Nikhil Kumaraswamy: ನಿಖಿಲ್ ಹುಟ್ಟುಹಬ್ಬದಂದು ಹೊಸ ಚಿತ್ರದ ಟೈಟಲ್-ಫಸ್ಟ್ ಲುಕ್ ರಿಲೀಸ್

Suvarna News   | Asianet News
Published : Jan 18, 2022, 11:57 PM ISTUpdated : Jan 18, 2022, 11:59 PM IST
Nikhil Kumaraswamy: ನಿಖಿಲ್ ಹುಟ್ಟುಹಬ್ಬದಂದು ಹೊಸ ಚಿತ್ರದ ಟೈಟಲ್-ಫಸ್ಟ್ ಲುಕ್ ರಿಲೀಸ್

ಸಾರಾಂಶ

ಸ್ಯಾಂಡಲ್‌ವುಡ್‌ನ ಯುವರಾಜ ನಿಖಿಲ್ ಕುಮಾರ್‌ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅವರ ಜನ್ಮದಿನದಂದು ರಿಲೀಸ್ ಆಗಲಿದೆ.  ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದೆ.

'ರೈಡರ್' ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಸ್ಯಾಂಡಲ್‌ವುಡ್‌ನ (Sandalwood) ಯುವರಾಜ, ರಾಜಕಾರಣಿ ನಿಖಿಲ್ ಕುಮಾರ್‌ಗೆ (Nikhil Kumar) ಜನವರಿ 22ರಂದು ಹುಟ್ಟುಹಬ್ಬದ (Birthday) ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಮುಂದಿನ ಚಿತ್ರವನ್ನು ನಿರ್ಮಿಸುತ್ತಿರುವ ಚಿತ್ರತಂಡ ವಿಶೇಷ ಗಿಫ್ಟ್ ನೀಡಲು ಮುಂದಾಗಿದೆ. ಹೌದು! ನಿಖಿಲ್ ಅವರ ಹೊಸ ಸಿನಿಮಾದ ಟೈಟಲ್ (Title) ಹಾಗೂ ಫಸ್ಟ್ ಲುಕ್ (First Look) ಪೋಸ್ಟರ್ ಅವರ ಜನ್ಮದಿನದಂದು ರಿಲೀಸ್ ಆಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ (KVN Productions) ಅದ್ದೂರಿಯಾಗಿ ನಿಖಿಲ್ ಅವರ ಐದನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಅದರ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಲು ಚಿತ್ರತಂಡ ಸಕಲ ರೀತಿಯಿಂದ ಸಜ್ಜಾಗಿದೆ. 

ಈ ಬಗ್ಗೆ ನಿಖಿಲ್ ತಮ್ಮ ಇನ್‌ಸ್ಟಾಗ್ರಾಮ್‌ (Instagram) ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ನನ್ನ ಮುಂದಿನ ಸಿನಿಮಾವನ್ನು ಘೋಷಿಸಲು ಸಂತೋಷವಾಗುತ್ತಿದೆ. ಟೈಟಲ್ ಮತ್ತು ಫಸ್ಟ್ ಲುಕ್ ಜನವರಿ 22ರ ಬೆಳಿಗ್ಗೆ 11:22ಕ್ಕೆ ನಿಮ್ಮ ಮುಂದೆ ಬರಲಿದೆ. ಎಂದಿನಂತೆ ನಿಮ್ಮ ಪ್ರೀತಿ, ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಬರೆದುಕೊಂಡು KVN03 ಎಂಬ ಪೋಸ್ಟರನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರಕ್ಕೆ ಮಂಜು ಅಥರ್ವ (Manju Atharva) ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ಚಿತ್ರರಂಗದಲ್ಲಿರುವ ಮಂಜು ಅಥರ್ವ, ತಮಿಳಿನ ಕದಿರನ್‌ ಜತೆ ಕೆಲಸ ಮಾಡಿದ್ದಾರೆ.

ಸ್ಯಾಂಡಲ್‌ವುಡ್‌ ಸಂಪುಟ ಪಟ್ಟಿ, ಯಾರಿಗೆ ಯಾವ ಖಾತೆ ಕೊಟ್ರು ನಟ Nikhil Kumaraswamy?

