ನಟಿ ಶ್ರುತಿ ಹರಿಹರನ್ ಪ್ರಕರಣ; ಪ್ರಶಾಂತ್ ಸಂಬರಗಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

By Shruthi KrishnaFirst Published Dec 17, 2022, 10:46 AM IST
Highlights

ಸಾಮಾಜಿಕ ಹೋರಾಟಗಾರ ಹಾಗೂ ಬಿಗ್​ಬಾಸ್  ಖ್ಯಾತಿಯ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಶ್ರುತಿ ಹರಿಹರನ್ ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. 

ಸಾಮಾಜಿಕ ಹೋರಾಟಗಾರ ಹಾಗೂ ಬಿಗ್​ಬಾಸ್  ಖ್ಯಾತಿಯ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಶ್ರುತಿ ಹರಿಹರನ್ ದಾಖಲಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಮಿ ಟೂ ವಿವಾದದ ವೇಳೆ ಪ್ರಶಾಂತ್ ಸಂಬರಗಿ ವಿರುದ್ಧ ಅವಹೇಳನಕಾರಿ ಹೇಳಿಕೆ, ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ಶ್ರುತಿ ಹರಿಹರನ್ ದೂರು ನೀಡಿದ್ದರು. ಈ ಪ್ರಕರಣವನ್ನು ಪ್ರಶ್ನಿಸಿ ಪ್ರಶಾಂತ್‌ ಸಂಬರಗಿ ಅವರು ಹೈಕೋರ್ಟ್‌ ಅರ್ಜಿ ಅಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ವಿಚಾರಣೆಯನ್ನು 2023ರ ಫೆಬ್ರುವರಿ 1ಕ್ಕೆ ಹೈಕೋರ್ಟ್ ಮುಂದೂಡಿದೆ.

'ವಿಸ್ಮಯ' ಸಿನಿಮಾ ಶೂಟಿಂಗ್ ವೇಳೆ ತಮ್ಮ ಮೇಲೆ ಲೈಂಗಿಕ ಕಿರುಕುಳ ಮಾಡಲಾಗಿದೆ ಎಂದು ಖ್ಯಾತ ನಟ ಅರ್ಜನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಗಂಭೀರ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜುನ್ ಸರ್ಜಾ ಪರವಾಗಿ ಅವರ ಆಪ್ತ ಪ್ರಶಾಂತ್ ಸಂಬರಗಿ ನಾನಾ ಹೇಳಿಕೆಗಳನ್ನು ನೀಡಿದ್ದರು. ಮಾಧ್ಯಮಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡುವಾಗ ಪ್ರಶಾಂತ್ ಸಂಬರಗಿ ತಮ್ಮ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಟಿ ಶ್ರುತಿ ಹರಿಹರನ್ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಪ್ರಶಾಂತ್ ಸಂಬರಗಿಗೆ ಸಮನ್ಸ್​ ನೀಡಿತ್ತು.

#MeToo ಗೆ ಒಂದು ವರ್ಷ; 'ವೀ ದ ವುಮೆನ್' ಸೆಮಿನಾರ್‌ನಲ್ಲಿ ಶೃತಿ ಹರಿಹರನ್ ತಾಯಿ ಭಾವುಕ

ಈ ಪ್ರಕರಣವನ್ನು ರದ್ದು ಕೋರಿ ಪ್ರಶಾಂತ್ ಸಂಬರಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ, ಸಂಬರಗಿ ವಿರುದ್ಧ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೂ ತಡೆಯಾಜ್ಞೆ ನೀಡಿದೆ. ಅಲ್ಲದೇ ಈ ಬಗ್ಗೆ ಹೈಕೋರ್ಟ್, ನಟಿ ಶ್ರುತಿ ಹರಿಹರನ್​ಗೂ ನೋಟಿಸ್ ನೀಡಿದೆ. 

MeToo: ನಟ ಅರ್ಜುನ್ ಸರ್ಜಾಗೆ ಬಿಗ್ ರಿಲೀಫ್..!

ಮಿ ಟೂ ಪ್ರಕರಣಜ ವಿಚಾರವಾಗಿ 2018ರ ಅಕ್ಟೋಬರ್ 25ರಂದು ವಾಣಿಜ್ಯ ಮಂಡಳಿಯಲ್ಲಿ ಸಂಧಾನ ಸಭೆ ನಡೆದಿತ್ತು. ರೆಬೆಲ್​ಸ್ಟಾರ್ ಅಂಬರೀಶ್ ಅವರ ನೇತೃತ್ವದಲ್ಲಿ ನಡೆದಿದ್ದ ಸಂಧಾನ ಸಭೆಯಲ್ಲಿ ಅರ್ಜುನ್ ಸರ್ಜಾ ಅವರ ಆಪ್ತರಾಗಿದ್ದ ಸಂಬರ್ಗಿ ಭಾಗಿಯಾಗಿದ್ದರು. ಈ ನಡುವೆ ನಟಿ ಶ್ರುತಿ ಹರಿಹರನ್ ಅವರು ಸಂಬರ್ಗಿ ವಿರುದ್ಧ ದೂರು ದಾಖಲಿಸಿದ್ದರು. ತನ್ನ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಹೇಳಿಕೆಗಳನ್ನು ನೀಡಿ ಚಾರಿತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆಂದು ನಟಿ ಆರೋಪ ಮಾಡಿದ್ದರು. 

click me!