Zooಗಳಿಗೆ 40 ಲಕ್ಷ ರು. ಸಂಗ್ರಹ; ದರ್ಶನ್‌ಗೆ ಕೃತಜ್ಞತೆ ತಿಳಿಸಿದ ಲಿಂಬಾವಳಿ!

By Suvarna NewsFirst Published Jun 8, 2021, 3:08 PM IST
Highlights

 ಪ್ರಾಣಿ ದತ್ತು ಪಡೆಯಲು ದೇಣಿಗೆ ನೀಡಿದ ಎಲ್ಲ ಪ್ರಾಣಿಪ್ರಿಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ ಅರವಿಂದ ಲಿಂಬಾವಳಿ!
 

ಮೈಸುರು: ಮೈಸೂರಿನ ಮೃಗಾಲಯದ ಪ್ರಾಣಿಗಳನ್ನು ದತ್ತು ತೆಗೆದುಕೊಂಡು ಪೋಷಿಸುತ್ತಿರುವ ಹಾಗೂ ಸಾರ್ವಜನಿಕರಿಗೆ ಮೃಗಾಲಯದ ಪ್ರಾಣಿ ದತ್ತು ತೆಗೆದುಕೊಳ್ಳಲು ಕರೆನೀಡಿದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರಿಗೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಕೃತಜ್ಞತೆ ಸಲ್ಲಿಸಿದ್ದಾರೆ. 

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ನಟ ದರ್ಶನ್‌ ಅವರು ಸ್ವಇಚ್ಛೆಯಿಂದ ಪ್ರಾಣಿ ಪ್ರಿಯರಲ್ಲಿ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವಂತೆ ಕರೆಕೊಟ್ಟರು. ಅವರ ಕರೆಯ ಮೇರೆಗೆ 40 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದೆ. ಕೊರೋನಾದ ಈ ಕಷ್ಟಕಾಲದಲ್ಲಿ ಸರ್ಕಾರ ಜನರ ರಕ್ಷಣೆಯ ಹೊಣೆ ಹೊತ್ತಿರುವ ಹಾಗೆ ದರ್ಶನ್‌ ಅವರು ಮೃಗಾಲಯದ ಪ್ರಾಣಿಗಳ ರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ಎಂದಿದ್ದಾರೆ.

ದರ್ಶನ್ ಕರೆಯಿಂದ Zooಗೆ ಹರಿದು ಬಂತು ಭರಪೂರ ನೆರವು! 

ಹಾಗೆಯೇ ಪ್ರಾಣಿ ದತ್ತು ಪಡೆಯಲು ದೇಣಿಗೆ ನೀಡಿದ ಎಲ್ಲ ಪ್ರಾಣಿಪ್ರಿಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಾನೂ ಪ್ರಾಣಿ ಪ್ರಿಯರಲ್ಲಿ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯಬೇಕು ಮತ್ತು ಈ ಉದ್ದೇಶಕ್ಕಾಗಿ ಹೆಚ್ಚಿನ ನೆರವು ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಲಿಂಬಾವಳಿ ಹೇಳಿದ್ದಾರೆ.

click me!