Nikhil Kumaraswamy: 'ಯದುವೀರ'ನಾದ ಸ್ಯಾಂಡಲ್‌ವುಡ್‌ನ ಯುವರಾಜ: ಫಸ್ಟ್ ಲುಕ್ ರಿವೀಲ್

Suvarna News   | Asianet News
Published : Jan 23, 2022, 09:08 AM IST
Nikhil Kumaraswamy: 'ಯದುವೀರ'ನಾದ ಸ್ಯಾಂಡಲ್‌ವುಡ್‌ನ ಯುವರಾಜ: ಫಸ್ಟ್ ಲುಕ್ ರಿವೀಲ್

ಸಾರಾಂಶ

ಸ್ಯಾಂಡಲ್‌ವುಡ್‌ನ ಯುವರಾಜ, ರಾಜಕಾರಣಿ ನಿಖಿಲ್ ಕುಮಾರ್‌ ಅವರ ಹುಟ್ಟುಹಬ್ಬದಂದು ಹೊಸ ಚಿತ್ರದ ಟೈಟಲ್ ಮತ್ತು ಫಸ್ಟ್​ಲುಕ್ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಕೊಟ್ಟ ಮಾತಿನಂತೆಯೇ ಚಿತ್ರತಂಡದಿಂದ ಫಸ್ಟ್​ಲುಕ್​ ಪೋಸ್ಟರ್ ಬಿಡುಗಡೆಯಾಗಿದೆ. 

ಸ್ಯಾಂಡಲ್‌ವುಡ್‌ನ (Sandalwood) ಯುವರಾಜ, ರಾಜಕಾರಣಿ ನಿಖಿಲ್ ಕುಮಾರ್‌ (Nikhil Kumar) ಅವರ ಹುಟ್ಟುಹಬ್ಬದಂದು (Birthday) ಹೊಸ ಚಿತ್ರದ ಟೈಟಲ್ (Title)​ ಮತ್ತು ಫಸ್ಟ್​ಲುಕ್ (First Look)​ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಕೊಟ್ಟ ಮಾತಿನಂತೆಯೇ ಚಿತ್ರತಂಡದಿಂದ ಫಸ್ಟ್​ಲುಕ್​ ಪೋಸ್ಟರ್​ (Poster) ಬಿಡುಗಡೆಯಾಗಿದೆ. ಈ ಚಿತ್ರಕ್ಕೆ 'ಯದುವೀರ' (Yaduveera) ಎಂಬ ಕ್ಯಾಚಿ ಶೀರ್ಷಿಕೆ ಇಡಲಾಗಿದೆ. ಪೋಸ್ಟರ್‌ನಲ್ಲಿ ನಿಖಿಲ್​ ಕುಮಾರ್​ ಅವರು ಕುರುಚಲು ಗಡ್ಡ ಬಿಟ್ಟುಕೊಂಡು ಒಂದು ಕೈಯಲ್ಲಿ ಸೀಗರೇಟ್ ಹಾಗೂ ಮತ್ತೊಂದು ಕೈಯಲ್ಲಿ ಟೀ ಗ್ಲಾಸ್ ಹಿಡಿದುಕೊಂಡು ಖಡಕ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

'ಯದುವೀರ' ಚಿತ್ರವನ್ನು ಮಂಜು ಅಥರ್ವ (Manju Atharva) ನಿರ್ದೇಶಿಸುತ್ತಿದ್ದಾರೆ. ಕಳೆದ 7 ವರ್ಷಗಳಿಂದ ಮಂಜು ಚಿತ್ರರಂಗದಲ್ಲಿದ್ದಾರೆ. ಯಶ್​ ನಟನೆಯ 'ಮಾಸ್ಟರ್‌ ಪೀಸ್‌', ಶಿವರಾಜ್​ಕುಮಾರ್​ ಅಭಿನಯದ 'ಮಫ್ತಿ' ಸಿನಿಮಾಗಳಿಗೆ ಅಸೋಸಿಯೇಟ್‌ ಡೈರೆಕ್ಟರ್​ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ 'ಪ್ರೇಮಂ ಪೂಜ್ಯಂ' ಸಿನಿಮಾಗೆ ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ 'ಯದುವೀರ' ಚಿತ್ರದ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್​ ಮೂಲಕ ನಿಖಿಲ್​ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಲಾಗಿದೆ. ಅವರ ಹೊಸ ಗೆಟಪ್​ ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ. ರಗಡ್​ ಲುಕ್​ನಲ್ಲಿ ನಿಖಿಲ್​ ಕಾಣಿಸಿಕೊಂಡಿರುವುದರಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

