
ಗೋಲ್ಡನ್ ಸ್ಟಾರ್ ಗಣೇಶ್ ಮತ್ತೊಮ್ಮೆ ಕ್ಲಾಸಿಕ್ ಲುಕ್‌ನಲ್ಲಿ ಎಂಟ್ರಿ ಕೊಡಲಿದ್ದಾರೆ ಎನ್ನುತ್ತಿದೆ ‘ತ್ರಿಬಲ್ ರೈಡಿಂಗ್’ ಚಿತ್ರದ ಫಸ್ಟ್ ಲುಕ್. ಯುಗಾದಿ ಹಬ್ಬದ ಅಂಗವಾಗಿ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದ್ದು, ಕೈಯಲ್ಲಿ ಗಾಲ್ಫ್ ಸ್ಟಿಕ್ ಹಿಡಿದ ಗಣೇಶ್ ಸ್ಲೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.
ಮಹೇಶ್ ಗೌಡ ನಿರ್ದೇಶನದ, ವೈಎಂ ರಾಮ್‌ಗೋಪಾಲ್ ನಿರ್ದೇಶನದ ಈ ಚಿತ್ರದಲ್ಲಿ ಮೇಘಾ ಶೆಟ್ಟಿ, ರಚನಾ ಇಂದರ್, ಅದಿತಿ ಪ್ರಭುದೇವ ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಾಧು ಕೋಕಿಲ, ರಂಗಾಯಣ ರಘು, ರವಿಶಂಕರ್ ಗೌಡ, ಕುರಿ ಪ್ರತಾಪ್, ಡಿಂಗ್ರಿ ನಾಗರಾಜ್ ಮುಖ್ಯ ಪಾತ್ರಧಾರಿಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
15 ವರ್ಷಗಳ ನಂತರ ಸವಾಲಿನ ಪಾತ್ರ ಆಯ್ಕೆ ಮಾಡಿಕೊಂಡ ನಟ ಗಣೇಶ್! ...
‘ಸ್ಪೋರ್ಟ್‌್ಸ, ಪ್ರೀತಿ ಮತ್ತು ಫ್ಯಾಮಿಲಿ ಈ ಮೂರು ಅಂಶಗಳನ್ನು ಪ್ರಧಾನವಾಗಿಟ್ಟುಕೊಂಡು ರೂಪಿಸಿರುವ ಸಿನಿಮಾ ಇದು. ಒಬ್ಬ ನಟನಾಗಿ ತುಂಬಾ ಇಷ್ಟಪಟ್ಟು ಆಯ್ಕೆ ಮಾಡಿಕೊಂಡಿರುವ ಕತೆ ಇದು. ಫಸ್ಟ್ ಲುಕ್ ಪೋಸ್ಟರ್‌ಗೆ ಸಾಕಷ್ಟುಮೆಚ್ಚುಗೆ ಮಾತುಗಳು ಕೇಳಿ ಬರುತ್ತಿವೆ. ಚಿತ್ರ ಕೂಡ ಇದೇ ರೀತಿ ಹೊಸತನದಿಂದ ಕೂಡಿರುತ್ತದೆ’ ಎನ್ನುತ್ತಾರೆ ನಟ ಗಣೇಶ್.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.