'ಹಂಟರ್' ಆದ ರಿಯಲ್ ಸ್ಟಾರ್ ಅಣ್ಣನ ಮಗ ನಿರಂಜನ್; ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಲು ಸಜ್ಜು

Published : Apr 15, 2023, 05:35 PM IST
'ಹಂಟರ್' ಆದ ರಿಯಲ್ ಸ್ಟಾರ್ ಅಣ್ಣನ ಮಗ ನಿರಂಜನ್; ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಲು ಸಜ್ಜು

ಸಾರಾಂಶ

'ಹಂಟರ್' ಆದ ರಿಯಲ್ ಸ್ಟಾರ್ ಅಣ್ಣನ ಮಗ ನಿರಂಜನ್; ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಲು ಸಜ್ಜಾಗುತ್ತಿದ್ದಾರೆ. 

ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣನ‌ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿರುವ "ಹಂಟರ್" ಚಿತ್ರದ ಚಿತ್ರೀಕರಣ ಭರ್ರಿಯಾಗಿ ನಡೆಯುತ್ತಿದೆ. ಈ ನಡುವೆ ಸಿನಿಮಾತಂಡ ಮಾಧ್ಯಮ ಮುಂದೆ ಹಾಜರಾಗಿತ್ತು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ "ಹಂಟರ್" ಚಿಕ್ರದ ಬಗ್ಗೆ ಒಂದಿಷ್ಟು ಮಾಹಿತಿ ರಿವೀಲ್ ಮಾಡಿದರು. ಹಂಟರ್ ಚಿತ್ರಕ್ಕೆ ವಿನಯ್ ಕೃಷ್ಣ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರಂಜನ್‌ಗೆ ನಾಕಿಯಾಗಿ ಸೌಮ್ಯಾ ಮೆನನ್ ಕಾಣಿಸಿಕೊಂಡಿದ್ದಾರೆ. ಕಬೀರ್ ಬೇಡಿ, ಸುಮನ್, ಶರತ್ ಕುಮಾರ್, ಸಾಧುಕೋಕಿಲ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.  

ಈ ಸಿನಿಮಾದ ಬಗ್ಗೆ ಮಾತನಾಡಿದ ನಾಯಕ ನಿರಂಜನ್,  ಟಈ ಚಿತ್ರ ಫೈಟ್ ನೊಂದಿಗೆ ಶುರುವಾಗಿ ಫೈಟ್ ನಲ್ಲೇ ಮುಕ್ತಾಯವಾಗುತ್ತದೆ. ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರುವುದರಿಂದ ನಾನು ಸಾಕಷ್ಟು ಅಭ್ಯಾಸ ಮಾಡಿದ್ದೇನೆ. ನನ್ನ ಸಿನಿಮಾ ವೃತ್ತಿ ಜೀವನದಲ್ಲೇ ಅದ್ದೂರಿ ಸಿನಿಮಾ ಇದು ಎಂದರೆ ತಪ್ಪಾಗಲಾರದು. ಉತ್ತರ ಹಾಗೂ ದಕ್ಷಿಣ ಭಾರತದ ದಿಗ್ಗಜ ನಟರೊಂದಿಗೆ ನಟಿಸುವ ಅವಕಾಶ ನನಗೆ ಈ ಚಿತ್ರದಲ್ಲಿ ಸಿಕ್ಕಿದೆ. ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ' ಎಂದು ಹೇಳಿದರು.  

ಇನ್ನೂ ನಟ ಸುಮಾನ್ ಮಾತನಾಡಿ, 'ನಾನು ಹೆಡ್ ಕಾನ್ಸ್‌ಟೇಬಲ್ ಪಾತ್ರ ನಿರ್ವಹಣೆ ಮಾಡುತ್ತಿದ್ದೇನೆ. ನಾನು ಹಾಗೂ ಶರತ್ ಕುಮಾರ್ ಬಹಳ ದಿನಗಳ ನಂತರ ಒಟ್ಟಾಗಿ ಅಭಿನಯಿಸುತ್ತಿದ್ದೇವೆ' ಎಂದು ಹೇಳಿದರು. 