Nikhil Kumaraswamy: ನಿಖಿಲ್ ಹುಟ್ಟುಹಬ್ಬದಂದು ಹೊಸ ಚಿತ್ರದ ಟೈಟಲ್-ಫಸ್ಟ್ ಲುಕ್ ರಿಲೀಸ್

'ಯದುವೀರ' ಚಿತ್ರದ ಬಗ್ಗೆ ನಿಖಿಲ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್‌ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. 'ನನ್ನ ಮುಂದಿನ ಚಿತ್ರ ಯದುವೀರ ಫಸ್ಟ್ ಲುಕ್ ನಿಮಗಾಗಿ. ನನ್ನ ಜನ್ಮದಿನಕ್ಕೆ ಶುಭ ಕೋರುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಬರೆದುಕೊಂಡು ಚಿತ್ರದ ಪೋಸ್ಟರನ್ನು ಫೇಸ್‌ಬುಕ್‌ನಲ್ಲಿ (Facebook) ಹಂಚಿಕೊಂಡಿದ್ದಾರೆ. ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಅದ್ದೂರಿಯಾಗಿ ನಿಖಿಲ್​ ಕುಮಾರ್​ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಿತ್ತು. ಆದರೆ ಕೋವಿಡ್‌​ (Covid19) ಹಾವಳಿಯಿಂದಾಗಿ ಅವರು ಸೆಲೆಬ್ರೇಟ್​ ಮಾಡಿಕೊಂಡಿಲ್ಲ. ಹಾಗಾಗಿ ಕೇವಲ ಸಾಮಾಜಿಕ ಜಾಲತಾಣದ ಮೂಲಕವೇ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ನಿಖಿಲ್​ಗೆ ಶುಭಹಾರೈಸಿದ್ದರು.



ಈ ವರ್ಷ ಅಭಿಮಾನಿಗಳ ಜೊತೆ ಸೇರಿ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿಲ್ಲ ಎಂಬ ಬಗ್ಗೆ ನಿಖಿಲ್​ ಕುಮಾರಸ್ವಾಮಿ ಅವರಿಗೆ ಬೇಸರವಿದ್ದು, ಜ.21ರಂದು ನಿಖಿಲ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಕುರಿತು ಪೋಸ್ಟ್​ ಮಾಡಿದ್ದರು. 'ಕೋವಿಡ್ ಸಂಕಷ್ಟದ ಸಮಯದಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಅಭಿಮಾನಿಗಳು, ಕಾರ್ಯಕರ್ತರು ಕೋವಿಡ್ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ  ತಾವಿದ್ದಲ್ಲಿಂದಲೇ ನನಗೆ ಹರಸಿ. ಒಂದು ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ ಎಂದು ಮನವಿ ಮಾಡಿಕೊಂಡಿದ್ದರು.

#HappyBirthday ನಿಖಿಲ್ ಕುಮಾರಸ್ವಾಮಿ; ಹುಟ್ಟುಹಬ್ಬ ಆಚರಣೆಗೆ ಬ್ರೇಕ್!

ಇನ್ನು ನಿಖಿಲ್ ಹಾಗೂ ಮಂಜು ಅಥರ್ವ ಕಾಂಬೋದಲ್ಲಿ ಮೂಡಿ ಬರುತ್ತಿರುವ 'ಯದುವೀರ' ಸಿನಿಮಾದ‌ ಮೊದಲ ಹಂತದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ನಿಖಿಲ್ ಅವರ ಭಾಗದ ಶೂಟಿಂಗ್ ನಡೆಯುತ್ತಿದೆ. ಪಕ್ಕ ಆ್ಯಕ್ಷನ್ ಕಂ ಫ್ಯಾಮಿಲಿ ಎಂಟರ್ ಟ್ರೈನರ್ ಸಿನಿಮಾವಾಗಿರುವ ಈ ಚಿತ್ರವನ್ನು ಕೆವಿಎನ್‌ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ ಅದ್ಧೂರಿಯಾಗಿ ಮೂಡಿ ಬರುತ್ತಿದೆ. ಈ ಚಿತ್ರವನ್ನು ನಿಶಾ ವೆಂಕಟ್ ಕೊನಂಕಿ (Nisha Venkat Konanki) ಮತ್ತು ಸುಪ್ರೀತ್ (Suprith) ನಿರ್ಮಾಣ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್‌ (Ajaneesh Loknath) ಸಂಗೀತ ನೀಡುತ್ತಿದ್ದು, 'ಮಫ್ತಿ', 'ಮದಗಜ' ಸಿನಿಮಾಗಳ ಸಿನಿಮಾಟೋಗ್ರಾಫರ್‌ ನವೀನ್‌ (Naveen) ಕ್ಯಾಮೆರಾ ಕೈ ಚಳಕ ಚಿತ್ರಕ್ಕಿದೆ.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಿಷಬ್ ಶೆಟ್ಟಿ ದೈವದ ಮುಂದೆ ಅತ್ಬಿಟ್ರಾ? ಅಳಬೇಡ ಅಂತ ಸಂತೈಸಿದ್ದೇಕೆ ಪಂಜುರ್ಲಿ ದೈವ?
ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು: Shiva Rajkumar