ವೀಕ್ಷಿಸಿದ ಶಿವಣ್ಣ; ನ.14ರ ಟಾಪ್ 10 ಸುದ್ದಿ!

ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ನಾದಬ್ರಹ್ಮ ಹಂಸಲೇಖ ಪೇಜಾವರ ಶ್ರೀಗಳ  (pejavara sri)ವಿರುದ್ಧ ಹೇಳಿಕೆ ನೀಡಿದ್ದರು. ಮೇಲುಜಾತಿ ಹಾಗೂ ಕೀಳುಜಾತಿ, ಜಾತಿತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಅಂಬೇಡ್ಕರ್ ವಿಚಾರವನ್ನು ಕೂಡ ಉಲ್ಲೇಖಿಸಿದ್ದರು. ಇಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು. 

ವಿಡಿಯೋ ಮೂಲಕ ಕ್ಷಮೆ
ಫೇಸ್‌ ವಿಡಿಯೋ ಮೂಲಕ ಕ್ಷಮೆಯಾಚಿಸಿರುವ ಹಂಸಲೇಖ ಅವರು, ನನಗೆ ಗೊತ್ತಿದೆ. ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು. ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ, ತಪ್ಪಾಗಿದೆ. ಅಸ್ಪ್ರಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಈ ಅನಿಷ್ಠವನ್ನು ತೊಡೆದು ಹಾಕುವುದಕ್ಕೆ ಪೇಜಾವರರಂಥ ಗುರುಹಿರಿಯರು ಅಪಾರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಬಗ್ಗೆ ನನಗೆ ಆ ಬಗ್ಗೆ ಅಪಾರ ಗೌರವವಿದೆ ಎಂದಿದ್ದಾರೆ.

ನಾನು ಒಬ್ಬ ಸಂಗೀತಗಾರ. ನಮಗ್ಯಾಕೆ ಟ್ರೋಲು, ಕಂಟ್ರೋಲ್ ಆಗಿರುವುದು ನಮ್ಮ ಕೆಲಸ. ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡಿಯೇ ಮಾಡುತ್ತೇನೆ ಎಂದು ಹೇಳಿದ್ದಾರೆ.

ಹಂಸಲೇಖ ಹೇಳಿದ್ದೇನು?
ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ..' ಎಂದು ಹೇಳಿದ್ದರು.

'ಬಿಳಿಗಿರಿ ರಂಗಯ್ಯ ಸೋಲಿಗರ ಮನೆಯ ಹೆಣ್ಣಿನೊಂದಿಗೆ ರಮಿಸಿದರೆ, ಅದರಲ್ಲಿ ಏನ್ ದೊಡ್ಡ ವಿಷ್ಯ ಇದೆ? ಅದೇ ಸೋಲಿಗರ ಹೆಣ್ಣು ಮಗಳನ್ನು ಕರೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿ ಇಟ್ಟು ಗೌರವಿಸಿದ್ದರೆ, ಅದು ಬಿಳಿಗಿರಿ ರಂಗಯ್ಯನ ತಾಕತ್ತು. ಸೂರ್ಯ ಉದಯಿಸುವುದಕ್ಕಿಂತ ಮುಂಚೆ ಸೋಲಿಗರ ಮನೆಗೆ ಬಂದು ಆ ಹೆಣ್ಣು ಮಗಳೊಂದಿಗೆ ಬಿಳಿಗಿರಿ ರಂಗಯ್ಯ ಸಂಸಾರ ನಡೆಸಿ ಬೆಳಕು ಹರಿಯುವುದರೊಳಗೆ ಹೋಗಿ ಕಲ್ಲಾಗುತ್ತಾನಂತೆ! ಅದೇನು ದೊಡ್ಡ ವಿಷಯ, ಅದೊಂದು ನಾಟಕ, ಬೂಟಾಟಿಕೆ. 

ದಲಿತರ ಮನೆಗೆ ಬಲಿತರು ಹೋಗುವುದು ಅದೇನು ದೊಡ್ಡ ವಿಷಯವೇ..? ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು' ಎಂದು ಹಂಸಲೇಖ ಹೇಳಿದ್ದಾರೆ.

click me!