Kantara ಸಿನಿಮಾ ವೀಕ್ಷಿಸಿದ ಕಮಲ್ ಹಾಸನ್; ರಿಷಬ್ ಶೆಟ್ಟಿ ಬಗ್ಗೆ ಹೇಳಿದ್ದೇನು?

Published : Nov 20, 2022, 04:32 PM IST
Kantara ಸಿನಿಮಾ ವೀಕ್ಷಿಸಿದ ಕಮಲ್ ಹಾಸನ್; ರಿಷಬ್ ಶೆಟ್ಟಿ ಬಗ್ಗೆ ಹೇಳಿದ್ದೇನು?

ಸಾರಾಂಶ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾವನ್ನು ಕಾಲಿವುಡ್ ಸ್ಟಾರ್ ಕಮಲ್ ಹಾಸನ್ ವೀಕ್ಷಿಸಿ ಇಷ್ಟಪಟ್ಟಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. 

ರಿಷಬ್ ಶೆಟ್ಟಿ ನಿರ್ದೇಶನ ಮಾಡಿ ನಟಿಸಿರುವ ಕಾಂತಾರ ಈ ವರ್ಷದ ಬಹು ಚರ್ಚಿತ ಚಿತ್ರಗಳಲ್ಲಿ ಒಂದಾಗಿದೆ. ಇನ್ನೂ ಅನೇಕ ಕಡೆ ಕಾಂತಾರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ, ಹಾಡಿ ಹೊಗಳಿದ್ದಾರೆ. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಇಷ್ಟಪಟ್ಟಿದ್ದಾರೆ. ಪ್ರೇಕ್ಷಕರ ಜೊತೆಗೆ ಸಿನಿ ಗಣ್ಯರು ಸಹ ರಿಷಬ್ ಶೆಟ್ಟಿ ಕಾಂತಾರ ಸಿನಿಮಾಗೆ ಫಿದಾ ಆಗಿದ್ದಾರೆ. ಬಾಲಿವುಡ್, ಟಾಲಿವುಡ್, ಕಾಲಿವುಡ್ ಸೇರಿದಂತೆ ಅನೇಕ ಸಿನಿಮಾ ಗಣ್ಯರು ಕನ್ನಡ ಕಾಂತಾರಗೆ ಮನಸೋತಿದ್ದಾರೆ. ಇತ್ತೀಚಿಗಷ್ಟೆ ಬಾಲಿವುಡ್ ಸ್ಟಾರ್ ಸುನಿಲ್ ಶೆಟ್ಟಿ ಸಿನಿಮಾ ಬಗ್ಗೆ ಮಾತನಾಡಿದ್ದರು. ರಿಷಬ್ ಶೆಟ್ಟಿ ಅಭಿನ ಹೊಗಳಿದ್ದರು. ಇದೀಗ ಕಾಲಿವುಡ್ ಖ್ಯಾತ ನಟ ಕಮಲ್ ಹಾಸನ್ ಸಿನಿಮಾ ನೋಡಿ ಇಷ್ಟಪಟ್ಟಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವ ಪ್ರಕಾರ ಇತ್ತೀಚಿಗಷ್ಟೆ ಕಾಂತಾರ ಸಿನಿಮಾ ಕಮಲ್ ಹಾಸನ್ ಇಷ್ಟಪಟ್ಟಿದ್ದಾರೆ ಎನ್ನಲಾಗಿದೆ. 

ನವೆಂಬರ್ 18ರಂದು ಕಾಂತಾರ ಸಿನಿಮಾ ವೀಕ್ಷಿಸಿದ ಕಮಲ್ ಹಾಸನ್, ರಿಷಬ್ ಶೆಟ್ಟಿ ನಿರ್ದೇಶನದ ಬಗ್ಗೆ ಪ್ರಭಾವಿತರಾದರು ಎನ್ನಲಾಗಿದೆ. ವಿಶೇಷವಾಗಿ ಸಿನಿಮಾದ ಮೇಕಿಂಗ್ ತುಂಬಾ ಇಷ್ಟಪಟ್ಟಿದ್ದಾರಂತೆ. ಅಲ್ಲದೆ ರಿಷಬ್ ಶೆಟ್ಟಿಗೆ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ. ನಟ-ನಿರ್ದೇಶಕ ರಿಷಬ್ ಶೆಟ್ಟಿ ಉತ್ಸಾಹ ಮತ್ತು ಈ ರೀತಿಯ ಸಿನಿಮಾ ನಿರ್ಮಾಣ ಸ್ಪೂರ್ತಿದಾಯಕವಾಗಿದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ. 

