ಆಸ್ಕರ್ ಜ್ಯೂರಿಯಲ್ಲಿ ಕನ್ನಡದ ನಿರ್ದೇಶಕ; ಮರೆಯಲಾರದ ಅನುಭವ ಎಂದ ಪವನ್ ಒಡೆಯರ್

Published : Sep 26, 2022, 05:30 PM ISTUpdated : Sep 26, 2022, 05:32 PM IST
ಆಸ್ಕರ್ ಜ್ಯೂರಿಯಲ್ಲಿ ಕನ್ನಡದ ನಿರ್ದೇಶಕ; ಮರೆಯಲಾರದ ಅನುಭವ ಎಂದ ಪವನ್ ಒಡೆಯರ್

ಸಾರಾಂಶ

ಆಸ್ಕರ್ ಅವಾರ್ಡ್ ಜ್ಯೂರಿ ಸದಸ್ಯರಲ್ಲಿ ಕನ್ನಡದ ನಿರ್ದೇಶಕರು ಸಹ ಪಾಲ್ಗೊಂಡಿರೋದು. ಹೌದು, ಕನ್ನಡದ ಪ್ರತಿಭಾವಂತ ನಿರ್ದೇಶಕ ಹಾಗೂ ನಿರ್ಮಾಪಕ ಪವನ್ ಒಡೆಯರ್ ಆಸ್ಕರ್ ಅವಾರ್ಡ್ ಸೆಲೆಕ್ಷನ್ ಕಮಿಟಿಯ ಸದಸ್ಯರಾಗಿ ಭಾಗಿಯಾಗಿದ್ದಾರೆ.

ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಈ ಬಾರಿ ಚೆಲ್ಲೋ ಶೋ ಸಿನಿಮಾ ಅಧಿಕೃತವಾಗಿ ಆಯ್ಕೆಯಾಗಿ ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದೆ. ಆರ್ ಆರ್ ಆರ್ ಮತ್ತು ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳನ್ನು ಹಿಂದಿಕ್ಕಿ ಚೆಲ್ಲೋ ಶೋ ಆಯ್ಕೆಯಾಗಿರುವುದು ಅಚ್ಚರಿ ಮೂಡಿಸಿದೆ.  

ಸದ್ಯ ಲೇಟೆಸ್ಟ್ ಸಮಾಚಾರ ಎಂದರೆ ಆಸ್ಕರ್ ಅವಾರ್ಡ್ ಜ್ಯೂರಿ ಸದಸ್ಯರಲ್ಲಿ ಕನ್ನಡದ ನಿರ್ದೇಶಕರು ಸಹ ಪಾಲ್ಗೊಂಡಿರೋದು. ಹೌದು, ಕನ್ನಡದ ಪ್ರತಿಭಾವಂತ ನಿರ್ದೇಶಕ ಹಾಗೂ ನಿರ್ಮಾಪಕ ಪವನ್ ಒಡೆಯರ್ ಆಸ್ಕರ್ ಅವಾರ್ಡ್ ಸೆಲೆಕ್ಷನ್ ಕಮಿಟಿಯ ಸದಸ್ಯರಾಗಿ ಭಾಗಿಯಾಗಿದ್ದಾರೆ.ಈ ಖುಷಿಯ ಕ್ಷಣವನ್ನು ಪವನ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

ಈ ಬಗ್ಗೆ ಮಾತನಾಡಿರುವ ಪವನ್ ಒಡೆಯರ್, 'ಆಸ್ಕರ್ ಕಮಿಟಿಯಿಂದ ನನಗೆ ಕರೆ ಬರುತ್ತದೆಂದು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಆರಂಭದಲ್ಲಿ ನನಗೆ ನಂಬಲೂ ಸಾಧ್ಯವಾಗಲಿಲ್ಲ. ನನ್ನ ಸಿನಿಮಾ ಕೆಲಸಗಳನ್ನು ಗುರುತಿಸಿ ಜ್ಯೂರಿಯಾಗಿ ಭಾಗವಹಿಸಲು ಆಹ್ವಾನ ನೀಡಿದ್ದು ಬಹಳ ಸಾರ್ಥಕತೆ ನೀಡಿದೆ. ನನ್ನ ನಿರ್ಮಾಣದ 'ಡೊಳ್ಳು' ಸಿನಿಮಾ ಇಂತಹದ್ದೊಂದು ಪ್ರತಿಷ್ಠಿತ ವೇದಿಕೆಯನ್ನು ನನಗೆ ಕಲ್ಪಿಸಿಕೊಟ್ಟಿದೆ. ಇದು ಬಹಳ ದೊಡ್ಡ ಗೌರವ ಎಂದೇ ನಾನು ಭಾವಿಸುತ್ತೇನೆ. 17 ಜನರ ತಂಡದಲ್ಲಿ ಕನ್ನಡ ಚಿತ್ರರಂಗದಿಂದ ನಾನೂ ಒಬ್ಬ ಜ್ಯೂರಿಯಾಗಿ ಭಾಗವಹಿಸಿದ್ದು ಬಹಳ ಸಂತಸ ತಂದಿದೆ' ಎಂದು ಪವನ್ ಒಡೆಯರ್ ಹರುಷ ವ್ಯಕ್ತಪಡಿಸಿದ್ದಾರೆ. 