'ಮಾಸ್ಟರ್‌ಪೀಸ್‌', 'ಮಫ್ತಿ' ಸಿನಿಮಾಗಳಿಗೆ ಅಸೋಸಿಯೇಟ್‌ ಆಗಿ ಕೆಲಸ ಮಾಡಿದ್ದಾರೆ. ನೆನಪಿರಲಿ ಪ್ರೇಮ್‌ (Nenapirali Prem) ಅವರ 25ನೇ ಸಿನಿಮಾ 'ಪ್ರೇಮಂ ಪೂಜ್ಯಂ' (Premam Poojyam) ಸಿನಿಮಾಗೆ ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಮಂಜು ಅಥರ್ವ, ನಿಖಿಲ್‌ ಅವರ ಸಿನಿಮಾ ಮೂಲಕ ಮೊದಲ ಬಾರಿಗೆ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ನಿಖಿಲ್ ಹಾಗೂ ಮಂಜು ಅಥರ್ವ ಕಾಂಬೋದಲ್ಲಿ ಮೂಡಿ ಬರುತ್ತಿರುವ ಹೊಸ ಸಿನಿಮಾದ‌ ಮೊದಲ ಹಂತದ ಶೂಟಿಂಗ್ ಈಗಾಗಲೇ ಶುರುವಾಗಿದೆ. ನಿಖಿಲ್ ಅವರ ಭಾಗದ ಶೂಟಿಂಗ್ ನಡೆಯುತ್ತಿದ್ದು, ಈ ಬಗ್ಗೆ ಚಿತ್ರತಂಡ ಅಪ್‌ಡೇಟ್ ನೀಡಿದೆ.‌ 



ಪಕ್ಕ ಆ್ಯಕ್ಷನ್ ಕಂ ಫ್ಯಾಮಿಲಿ ಎಂಟರ್ ಟ್ರೈನರ್ ಸಿನಿಮಾವಾಗಿರುವ ಈ ಚಿತ್ರದ ಟೈಟಲ್ ಜನವರಿ 22ರಂದು ರಿವೀಲ್ ಆಗುತ್ತದೆ. ಕೆವಿಎನ್‌ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ ಅದ್ಧೂರಿಯಾಗಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ನಿಶಾ ವೆಂಕಟ್ ಕೊನಂಕಿ (Nisha Venkat Konanki) ಮತ್ತು ಸುಪ್ರೀತ್ (Suprith) ನಿರ್ಮಾಣ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್‌ (Ajaneesh Loknath) ಸಂಗೀತ ನೀಡುತ್ತಿದ್ದು, 'ಮಫ್ತಿ', 'ಮದಗಜ' ಸಿನಿಮಾಗಳ ಸಿನಿಮಾಟೋಗ್ರಾಫರ್‌ ನವೀನ್‌ (Naveen) ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ. ಸದ್ಯಕ್ಕೆ ಶೂಟಿಂಗ್ ಪ್ರಾರಂಭಿಸಿರುವ ಚಿತ್ರತಂಡ ಸದ್ಯದಲ್ಲಿಯೇ ಟೈಟಲ್ ಜೊತೆಗೆ ಉಳಿದ ತಾರಾಬಳಗದ ಬಗ್ಗೆ ಮಾಹಿತಿ‌ ನೀಡಲಿದೆ.

Prajwal Devaraj: ಡೈನಾಮಿಕ್ ಪ್ರಿನ್ಸ್ ಹೊಸ ಚಿತ್ರಕ್ಕೆ ಪನ್ನಗ ಭರಣ ಆಕ್ಷನ್ ಕಟ್

ಇನ್ನು ಈ ಹಿಂದೆ ನಿಖಿಲ್ ಅಭಿನಯದ  'ರೈಡರ್' (Rider) ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿತ್ತು. ಚಿತ್ರ ವೀಕ್ಷಿಸಿದ ಅಭಿಮಾನಿಗಳಿಂದ ಅತ್ತ್ಯುತ್ತಮ ಪ್ರಶಂಸೆ ಹಾಗೂ ಒಳ್ಳೆಯ ಮೆಚ್ಚುಗೆಯನ್ನು ಪಡೆದಿತ್ತು. ಈ ಚಿತ್ರಕ್ಕೆ ವಿಜಯ್​ ಕುಮಾರ್​ ಕೊಂಡ (Vijay Kumar Konda) ಅವರು ಆ್ಯಕ್ಷನ್​ ಕಟ್​ ಹೇಳಿದ್ದು, ಕಾಶ್ಮೀರಿ ಪರ್ದೇಸಿ (Kashmira Pardeshi) ನಿಖಿಲ್‌ಗೆ ಜೋಡಿ ಕಾಣಿಸಿಕೊಂಡಿದ್ದರು. ದತ್ತಣ್ಣ, ಗರುಡ ರಾಮ್, ಚಿಕ್ಕಣ್ಣ, ಶೋಭರಾಜ್, ರಾಜೇಶ್ ನಟರಂಗ, ಶಿವರಾಜ್.ಕೆ.ಆರ್.ಪೇಟೆ, ಬಿಗ್​ ಬಾಸ್​ ವಿನ್ನರ್​ ಮಂಜು ಪಾವಗಡ, ಸಂಪದ ಹುಲಿವಾನ, ನಿಹಾರಿಕ ಸೇರಿದಂತೆ ದೊಡ್ಡ ತಾರಬಳಗ ಚಿತ್ರದಲ್ಲಿತ್ತು. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?