ಮಲಯಾಳಂ ಚಿತ್ರರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ: ಸಿಎಂಗೆ ಕನ್ನಡ ಚಿತ್ರರಂಗ ಮೊರೆ

By Kannadaprabha News  |  First Published Sep 6, 2024, 12:38 PM IST

ನೆರೆಯ ಕೇರಳದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರ ಣಗಳು ಹೊರಬಂದಿವೆ. ಆದ್ದರಿಂದ ಅಲ್ಲಿನ ಸರ್ಕಾರ ತನಿಖೆಗೆ ಸಮಿತಿ ನೇಮಿಸಿದೆ. ಅದೇ ರೀತಿ ರಾಜ್ಯದಲ್ಲೂ ಸ್ಯಾಂಡಲ್ ವುಡ್ ನಟಿಯರು ಲೈಂಗಿಕ ದೌರ್ಜನ್ಯ ಸೇರಿದಂತೆ ಎದುರಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂದು ಮನವಿ ಸಲ್ಲಿಸಿತು.


ಬೆಂಗಳೂರು(ಸೆ.06): ಮಲಯಾಳಂ ಚಿತ್ರರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದ ಬೆನ್ನಲ್ಲೇ, ಸ್ಯಾಂಡಲ್‌ವುಡ್ ನಲ್ಲೂ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಬೇಕು ಎಂಬ ಹಕ್ಕೊ ತ್ತಾಯ ತೀವ್ರವಾಗಿದೆ. 

ಮುಖ್ಯಮಂತ್ರಿಗಳ ನಿವಾಸ ಕಾವೇರಿಗೆ ಗುರುವಾರ ಆಗಮಿಸಿದ 'ಫೈರ್' ಸಂಸ್ಥೆಯ ನಿಯೋಗ ಈ ಸಂಬಂಧ ಸಿದ್ದರಾ ಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ನೆರೆಯ ಕೇರಳದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರ ಣಗಳು ಹೊರಬಂದಿವೆ. ಆದ್ದರಿಂದ ಅಲ್ಲಿನ ಸರ್ಕಾರ ತನಿಖೆಗೆ ಸಮಿತಿ ನೇಮಿಸಿದೆ. ಅದೇ ರೀತಿ ರಾಜ್ಯದಲ್ಲೂ ಸ್ಯಾಂಡಲ್ ವುಡ್ ನಟಿಯರು ಲೈಂಗಿಕ ದೌರ್ಜನ್ಯ ಸೇರಿದಂತೆ ಎದುರಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಬೇಕು ಎಂದು ಮನವಿ ಸಲ್ಲಿಸಿತು. ಹಿರಿಯ ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟ ಚೇತನ್, ನಟಿ ಶೃತಿ ಹರಿಹರನ್ ನಿಯೋಗದಲ್ಲಿದ್ದರು.

Latest Videos

undefined

ದುಬೈನ ಹೊಟೇಲ್‌ನಲ್ಲಿ ಊಟ ನೀರು ಕೊಡದೇ 3 ದಿನ ಕೂಡಿ ಹಾಕಿದ ನಟ ನಿವಿನ್ ಪೌಲ್ ಗ್ಯಾಂಗ್

ಪತ್ರದ ಬೆನ್ನಲ್ಲೇ ಭೇಟಿ: 

ಕನ್ನಡ ಚಿತ್ರರಂಗ ದಲ್ಲಿನ ಲೈಂಗಿಕ ಹಿಂಸೆ ಬಗ್ಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆ ನಡೆಸುವಂತೆ ಬುಧವಾರ ವಷ್ಟೇ ಫೈರ್ (ಫಿಲ್ಡ್ ಇಂಡಸ್ಟ್ರಿ ಫಾರ್ ರೈಟ್ಸ್ ಆ್ಯಂಡ್ ಈಕ್ವಾಲಿಟಿ) ಸಂಸ್ಥೆಯು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿತ್ತು. ಚಿತ್ರರಂಗದ ಹಲವು ಗಣ್ಯರು ಈ ಪತ್ರಕ್ಕೆ ಸಹಿ ಹಾಕಿದ್ದರು. ಇದರ ಬೆನ್ನಲ್ಲೇ ಗುರು ವಾರ ಫೈರ್ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. 

ಮತ್ತೊಂದೆಡೆ, ನಟಿ ಸಂಜನಾ ಅವರು ಸಿದ್ದರಾಮಯ್ಯ ಅವರನ್ನು ಗುರುವಾರ ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ, ರಾಜ್ಯದಲ್ಲೂ ಕೇರಳ ಮಾದರಿಯಲ್ಲಿ ಲೈಂಗಿಕ ದೌರ್ಜನ್ಯಗಳ ತನಿಖೆಗೆ ಸಮಿತಿ ರಚಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. 

click me!