ನಿಮ್ಮ ಸುಖಾಗಮನ ಬಯಸುವ; 'ಹೊಂದಿಸಿ ಬರೆಯಿರಿ' ನಿರ್ದೇಶಕರ ಸಿನಿಮಾದಲ್ಲಿ ‌'ಗೋಲ್ಡನ್‌ ಸ್ಟಾರ್‌' ಗಣೇಶ್

Published : Feb 15, 2026, 05:41 PM IST
nimma sukhagamana bayasuva movie

ಸಾರಾಂಶ

Golden Star Ganesh Next Movie: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ, ‘ಹೊಂದಿಸಿ ಬರೆಯಿರಿ’, ‘ತೀರ್ಥರೂಪ ತಂದೆಯವರಿಗೆ’ ಅಂತಹ ಉತ್ತಮ ಸಿನಿಮಾಗಳ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಸಿನಿಮಾ ‘ತಮ್ಮ ಸುಖಾಗಮನ ಬಯಸುವ’. 

ವೈಷ್ಣವಿ ಫಿಲಂಸ್ ಮೂಲಕ ವಿಜಯ್ ಲೋಹಿತ್ ಅವರು ನಿರ್ಮಿಸುತ್ತಿರುವ, ಸತೀಶ್ ಎಚ್ ಗೌಡ ಅವರ ಸಹ ನಿರ್ಮಾಣವಿರುವ, ಶೀರ್ಷಿಕೆಯಿಂದಲೇ ಎಲ್ಲರ ಗಮನ ಸೆಳೆದಿರುವ ‘ತಮ್ಮ ಸುಖಾಗಮನ ಬಯಸುವ’ ಸಿನಿಮಾದ ಮುಹೂರ್ತ ಸಮಾರಂಭ ಮಾಹಾ ಶಿವರಾತ್ರಿಯ ಶುಭದಿನದಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಶಿಲ್ಪ ಗಣೇಶ್ ಅವರು ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಣೇಶ್ ಅವರ ಸಾಕಷ್ಟು ಅಭಿಮಾನಿಗಳು ಹಾಗೂ ಸ್ನೇಹಿತರು ಮುಹೂರ್ತ ಸಮಾರಂಭಕ್ಕೆ ಸಾಕ್ಷಿಯಾದರು.

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಏನು ಹೇಳಿದ್ರು?