ವಂಚನೆ ಆರೋಪ; ಉಪೇಂದ್ರ ಅಣ್ಣನ ಮಗನ 'ಸೂಪರ್ ಸ್ಟಾರ್' ಸಿನಿಮಾ ನಿರ್ದೇಶಕನ ವಿರುದ್ಧ ದೂರು ದಾಖಲು

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು.  ನನ್ನ ಪಾತ್ರ ಚೆನ್ನಾಗಿದೆ. ಈ ತಂಡದ ಜೊತೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದರು ನಟ ಶರತ್ ಕುಮಾರ್. ನಾನು ಮೂಲತಃ ಕೇರಳದವಳು. ಕನ್ನಡದಲ್ಲಿ ಮೊದಲ ಚಿತ್ರ ಎಂದು ನಾಯಕಿ ಸೌಮ್ಯ ಮೆನನ್ ಖುಷಿ ಹಂಚಿಕೊಂಡರು. 

ನಿರ್ದೇಶಕ ವಿನಯ್ ಕೃಷ್ಣ ಮಾತನಾಡಿ, 'ಸೀಜರ್ ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಹಂಟರ್. ಇದೊಂದು ಕಂಪ್ಲೀಟ್ ಆಕ್ಷನ್ ಥ್ರಿಲ್ಲರ್. ಈ ಚಿತ್ರಕ್ಕಾಗಿ ಎಪ್ಪತ್ತೈದು ಕೆಜಿ ತೂಕವಿದ್ದ ನಿರಂಜನ್, ಮತ್ತಷ್ಟು ತೂಕ ಹೆಚ್ಚಿಸಿಕೊಂಡಿದ್ದಾರೆ. ಗಣೇಶ್ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಹಂಟರ್ ಹಾಡುಗಳಿಗೆ ಸಂಗೀತ ನೀಡುತ್ತಿದ್ದಾರೆ.  ಜೂನ್ ವೇಳೆಗೆ ಚಿತ್ರೀಕರಣ ಮುಕ್ತಾಯವಾಗಲಿದೆ' ಎಂದು ಸಿನಿಮಾ ಬಗ್ಗೆ ಮಾಹಾತಿ ನೀಡಿದರು.  

ಚಿತ್ರರಂಗದಲ್ಲಿ ನೆಲೆ ನಿಲ್ಲಲು ಬ್ಯಾಕ್‌ಗ್ರೌಂಡ್‌ ಇದ್ದರೆ ಸಾಲದು: ನಿರಂಜನ್‌ ಸುಧೀಂದ್ರ

ನಮ್ಮ ತ್ರಿವಿಕ್ರಮ್ ಸಿನಿಮಾಸ್ ಲಾಂಛನದಲ್ಲಿ  ಹಂಟರ್ ಸಿನಿಮಾ ನಿರ್ಮಾಣವಾಗುತ್ತಿದೆ.   ಎಪ್ಪತ್ತರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನವೆಂಬರ್ ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ತ್ರಿವಿಕ್ರಮ್ ಸಾಫಲ್ಯ ತಿಳಿಸಿದರು.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ದರ್ಶನ್​ ಇಲ್ಲದ ಸಂಕ್ರಾಂತಿ: ಕುದುರೆ ಜೊತೆ ವಿಜಯಲಕ್ಷ್ಮಿ ಕುತೂಹಲದ ಪೋಸ್ಟ್​- ಅಭಿಮಾನಿಗಳು ಭಾವುಕ
ಹಾಸನ ನಿವೇಶನ ವಿವಾದ: ನಿರ್ಮಾಪಕಿ ಪುಷ್ಮಾ ಅರುಣ್‌ಕುಮಾರ್‌ಗೆ ನ್ಯಾಯಾಲಯದಲ್ಲಿ ಹಿನ್ನಡೆ