'ವಿಕ್ರಾಂತ್ ರೋಣ' ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಜಾಕ್ ಮಂಜು ಸಜ್ಜು

Published : Dec 06, 2022, 02:11 PM IST
'ವಿಕ್ರಾಂತ್ ರೋಣ' ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಜಾಕ್ ಮಂಜು ಸಜ್ಜು

ಸಾರಾಂಶ

ಕಿಚ್ಚ ಸುದೀಪ್ ನಟನೆಯ  ವಿಕ್ರಾಂತ್ ರೋಣ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ್ದ ನಿರ್ಮಾಪಕ ಜಾಕ್ ಮಂಜು ಇದೀಗ ಮತ್ತೆ ಪ್ಯಾನ್ ಇಂಡಿಯಾ ಸಿನಿಮಾಗೆ ಕೈ ಹಾಕಿದ್ದಾರೆ. 

ಕಿಚ್ಚ ಸುದೀಪ್ ನಟನೆಯ  ವಿಕ್ರಾಂತ್ ರೋಣ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ್ದ ನಿರ್ಮಾಪಕ ಜಾಕ್ ಮಂಜು ಇದೀಗ ಮತ್ತೆ ಪ್ಯಾನ್ ಇಂಡಿಯಾ ಸಿನಿಮಾಗೆ ಕೈ ಹಾಕಿದ್ದಾರೆ. ವಿಕ್ರಾಂತ್ ರೋಣನ ಸಕ್ಸಸ್ ಬಳಿಕ ಮಂಜು ಪ್ಯಾನ್ ಇಂಡಿಯಾ ಪಯಣಕ್ಕೆ ಸಾಥ್ ನೀಡಿದ್ದಾರೆ. ಚಕ್ರವರ್ತಿ ಚಂದ್ರಚೂಡ್. ಹೌದು, ಚಕ್ರವರ್ತಿ ಚಂದ್ರಚೂಡ್ ಮತ್ತೆ ನಿರ್ದೇಶನ ಟ್ರ್ಯಾಕ್ ಗೆ ಮರಳಿದ್ದಾರೆ. ಹನುಮ ಜಯಂತಿಯಂದೇ ತಮ್ಮ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ ‘ಪಾದರಾಯ’ ಎಂದು ಟೈಟಲ್ ಇಡಲಾಗಿದೆ. ವಿಶೇಷ ಎಂದರೆ ಈ ಚಿತ್ರಕ್ಕೆ ‘ಮೈನಾ,’ ‘ಸಂಜು ವೆಡ್ಸ್ ಗೀತಾ’ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. 

ನೈಜ ಘಟನೆ ಆಧರಿಸಿದ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಐದು ಭಾಷೆಯಲ್ಲಿ ನಿರ್ಮಾಣವಾಗಿ ಬಿಡುಗಡೆಯಾಗುತ್ತಿದೆ. ನಾಗಶೇಖರ್ ನಾಯಕ ನಟನಾಗಿ ನಟಿಸುವುದರ ಜೊತೆಗೆ ಚಿತ್ರಕ್ಕೆ ಸಹ ನಿರ್ಮಾಪಕ ಕೂಡ ಆಗಿದ್ದಾರೆ. ಅಂದಹಾಗೆ ನಾಗಶೇಖರ್ ಈಗಾಗಲೇ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗಿನಲ್ಲಿ ತಮನ್ನಾ ಜೊತೆ ಸಿನಿಮಾ ಮಾಡುತ್ತಿದ್ದ ನಾಗಶೇಖರ್ ಇದೀಗ ನಟನಾಗಿ ಮಿಂಚುಲ ಸಜ್ಜಾಗಿದ್ದಾರೆ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ನಾಗಶೇಖರ್ ಕಾಣಿಸಿಕೊಂಡಿದ್ದಾರೆ. ಕನ್ನಡ ಜೊತೆಗೆ ಬೇರೆ ಭಾಷೆಯಲ್ಲೂ ಮಿಂಚಿರುವ ನಾಗಶೇಖರ್ ಇದೀಗ ಪಾದರಾಯ ಮೂಲಕ ಮತ್ತೆ ತೆರೆಮೇಲೆ ಬರಲು ಸಜ್ಜಾಗಿದ್ದಾರೆ. ಅದೂ ವಿಶೇಷ ಎಂದರೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ. 

Bollywood ಮುಂದೆ ತಲೆ ಎತ್ತಿ ನಿಂತ ಕನ್ನಡ ಚಿತ್ರರಂಗ, ಹೆಚ್ಚು ಬಂಡವಾಳದ ಚಿತ್ರಗಳಿವು

‘ಪಾದರಾಯ’ ಎಂದರೇ ಹನುಮಂತ. ಅಂಜನಾದ್ರಿ ಸುತ್ತಮುತ್ತ ನಡೆಯುವ ಕಥೆ ಚಿತ್ರಲ್ಲಿದೆ. 2013-14ರಲ್ಲಿ ನಡೆದ ನೈಜ ಘಟನೆ ಆಧರಿಸಿದ ಸಿನಿಮಾ. ಈ ಘಟನೆ ಆರು ರಾಜ್ಯಕ್ಕೆ ಸಂಬಂಧಿಸಿದ್ದು, ಯೂನಿವರ್ಸಲ್ ಸಬ್ಜೆಕ್ಟ್ ಆದ್ರಿಂದ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದೇವೆ. ಶಾಲಿನಿ ಆರ್ಟ್ಸ್ ಬ್ಯಾನರ್ ನಡಿ ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ನಾಯಕಿ ಹುಡುಕಾಟದಲ್ಲಿದ್ದೇವೆ ಜನವರಿಯಲ್ಲಿ ಚಿತ್ರೀಕರಣ ಆರಂಭಿಸಲಿದ್ದೇವೆ. ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಹಂಚಿಕೊಳ್ಳೋದಾಗಿ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ತಿಳಿಸಿದ್ದಾರೆ. 

Q Movie: ನಿರಂಜನ್‌ ಸುಧೀಂದ್ರ ನಟನೆಯ ಪ್ಯಾನ್‌ ಇಂಡಿಯಾ ಚಿತ್ರಕ್ಕೆ ನಾಗಶೇಖರ್‌ ಆಕ್ಷನ್ ಕಟ್!

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ತಮಿಳು ಚಿತ್ರರಂಗದ ಹೆಸರಾಂತ ಸಂಕಲನಕಾರ ಆಂಟೋನಿ ಚಿತ್ರದ ಸಂಕಲನ ಜವಾಬ್ದಾರಿ ಹೊತ್ತಿದ್ದಾರೆ. ಸತ್ಯ ಹೆಗಡೆ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ವಿಕ್ರಾಂತ್ ರೋಣ ಮೂಲಕ ಗೆದ್ದು ಬೀಗಿದ್ದ ಜಾಕ್ ಮಂಜು ಪಾದರಾಯ ಮೂಲಕ ಮತ್ತೆ ಅಭಿಮಾನಿಗಳ ಹೃದಯ ಗೆಲ್ತಾರಾ ಕಾದು ನೋಡಬೇಕು.

  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
ಸೀಮಂತ ಸಂಭ್ರಮದಲ್ಲಿ ‘ಸು ಫ್ರಮ್ ಸೋ’ ನಟಿ ಸಂಧ್ಯಾ ಅರಕೆರೆ : PHOTOS