
ಚಿತ್ರರಂಗದಲ್ಲಿ ಮತ್ತೊಂದು ಪ್ರಶಸ್ತಿ ಪ್ರಧಾನ ಸಮಾರಂಭ ಇತ್ತೀಚೆಗೆ ನಡೆಯಿತು. ಅದು ಫ್ಲೆಮಿಂಗೋ ಪ್ರಶಸ್ತಿ. ಇಲ್ಲಿ ಅನಿರುದ್ಧ ಅತ್ಯುತ್ತಮ ನಟ, ಭಾವನಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಬರಗೂರು 'ಅಮೃತಮತಿ'ಗೆ ಅಂತಾರಾಷ್ಟ್ರೀಯ ಪ್ರಶಸ್ತಿ!
ಯುವನಟ ಧವನ್ ಸೋಹಾ ಸಾರಥ್ಯದಲ್ಲಿ ಕಳೆದ ಎಂಟು ವರ್ಷಗಳ ಹಿಂದೆ ಆರಂಭವಾದ ಫ್ಲೆಮಿಂಗೋ ಚಲನಚಿತ್ರ ತರಬೇತಿ ಸಂಸ್ಥೆ ಈಗ ಅಗಾಧವಾಗಿ ಬೆಳೆದುನಿಂತಿದೆ. ಈ ಸಂಸ್ಥೆಯ ಮೂಲಕ ಕಲಿತ ನೂರಾರು ವಿದ್ಯಾರ್ಥಿಗಳು ಚಿತ್ರರಂಗ, ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.
ತಮ್ಮಲ್ಲಿ ತರಬೇತಿ ಪಡೆದವರಿಗೆ ಕಿರುತೆರೆ, ಹಿರಿತೆರೆಯಲ್ಲಿ ಅವಕಾಶಗಳನ್ನು ಕಲ್ಪಿಸುತ್ತಾ ಬಂದಿರುವ ಈ ಸಂಸ್ಥೆ ಸ್ಯಾಂಡಲ್‌ವುಡ್ ಸ್ಟಾರ್‌ನೈಟ್ಸ್, ಮಿಸ್ ಯುವರಾಣಿ ಸ್ಪರ್ಧೆ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ. ಅದರಂತೆ ಈ ಸಲವೂ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ಸಾಧಕರನ್ನು ಗುರ್ತಿಸಿ ಅತ್ಯುತ್ತಮ ನಟ, ಅತ್ಯುತ್ತಮ ನಟಿ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಗೌರವಕ್ಕೆ ಅನಿರುದ್‌್ಧ ಹಾಗೂ ಭಾವನಾ ಪಾತ್ರರಾಗಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.