ಕಾಂತಾರ ಹೊಗಳಿದ ಸುನಿಲ್ ಶೆಟ್ಟಿ

ಇತ್ತೀಚೆಗಷ್ಟೆ ನಟ ಸುನಿಲ್ ಶೆಟ್ಟಿ ಸಿನಿಮಾ ನೋಡಿ ಹೊಗಳಿದ್ದರು. ಡಿಎನ್‌ಎಗೆ ನೀಡಿದ ಸಂದರ್ಶನದಲ್ಲಿ ಸುನಿಲ್ ಶೆಟ್ಟಿ 'ನಾನು ಈ ಸಿನಿಮಾ ನೋಡಿದೆ. ಪಿವಿಆರ್‌ನಲ್ಲಿ ಶೇ.60ರಷ್ಟು ಜನ ಇದ್ದರು. ಸಿನಿಮಾದ ಕೊನೆಯ 20-25 ಸಿನಿಮಾ ನನಗೆ ಗೂಸ್‌ಬಂಪ್ಸ್ ಮತ್ತು ಕಣ್ಣೀರು ಬಂತು. ಯಾಕೆಂದರೆ ನನಗೆ ಆ ಸ್ಥಳ ಗೊತ್ತು. ನಾನು ಪ್ರತಿವರ್ಷ ಹೋಗುತ್ತೇನೆ. ದೈವಾರಾಧನೆ, ಭೂತಗಳಿಗೆ ಪೂಜೆ ಮಾಡುತ್ತೇವೆ. ಕೋಲ ಮಾಡಿಸುತ್ತೇವೆ. ಕೊನೆಯ 20 ನಿಮಿಷ ಅದ್ಭುತ. ರಿಷಬ್ ಶೆಟ್ಟಿಗೆ ಸಿನಿಮಾದ ಮೇಲಿನ ಪ್ಯಾಷನ್ ಗೊತ್ತಾಗುತ್ತದೆ. ಕಂಟೆಂಟ್ ಸ್ಟ್ರಾಂಗ್ ಆಗಿದೆ. ದೃಶ್ಯ ವೈಭವವಿದೆ. ಕಂಟೆಂಟ್ ಈಸ್ ಕಿಂಗ್ ಎನ್ನುವುದು ಮತ್ತೆ ಸಾಬೀತಾಗಿದೆ. ಎಷ್ಟು ದೊಡ್ಡ ಮಟ್ಟದ ಜನ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ' ಎಂದು ಹೇಳಿದ್ದರು.

ಅಂಕೋಲಾ ದಹಿಂಕಾಲ ಉತ್ಸವದಲ್ಲಿ ಗಮನ ಸೆಳೆದ ಕಾಂತಾರ ಸ್ತಬ್ಧ ಚಿತ್ರ; ಜನರು ಫಿದಾ

ಅಂದಹಾಗೆ ಈಗಾಗಲೇ ಕರಾವಳಿ ಮೂಲದವರಾದ ಶಿಲ್ಪಾ ಶೆಟ್ಟಿ, ಪೂಜಾ ಹೆಗ್ಡೆ, ಅನುಷ್ಕಾ ಶೆಟ್ಟಿ ಇನ್ನು ಅನೇಕರು ಕಾಂತಾರ ಸಿನಿಮಾ ನೋಡಿ ಹಾಡಿಹೊಗಳಿದ್ದರು. ರಜನಿಕಾಂತ್, ಪ್ರಭಾಸ್, ಕಾರ್ತಿ, ಧನುಷ್, ಕಂಗನಾ ರಣಾವತ್ ಸೇರಿದಂತೆ ಅನೇಕರು ಕಾಂತಾರ ಸಿನಿಮಾಗೆ ಫಿದಾ ಆಗಿದ್ದಾರೆ. ಇದೀಗ ಸಕಲಕಲಾವಲ್ಲಭ ಸಿನಿಮಾ ನೋಡಿ ಮಚ್ಚಿಕೊಂಡಿರುವುದು ರಿಷಬ್ ಮತ್ತು ತಂಡಕ್ಕೆ ಮತ್ತಷ್ಟು ಖುಷಿ ತಂದಿದೆ. 

Kantara OTT ರಿಲೀಸ್ ಮುಂದಕ್ಕೆ ಹೋಗಿದ್ದೇಕೆ? ಯಾವಾಗ ಸ್ಟ್ರೀಮಿಂಗ್ ಆಗುತ್ತೆ ರಿಷಬ್ ಶೆಟ್ಟಿ ಸಿನಿಮಾ?

ಕಾಂತಾರ ಬಗ್ಗೆ, 

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟ ಕಿಶೋರ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಮಿಂಚಿದ್ದಾರೆ. ಇನ್ನೂ ನಾಯಕಿಯಾಗಿ ಸಪ್ತಮಿ ಗೌಡ ಬಣ್ಣ ಹಚ್ಚಿದ್ದಾರೆ. ಅಚ್ಯುತ್ ಕುಮಾರ್ ಗಮನಾರ್ಹ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನೇಕ ರಂಗಭೂಮಿ ಕಲಾವಿದರು ಕಾಂತಾರ ಸಿನಿಮಾದಲ್ಲಿ ನಟಿಸಿದ್ದಾರೆ.  ಪ್ರತಿಯೊಂದು ಪಾತ್ರಗಳು ಸಹ ಪ್ರೇಕ್ಷಕರ ಹೃದಯ ಗೆದ್ದಿವೆ. ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ಸಿನಿಮಾ ಮೂಡಿಬಂದಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?
ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು: Shiva Rajkumar