Kabzaa ಬಿಗ್ ಅಪ್‌ಡೇಟ್; ಉಪೇಂದ್ರ-ಸುದೀಪ್ ಚಿತ್ರದಲ್ಲಿ ಶಿವರಾಜ್ ಕುಮಾರ್,ಲುಕ್ ರಿವೀಲ್

Published : Mar 03, 2023, 11:54 AM ISTUpdated : Mar 03, 2023, 12:15 PM IST
Kabzaa ಬಿಗ್ ಅಪ್‌ಡೇಟ್;  ಉಪೇಂದ್ರ-ಸುದೀಪ್ ಚಿತ್ರದಲ್ಲಿ ಶಿವರಾಜ್ ಕುಮಾರ್,ಲುಕ್ ರಿವೀಲ್

ಸಾರಾಂಶ

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬಹುನಿರೀಕ್ಷೆಯ ಕಬ್ಜ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು ಲುಕ್ ರಿಲೀಸ್ ಆಗಿದೆ.  

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಈಗಾಗಲೇ ರಿಲೀಸ್‌ಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿರುವ ಕಬ್ಜಾ ಸದ್ಯ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ಕಬ್ಜಾ ಈಗಾಗಲೇ ಟ್ರೈಲರ್ ಮತ್ತು ಆಡಿಯೋ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಭಾರತದ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಕಬ್ಜ ಸಿನಿಮಾದಲ್ಲಿ ರಿಯಾಲ್ ಸ್ಟಾರ್ ಉಪೇಂದ್ರ ಜೊತೆ ಸ್ಯಾಂಡಲ್‌ವುಡ್‌ನ ಮತ್ತಿಬ್ಬರೂ ಸ್ಟಾರ್ ನಟಿಸುತ್ತಿದ್ದಾರೆ. ಈಗಾಗಲೇ ಸುದೀಪ್ ಕಬ್ಜ ಸಿನಿಮಾದಲ್ಲಿರುವುದು ಬಹಿರಂಗವಾಗಿತ್ತು. ಇದೀಗ ಮತ್ತೋರ್ವ ಖ್ಯಾತ ನಟ ಕಬ್ಜ ಸಿನಿಮಾದಲ್ಲಿ ನಟಿಸಿರುವುದು ಬಹಿರಂಗವಾಗಿದೆ. ಅದು ಮತ್ಯಾರು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್.

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕಬ್ಜ ಸಿನಿಮಾದ ಪ್ರಮುಖ ಭಾಗದಲ್ಲಿ ನಟಿಸುತ್ತಿದ್ದಾರೆ. ಸಿನಿಮಾತಂಡ ಶಿವಣ್ಣ ಲುಕ್ ರಿವೀಲ್ ಮಾಡುವ ಮೂಲಕ ಅಭಿಮಾನಿಗಳ ಥ್ರಿಲ್ ಹೆಚ್ಚಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಮೂವರು ಸ್ಟಾರ್ಸ್ ಒಂದೇ ಸಿನಿಮಾದಲ್ಲಿ ನಟಿಸಿರುವುದು ವಿಶೇಷವಾಗಿದ್ದು ಅಭಿಮಾನಿಗಳಿಗೆ ದೊಡ್ಡ ಹಬ್ಬವಾಗಿದೆ. ವಿಶೇಷ ಎಂದರೆ ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಶಿವಣ್ಣ ಕೋವಿ ಹಿಡಿದು ಪೋಸ್ ನೀಡಿದ್ದಾರೆ. ಉಪೇಂದ್ರ ಮತ್ತು ಸುದೀಪ್ ಕೂಡ ಗನ್ ಹಿಡಿದು ಮೋಡಿ ಮಾಡಿದ್ದರು. ಇದೀಗ ಶಿವಣ್ಣ ಕೈಯಲ್ಲೂ ಕೋವಿ ಇರುವುದು ಕುತೂಹಲ ಮೂಡಿಸಿದೆ. ಆರ್ ಚಂದ್ರು ಸಾರಥ್ಯದಲ್ಲಿ ಮೂಡಿ ಬಂದಿರುವ ಕಬ್ಜ ಚಿತ್ರ ಅನೇಕ ವಿಚಾರಗಳಿಂದ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇದೀಗ ಶಿವಣ್ಣ ಎಂಟ್ರಿ ಮತ್ತಷ್ಟು ಕುತೂಹಲ ಹೆಚ್ಚಿಸಿದ್ದು ದೊಡ್ಮನೆ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ. 

