ಹೇಮಂತ್ ರಾವ್ 'ಅಜ್ಞಾತವಾಸಿ' ಹಾಡು ಹೊರಗಜಗತ್ತಿಗೆ ಬಂತು.. 'ನಗುವಿನ ನೇಸರ..' ಎಂದ ಪಾವನಾ ಗೌಡ!

ಹೇಮಂತ್ ರಾವ್ (Hemanth Rao) ತಮ್ಮದೇ ದಾಕ್ಷಾಯಿಣಿ ಟಾಕೀಸ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಿಸಿರುವ ಚೊಚ್ಚಲ ಸಿನಿಮಾ ಅಜ್ಞಾತವಾಸಿ (Ajnathavasi) ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 11ಕ್ಕೆ ರಾಜ್ಯಾದ್ಯಂತ ತೆರೆಗೆ ಬರುತ್ತಿರುವ ಈ ಚಿತ್ರದ ಮೆಲೋಡಿ ಹಾಡನ್ನು ಬಿಡುಗಡೆ..


ಹೇಮಂತ್ ರಾವ್ (Hemanth Rao) ತಮ್ಮದೇ ದಾಕ್ಷಾಯಿಣಿ ಟಾಕೀಸ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಿಸಿರುವ ಚೊಚ್ಚಲ ಸಿನಿಮಾ ಅಜ್ಞಾತವಾಸಿ (Ajnathavasi) ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 11ಕ್ಕೆ ರಾಜ್ಯಾದ್ಯಂತ ತೆರೆಗೆ ಬರುತ್ತಿರುವ ಈ ಚಿತ್ರದ ಮೆಲೋಡಿ ಹಾಡನ್ನು ಬಿಡುಗಡೆ ಮಾಡಲಾಗಿದೆ. ಸರಿಗಮ ಕನ್ನಡ ಯೂಟ್ಯೂಬ್ ನಲ್ಲಿ ನಗುವಿನ ನೇಸರ ಎಂಬ ಮೆಲೋಡಿ ಗೀತೆಯನ್ನು ಅನಾವರಣ ಮಾಡಲಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುನಿಧಿ ಗಣೇಶ್ ಧ್ವನಿಯಾಗಿದ್ದು, ಚರಣ್ ರಾಜ್ ಟ್ಯೂನ್ ಹಾಕಿದ್ದಾರೆ. ನಗುವಿನ ನೇಸರ ಹಾಡಿನಲ್ಲಿ ಪಾವನಾ ಗೌಡ ಮಿಂಚಿದ್ದಾರೆ.

ಅಜ್ಞಾತವಾಸಿ ಚಿತ್ರಕ್ಕೆ 'ಗುಳ್ಟು' ಸಾರಥಿ ಜನಾರ್ಧನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಟೀಸರ್ ಒಳ್ಳೆ ರೆಸ್ಪಾನ್ಸ್ ಸಿಕ್ಕಿದ್ದು, ಈಗ ಹಾಡುಗಳ ಸರದಿ. ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಅಜ್ಞಾತವಾಸಿಯಲ್ಲಿ ಪಾವನಾ ಗೌಡ (Pavana Gowda) ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ. ಜನಾರ್ಧನ್ ಚಿಕ್ಕಣ್ಣ ಗುರುಗಳಾದ ಕೃಷ್ಣರಾಜ್ ಅವರು ಅಜ್ಞಾತವಾಸಿ ಚಿತ್ರಕ್ಕೆ ಕಥೆ ಬರೆದ್ದಾರೆ. 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಕಥಾಹಂದರ ಚಿತ್ರದಲ್ಲಿದೆ.

Latest Videos

ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ, ಭರತ್ ಎಂ.ಸಿ ಸಂಕಲನಕಾರರಾಗಿ, ಉಲ್ಲಾಸ್ ಹೈದೂರು ಕಲಾ ನಿರ್ದೇಶಕರಾಗಿ ಅಜ್ಞಾತವಾಸಿ ಚಿತ್ರದಲ್ಲಿ ಕಾರ್ಯನಿರ್ವಾಹಿಸಿದ್ದಾರೆ. ಎನ್ ಹರಿಕೃಷ್ಣ ಸಹ ನಿರ್ದೇಶಕರಾಗಿ ದುಡಿದಿದ್ದು, ಜಿ.ಬಿ.ಭರತ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಈ ಚಿತ್ರದ ಬಗ್ಗೆ ಸ್ಯಾಂಡಲ್‌ವುಡ್ ಅಂಗಳದಲ್ಲಿ ನಿರೀಕ್ಷೆ ಮನೆಮಾಡಿದೆ.

ಅಂದಹಾಗೆ, ನಟಿ ಪಾವನಾ ಗೌಡ ಅವರು ಈ ಮೊದಲು 'ಗೊಂಬೆಗಳ ಲವ್' ಚಿತ್ರದಿಂದ ಕರ್ನಾಟಕದ ತುಂಬಾ ಮನೆಮಾತಾಗಿದ್ದರು. ಆದರೆ ಆ ಬಳಿಕ ಅವರಿಗೆ ಹೇಳಿಕೊಳ್ಳುವಂತಹ ಅವಕಾಶ ಸಿಗಲಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾಗಳ ಮೂಲಕ ಅವರುತಮ್ಮಲಿದ್ದ ಪ್ರತಿಭೆ ಅನಾವರಣ ಮಾಡಿದ್ದಾರೆ ಎನ್ನಬಹುದು. ಕಿರಿತೆರೆಗೆ ಸಹ ಎಂಟ್ರಿ ಕೊಟ್ಟು ಅಲ್ಲೂ ಸಹ ತಮ್ಮ ಅದೃಷ್ಟ ಪರೀಕ್ಷಯನ್ನು ಮಾಡಿದ್ದಾರೆ ಪಾವನಾ ಗೌಡ. ಅಂದಹಾಗೆ, ಈ ಚಿತ್ರವು ಮುಂದಿನ ತಿಂಗಳು 11ಕ್ಕೆ (11 April 2025) ತೆರೆಗೆ ಬರಲಿದೆ. 

click me!