ಇಂದು ನನ್ನ "ಗೋಲ್ಡನ್" ದಿನ ಎಂದು ಮಾತನಾಡಿದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ, 2006 ರಲ್ಲಿ "ಮುಂಗಾರು ಮಳೆ" ತೆರೆ ಕಂಡಾಗ ನಾನು ಇಂಜಿನಿಯರಿಂಗ್ ವಿದ್ಯಾರ್ಥಿ. ಆ ಸಿನಿಮಾವನ್ನು ಎಷ್ಟು ಬಾರಿ ನೋಡಿದ್ದೇನೊ ಲೆಕ್ಕ ಇಲ್ಲ. ಇಂದು ಅವರ ಜೊತೆಗೆ ಸಿನಿಮಾ ಮಾಡುತ್ತಿರುವುದು ಬಹಳ ಖುಷಿಯಾಗಿದೆ. ಇದು ಗಣೇಶ್ ಅವರ ಇಪ್ಪತ್ತು ವರ್ಷಗಳ ಜರ್ನಿಯನ್ನು ಸಂಭ್ರಮಿಸುವ ಸಮಯ. "ತೀರ್ಥರೂಪ ತಂದೆಯವರಿಗೆ" ಸಿನಿಮಾ ಶೂಟಿಂಗ್ ಸಮಯದಲ್ಲಿ ನನ್ನ ಸ್ನೇಹಿತನ ಮೂಲಕ ಗಣೇಶ್ ಅವರನ್ನು ಸಂಪರ್ಕ ಮಾಡಿ ಈ ಚಿತ್ರದ ಕಥೆ ಹೇಳಿದೆ. ಇದು ಗಣೇಶ್ ಅವರಿಗಾಗಿಯೇ ಬರೆದಿರುವ ಕಥೆ. ಈ ಕಥೆಗೆ ಅವರೆ ಸೂಕ್ತ ಹೀರೋ. ಇದೊಂದು ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ ಹಾಗೂ ಎಮೋಷನಲ್ ಡ್ರಾಮ. ವೈಷ್ಣವಿ ಫಿಲಂಸ್ ಲಾಂಛನದಲ್ಲಿ ವಿಜಯ್ ಲೋಹಿತ್ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸತೀಶ್ ಎಚ್ ಗೌಡ ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಲಿದ್ದಾರೆ. ಉಳಿದ ತಾರಾಬಳಗ ಹಾಗೂ ತಂತ್ರಜ್ಞರ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುತ್ತೇವೆ. ಇನ್ನೂ, ಶೀರ್ಷಿಕೆಯ ಬಗ್ಗೆ ಹೇಳುವುದಾದರೆ, ಶೀರ್ಷಿಕೆ ಬಳಕೆಗೆ ಹತ್ತಿರವಾಗಿರಬೇಕು. ಜನರಿಗೆ ಆಪ್ತವಾಗಬೇಕು. ನನ್ನ ಹಿಂದಿನ ಎರಡು ಚಿತ್ರಗಳ ಶೀರ್ಷಿಕೆಗಳು ಹಾಗೆ ಇತ್ತು. ಈ ಶೀರ್ಷಿಕೆ ಕೂಡ ಜನರಿಗೆ ಆಪ್ತವಾಗುತ್ತದೆ ಜೊತೆಗೆ ಕಥೆಗು ಹಾಗೂ ಪಾತ್ರಗಳಿಗೂ ಪೂರಕವಾಗಿದೆ ಎಂದರು.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಏನಂದ್ರು?

"ಮುಂಗಾರು ಮಳೆ" 2006 ರಲ್ಲಿ ಬಿಡುಗಡೆಯಾಗಿದ್ದು, ಈಗ 2026. ಇಪ್ಪತ್ತು ವರ್ಷಗಳಾಗಿದೆ. ಇಪ್ಪತ್ತು ವರ್ಷಗಳು ಹೇಗೆ ಕಳೆಯಿತು ಗೊತ್ತಾಗಲಿಲ್ಲ. ದೇವರು ನನಗೆ ಒಳ್ಳೆಯ ನಿರ್ಮಾಪಕರು, ನಿರ್ದೇಶಕರು, ಬರಹಗಾರರು ಹಾಗೂ ನಿಮ್ಮೆಲ್ಲರ ಪ್ರೀತಿ ಕೊಟ್ಟಿದ್ದಾನೆ. ಇದು ಹೀಗೆ ಮುಂದುವರೆಯಲಿ. ಇನ್ನೂ, ಒಂದು ದಿನ ಸ್ನೇಹಿತರೊಬ್ಬರು ಫೋನ್ ಮಾಡಿ ನನ್ನ ಸ್ನೇಹಿತ ಒಂದು ಸ್ಕ್ರಿಪ್ಟ್ ಮಾಡಿಕೊಂಡಿದ್ದಾನೆ. ಅದು ನಿಮಗಾಗಿಯೇ ಮಾಡಿರುವ ಕಥೆಯಂತೆ ಎಂದರು. ನಾನು ಯಾರು ಅಂತ ಕೇಳಿದೆ. ರಾಮೇನಹಳ್ಳಿ ಜಗನ್ನಾಥ. "ಹೊಂದಿಸಿ ಬರೆಯಿರಿ" ನಿರ್ದೇಶಕರು ಎಂದರು. ಹೌದಾ. ನಾನು ಆ ಸಿನಿಮಾ ನೋಡಿದ್ದೇನೆ. ಬಹಳ ಚೆನ್ನಾಗಿದೆ. ಅವರೊಬ್ಬ ಸೆನ್ಸಿಬಲ್ ರೈಟರ್. ಮನುಷ್ಯನ ಭಾವನೆಗಳನ್ನು ಆ ಚಿತ್ರದಲ್ಲಿ ತುಂಬಾ ಚೆನ್ನಾಗಿ ಹೇಳಿದ್ದಾರೆ ಅಂದೆ. ಆನಂತರ ಜಗನ್ನಾಥ ಅವರು ಬಂದು ಕಥೆ ಹೇಳಿದರು. ಕಥೆ ಕೇಳುವಾಗಲೇ ಸಂತೋಷದಲ್ಲಿ ಅಳು ಬಂತು. ಅಂತಹ ಅಪರೂಪದ ಕಥೆ ಇದು” ಎಂದಿದ್ದಾರೆ.

“ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ನಿರ್ದೇಶಕರ ಹಿಂದಿನ ಎರಡು ಚಿತ್ರಗಳ ಶೀರ್ಷಿಕೆಗಳು ಬಹಳ ಚೆನ್ನಾಗಿತ್ತು. ನಮ್ಮ ಚಿತ್ರಕ್ಕೂ ಇಂತಹ ಶೇರ್ಷಿಕೆಯನ್ನೇ ಆಯ್ಕೆ ಮಾಡಿ ಎಂದು ಹೇಳಿದ್ದೆ. "ತಮ್ಮ ಸುಖಾಗಮನ ಬಯಸುವ" ಎಂದು ಎಲ್ಲರಿಗೂ ಪ್ರಿಯವಾಗುವ ಶೀರ್ಷಿಕೆ ಇಟ್ಟಿದ್ದಾರೆ. ಚಿತ್ರವನ್ನು ಸಹ ಚೆನ್ನಾಗಿ ಮಾಡುತ್ತಾರೆ ಎಂಬ ಭರವಸೆ ಇದೆ. ಅದಕ್ಕೆ ನಿರ್ಮಾಪಕರು ಸಹಕಾರ ನೀಡುತ್ತಾರೆ. ಇನ್ನೂ, ಅರ್ಜುನ್ ಜನ್ಯ ಹಾಗೂ ನನ್ನ ಕಾಂಬಿನೇಶನ್ ನಲ್ಲಿ ಸಾಕಷ್ಟು ಜನಪ್ರಿಯ ಹಾಡುಗಳು ಬಂದಿದೆ. ಈ ಚಿತ್ರದಲ್ಲೂ ಸುಮಧುರ ಹಾಡುಗಳಿರಲ್ಲಿದೆ ಎಂದು ನಾಯಕ ಗಣೇಶ್ ಹೇಳಿದ್ದಾರೆ.

ಇದು ನಮ್ಮ ಸಂಸ್ಥೆಯ ಎರಡನೇ ಸಿನಿಮಾ. ಮೊದಲ ಸಿನಿಮಾಕ್ಕೆ ತಾವು ನೀಡಿದ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆಯಲಿ ಎಂದರು ನಿರ್ಮಾಪಕ ವಿಜಯ್ ಲೋಹಿತ್. ಸಹ ನಿರ್ಮಾಪಕ ಸತೀಶ್ ಎಚ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅಶ್ವಿನಿ ಪುನೀತ್​ರನ್ನೇ ಯಾರು ಎಂದು ಪ್ರಶ್ನಿಸಿದ ಸಿಎಂ ಸಿದ್ದು: ಅಪ್ಪು ಫ್ಯಾನ್ಸ್​ ಗರಂ- ವಿಡಿಯೋ ವೈರಲ್​
ಪ್ರೇಮಿಗಳ ದಿನದ ​ಬೆಡ್​ರೂಂ ವಿಡಿಯೋ ಹಂಚಿಕೊಂಡ ನಟಿ ಸೋನಲ್ ​ಮೊಂಥೇರೊ: ಪತಿಯ ಗಿಫ್ಟ್​ ಸಸ್ಪೆನ್ಸ್​!