ಶಿವಣ್ಣ-ಉಪೇಂದ್ರ 3ನೇ ಸಿನಿಮಾ

ರಿಯಲ್ ಸ್ಟಾರ್ ಕಬ್ಜ ಸಿನಿಮಾದಲ್ಲಿ ಶಿವಣ್ಣ ನಟಿಸುವ ಮೂಲಕ ಅನೇಕ ವರ್ಷಗಳ ನಂತರ ಇಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಅವರಿಗೆ 'ಓಂ' ಸಿನಿಮಾ ನಿರ್ದೇಶನ ಮಾಡಿದ್ದ ಉಪೇಂದ್ರ ಬಳಿಕ 'ಪ್ರೀತ್ಸೆ' ಮತ್ತು 'ಲವ್ ಕುಶ' ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಅನೇಕ ವರ್ಷಗಳ ಬಳಿಕ ಒಟ್ಟಿಗೆ ಮತ್ತೆ ತೆರೆಮೇಲೆ ಬರ್ತಿರುವುದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ. ಅದರಲ್ಲೂ ಮೂವರು ಸ್ಟಾರ್ ನಟರು ಇರುವುದು ಕನ್ನಡ ಅಭಿಮಾನಿಗಳ ಪಾಲಿಗೆ ಹಬ್ಬವಾಗಿದೆ.

ಉಪ್ಪಿಯ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರದ ಧ್ವನಿ ಸುರುಳಿ ಅದ್ಧೂರಿ ಬಿಡುಗಡೆ

ಕಳೆದ ವರ್ಷ ಕನ್ನಡದ ಸಾಕಷ್ಟು ಚಿತ್ರಗಳು ಭರ್ಜರಿ ಯಶಸ್ಸು ಕಂಡಿತ್ತು.  ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡಿತ್ತು. ಈಗ ಎಲ್ಲೆಡೆ ಅಷ್ಟೇ ಕುತೂಹಲದಿಂದ ಕಾಯತ್ತಿರುವ ಹಾಗೂ ಐಎಂಡಿಬಿ 2023ರ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡಿದಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಚಿತ್ರ ಕಬ್ಜ ಆಗಿದೆ.  ಈ ಸಿನಿಮಾದಲ್ಲಿ ಉಪೇಂದ್ರ ಅವರಿಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದಾರೆ. ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಈ ಸಿನಿಮಾವನ್ನು ತೆರೆಮೇಲೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. 

ರಿಯಲ್ ಸ್ಟಾರ್ ಸಿಗ್ನೇಚರ್ ಸ್ಟೆಪ್ಸ್: ಉಪ್ಪಿಯ ರೆಟ್ರೋ ಸ್ಟೈಲ್'ಗೆ ಫ್ಯಾನ್ಸ್ ಫಿದಾ

'ಕಬ್ಜ' ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದ್ದು, ನಟಿ ಶ್ರೇಯಾ ಶರಣ್, ಬಾಲಿವುಡ್‌ನ ಖ್ಯಾತ ನಟ ನವಾಬ್‌ ಶಾ ತಮಿಳಿನ 'ಐ' ಚಿತ್ರದ ಖ್ಯಾತಿಯ ಕಾಮರಾಜನ್‌, ಟಾಲಿವುಡ್‌ ವಿಲನ್ ಜಗಪತಿ ಬಾಬು, ರಾಹುಲ್‌ ದೇವ್‌, ಸುನಿಲ್‌ ಪುರಾಣಿಕ್‌, ಲಕ್ಷ್ಮೀಶ ಲಕ್ಷ್ಮಣ್‌ (ಲಕ್ಕಿ ಲಕ್ಷ್ಮಣ್‌),  ಪ್ರಮೋದ್‌ ಶೆಟ್ಟಿ, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕನ್ನಡದಲ್ಲಿಯೇ ಮಾತನಾಡಿದ ನಟ ವಿಜಯ ದೇವರಕೊಂಡ: ಕೊಡವರ ಮನಗೆದ್ದ Rashmika Mandanna ಪತಿ
Sankeerthana Movie: ಈ ವಯಸ್ಸಿನಲ್ಲೂ ಸಿನಿಮಾ ಮಾಡಿ ಯಶಸ್ವಿಯಾದ ಸೀತಾರಾಮ ಧಾರಾವಾಹಿ ಅಜ್ಜಿ