ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ನಟ ದುನಿಯಾ ವಿಜಯ್ ತಂದೆ ರುದ್ರಪ್ಪ...
ಕನ್ನಡ ಚಿತ್ರರಂಗಕ್ಕೆ ಡಿಫರೆಂಟ್ ದುನಿಯಾ ಪರಿಚಯಿಸಿಕೊಟ್ಟ ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ.
81 ವರ್ಷ ರುದ್ರಪ್ಪ ಅವರು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಎರಡು ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು, ಇಂದು ಬೆಳಗ್ಗೆ 7.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಆನೇಕಲ್ ಕುಂಬಾರಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಕನ್ನಡದ ನಟ ದುನಿಯಾ ವಿಜಯ್‌ಗೆ ಮಾತೃ ವಿಯೋಗಸಾಮಾಜಿಕ ಜಾಲತಾಣದಲ್ಲಿ ತಂದೆ ಫೋಟೋ ಹಂಚಿಕೊಂಡು 'ಮಿಸ್ ಯು ಅಪ್ಪ' ಎಂದು ಬರೆದುಕೊಂಡಿದ್ದಾರೆ. ಇದೇ ವರ್ಷ ಜುಲೈ 8ರಂದು ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನರಾಗಿದ್ದರು. ಕೊರೋನಾ ಲಾಕ್‌ಡೌನ್ ಸಮಯದಲ್ಲಿ ಬ್ರೇನ್ ಸ್ಟ್ರೋಕ್ ಆಗಿದ್ದು ಮೆದುಳಿನಲ್ಲಿ ಬ್ಲಡ್ ಕ್ಲಾಟ್ ಆಗಿತ್ತು.
ಜೀವನದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಕಳೆದುಕೊಂಡಿರುವ ವಿಜಯ್ ಅವರಿಗೆ ಆ ದೇವರು ಈ ನೋವು ತಡೆದುಕೊಳ್ಳುವ ಶಕ್ತಿ ಕೊಡಲಿ. ವಿಜಯ್ ತಂದೆ ರುದ್ರಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.