ಶೌರ್ಯ ಒಡೆಯರ್ ನಾಮಕರಣ ಸಂಭ್ರಮ; ಪವನ್ ಮುಖದಲ್ಲಿ ಬಿಲಿಯನ್ ಡಾಲರ್ ನಗು!

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಬರೆದುಕೊಂಡಿದ್ದು, 'ಅಧ್ಯಕ್ಷ ಟಿಎಸ್ ನಾಗಾಭರಣ ಅವರ ಕೆಳಗೆ ಆಸ್ಕರ್ ಜ್ಯೂರಿಯಾಗಿದಿದ್ದು ಅದ್ಭುತ ಅನುಭವ, ಧನ್ಯವಾದಗಳು'ಎಂದು ಬರೆದುಕೊಂಡಿದ್ದಾರೆ. 

ಹಿಂದಿ, ಬೆಂಗಾಲಿ, ತೆಲುಗು, ತಮಿಳು, ಗುಜರಾತಿ, ಮಲಯಾಳಂ ಭಾಷೆಗಳಿಂದ ಸಿನಿಮಾಗಳು ಆಸ್ಕರ್ ಗೆ ಆಯ್ಕೆಯಾಗಿದ್ವು. ನಮ್ಮ ಭಾಷೆಯಿಂದ ಯಾವ ಸಿನಿಮಾಗಳು ಆಸ್ಕರ್ ಗೆ ಆಯ್ಕೆ ಆಗಿಲ್ಲದಿರುವುದು ಬೇಸರದ ಸಂಗತಿ. ಮುಂದಿನ ದಿನಗಳಲ್ಲಿ ಖಂಡಿತ ನಮ್ಮ ಸಿನಿಮಾಗಳು ಆಸ್ಕರ್ ಗೆ ನಾಮ ನಿರ್ದೇಶನವಾಗಲಿವೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ ಪವನ್ ಒಡೆಯರ್.

Notary Movie: ಪವನ್‌ ಒಡೆಯರ್‌ ನಿರ್ದೇಶನದ ಹಿಂದಿ ಚಿತ್ರ 'ನೋಟರಿ'

ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿ ಬಂದಿರುವ 'ಡೊಳ್ಳು' ಸಿನಿಮಾ ಜನ ಮೆಚ್ಚುಗೆ ಗಳಿಸಿಕೊಂಡಿದ್ದು,  ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಪವನ್ ನಿರ್ಮಾಣ ಮಾಡಿದ ಮೊದಲ ಸಿನಿಮಾ ಇದಾಗಿದೆ. ಮೊದಲ ನಿರ್ಮಾಣದಲ್ಲೇ ರಾಷ್ಟ್ರಪ್ರಶಸ್ತಿ ಗೆದ್ದು ಬೀಗಿರುವುದು ಹೆಮ್ಮೆಯ ವಿಚಾರ. ಸದ್ಯ ಪವನ್ ಒಡೆಯರ್ ನಿರ್ದೇಶನದ 'ರೇಮೋ' ಸಿನಿಮಾ ಬಿಡುಗಡೆಯಾಗಬೇಕಿದೆ. ಈ ಸಿನಿಮಾದಲ್ಲಿ ಇಶಾನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಆಶಿಕಾ ರಂಗನಾಥ್ ಮಿಂಚಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್
ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!