
ಬೆಂಗಳೂರು(ಜ.14): ಸಂಕ್ರಾತಿ ಹಬ್ಬಕ್ಕೆ ಸಿನಿ ರಸಿಕರಿಗೆ ಡಬಲ್ ಧಮಾಕ. ಒಂದೆಡೆ ಹಬ್ಬದ ಸಂಭ್ರಮ, ಮತ್ತೊಂದೆಡೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಭಜರಂಗಿ-2 ಚಿತ್ರದ ಪೋಸ್ಟ್ ರಿಲೀಸ್ ಆಗಿದೆ. ಪೋಸ್ಟರ್ ಈಗಾಗಲೇ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.
ಇದನ್ನೂ ಓದಿ: ಟಗರು' ಹಾಡಿಗೆ ಸಖತ್ ಸ್ಟೆಪ್ ಹಾಕಿದ ಶಿವಣ್ಣ; ಇಲ್ಲಿದೆ ವಿಡಿಯೋ!
ಪೋಸ್ಟರ್‌ನಲ್ಲಿ ಶಿವರಾಜ್ ಕುಮಾರ್ ಶಿವನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ವೈಬ್ರೆಂಟ್ ಆಗಿದೆ. ಫಸ್ಟ್ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದೀಗ ಚಿತ್ರ ಬಿಡುಗಡೆಗೆ ಕಾಯುತ್ತಿದ್ದಾರೆ. ಶಿವರಾಜ್ ಕುಮಾರ್ ಭಜರಂಗಿ ಚಿತ್ರ ಯಶಸ್ವಿಯಾಗಿತ್ತು. ಹೀಗಾಗಿ ಭಜರಂಗಿ 2 ಚಿತ್ರದ ಸಾಕಷ್ಟು ನಿರೀಕ್ಷೆಗಳಿವೆ.
ಇದನ್ನೂ ಓದಿ: ನೋವು ಮರೆಯಲು ಆಪರೇಶನ್ ಥಿಯೇಟರ್‌ನಲ್ಲಿ ಶಿವಣ್ಣ ಹಾಡಿಗೆ ಕೈ ಆಡಿಸಿದ ಅಭಿಮಾನಿ!
ಭಜರಂಗಿ 2 ಚಿತ್ರಕ್ಕೆ ಎ ಹರ್ಷಾ ಆ್ಯಕ್ಷನ್ ಕಟ್ ಹೇಳಿದ್ದು, ಜಯಣ್ಣ ಭೋಗೇಂದ್ರ ಚಿತ್ರ ನಿರ್ಮಾಣ ಮಾಡಿದ್ದಾರೆ. ಬಹುಕೋಟಿ ವೆಚ್ಚದ ಭಜರಂಗಿ-2 ಚಿತ್ರ ಸ್ಯಾಂಡಲ್‌ವುಡ್ ಇತಿಹಾಸದಲ್ಲಿ ಹೊಸ ಸಂಚಲನ ಮೂಡಿಸಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.