
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಮತ್ತೊಂದು ಸುಂದರ ಸಿನಿಮಾ ಬರ್ತಿದೆ. ಇವರಿಬ್ಬರ ಕಾಂಬಿನೇಷನ್ ನಲ್ಲಿ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಅಭಿಮಾನಿಗಳ ಹೃದಯ ಗೆದ್ದಿವೆ. ಇದೀಗ ಮತ್ತೊಂದು ಬಹುನಿರೀಕ್ಷೆಯ ಸಿನಿಮಾ ಸಿದ್ಧವಾಗುತ್ತಿದೆ. ಅದೇ ಬಾನದಾರಿಯಲ್ಲಿ. ಹೌದು, ಸ್ಪೋರ್ಟ್ಸ್ ಜಾನರ್‌ನ ಸಿನಿಮಾ ಇದಾಗಿದೆ. ಅಂದಹಾಗೆ ಈಗಾಗಲೇ ಅನೇಕ ಕ್ರೀಡಾ ಆಧಾರಿತ ಸಿನಿಮಾಗಳು ಬಂದಿವೆ ಹಾಗೂ ರಿಲೀಸ್‌ಗೂ ರೆಡಿಯಾಗಿವೆ. ಈ ನಡುವೆ ಗಣೇಶ್ ನಾಯಕನಾಗಿರುವ ಮತ್ತೊಂದು ವಿಭಿನ್ನ ಬರ್ತಿದೆ. ಈ ಚಿತ್ರದಲ್ಲಿ ಗಣೇಶ್ ಕ್ರಿಕೆಟ್ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ನಾಯಕಿಯಾಗಿ ಸಪ್ತಸಾಗರದಾಚೆ ಎಲ್ಲೋ ಸಿನಿಮಾದ ನಾಯಕಿ ರುಕ್ಮಿಣಿ ವಸಂತ್ ಗಣೇಶ್ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದಾರೆ. ರುಕ್ಮಿಣಿ ಈ ಧಾರಾವಾಹಿಯಲ್ಲಿ ಈಜುಗಾರ್ತಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಸದ್ಯ ಸಿನಿಮಾದ ಚಿತ್ರೀಕರಣ ಮಂಗಳೂರಿನಲ್ಲಿ ನಡೆಯುತ್ತಿತ್ತು, ಇದೀಗ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗೋಲ್ಡನ್ ಸ್ಟಾರ್ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣಕ್ಕೆ ಸಿನಿಮಾ ತಂಡ ಸಜ್ಜಾಗಿದ್ದು ವಿದೇಶಕ್ಕೆ ಹಾರಲು ರೆಡಿಯಾಗಿದೆ. ಹೌದು ಸಿನಿಮಾದ ಮುಂದಿನ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ ನಡೆಯಲಿದ್ದು, ಸದ್ಯದಲ್ಲೇ ಚಿತ್ರತಂಡ ಆಫ್ರಿಕಾಗೆ ತೆರಳಲಿದೆ.
ಸಿನಿಮಾದಲ್ಲಿ ಗಣೇಶ್ ರೊಮ್ಯಾನ್ಸ್ ದೃಶ್ಯ ನೋಡಿ ಪತ್ನಿ ಹೇಳಿದ್ದೇನು?
ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರದ ಕಥೆ ಪ್ರೀತಾ ಜಯರಾಂ ಅವರದು. ಮಾಸ್ತಿ ಸಂಭಾಷಣೆ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.
ಶ್ರೀವಾರಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಬಾನ ದಾರಿಯಲ್ಲಿ' ಚಿತ್ರದ ತಾರಾಬಳಗದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರೀಶ್ಮಾ ನಾಣಯ್ಯ, ರಂಗಾಯಣ ರಘು ಸೇರಿದಂತೆ ಮುಂತಾದವರಿದ್ದಾರೆ.
Baanadariyalli Movie: ಛಾಯಾಗ್ರಾಹಕಿ ಪ್ರೀತಾ ಜಯರಾಮ್ ಬರೆದ ಕತೆಗೆ ಗಣೇಶ್ ಹೀರೋ
ಬಾನದಾರಿಯಲ್ಲಿ ಈ ಸಾಲು ಕನ್ನಡ ಪ್ರೇಕ್ಷಕರಿಗೆ ತುಂಬಾ ಹತ್ತಿರವಾಗಿದೆ. ಅದರಲ್ಲೂ ಅಪ್ಪು ಅಭಿಮಾನಿಗಳಿಗೆ ಈ ಸಾಲು ಭಾವನಾತ್ಮಕವಾಗಿ ಕನೆಕ್ಟೆ ಆಗಿದೆ. ಯಾಕೆಂದರೆ ಇದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಹಾಡೊಂದರ ಸಾಲಾಗಿದೆ. ಅದೇ ಸಾಲನನ್ನು ಚಿತ್ರದ ಶೀರ್ಷಿಕೆಯಾಗಿ ಬಳಸಿಕೊಳ್ಳಲಾಗಿದೆ. ಈಗಾಗಲೇ ಬಾನ ದಾರಿಯಲ್ಲಿ ಟೈಟಲ್ ಶೀರ್ಷಿಕೆ ಈಗಾಗಲೇ ಜನರ ಮನ ಗೆದ್ದಿದೆ. ಇನ್ನು ಸಿನಿಮಾ ಹೇಗಿರಲಿದೆ ಎಂದು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.