'ಯುವರತ್ನ'ನಾಗಿಯೇ ಅಗಲಿದ ಅಪ್ಪು, 'ಜೇಮ್ಸ್‌'ಗೆ ವಿಧಿ ಕೊಟ್ಟಿಲ್ಲ ಚಾನ್ಸ್

By Suvarna News  |  First Published Oct 29, 2021, 4:40 PM IST

ಪುನೀತ್ ರಾಜ್‌ ಕುಮಾರ್ ಅಭಿನಯದ ಕೊನೆಯ ಚಿತ್ರ 'ಜೇಮ್ಸ್‌'. ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿರುವ ನಡುವೆಯೆ ಪುನೀತ್ ನಿಧನ ಬೇಸರ ತರಿಸಿದೆ. ನಿರ್ದೇಶಕ ಚೇತನ್ ಕುಮಾರ್ 'ಜೇಮ್ಸ್ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ಪುನೀತ್‍ಗೆ ಆ್ಯಕ್ಷನ್ ಕಟ್ ಹೇಳಿದ್ದರು. 


ಬೆಂಗಳೂರು (ಅ. 29): ಸ್ಯಾಂಡಲ್‌ವುಡ್‌ನ (Sandalwood) ಪವರ್‌ಸ್ಟಾರ್ ನಟ ಪುನೀತ್ ರಾಜ್‌ ಕುಮಾರ್ (Puneeth Rajkumar) ಹೃದಯಾಘಾತದಿಂದ ( Heart attack) ನಿಧನರಾಗಿದ್ದಾರೆ. ನಟ ಪುನೀತ್ ರಾಜ್ ಕುಮಾರ್‌ಗೆ ಹೃದಯಾಘಾತ ಸಂಭವಿಸಿ, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ (Vikram Hospital) ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.  

ಇನ್ನು ಪುನೀತ್ ರಾಜ್‌ ಕುಮಾರ್ ಅಭಿನಯದ ಕೊನೆಯ ಚಿತ್ರ 'ಜೇಮ್ಸ್‌' (James). ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿರುವ ನಡುವೆಯೆ ಪುನೀತ್ ನಿಧನ ಬೇಸರ ತರಿಸಿದೆ. ನಿರ್ದೇಶಕ ಚೇತನ್ ಕುಮಾರ್ (Chetan Kumar) 'ಜೇಮ್ಸ್ ಸಿನಿಮಾ' ಮೂಲಕ ಇದೇ ಮೊದಲ ಬಾರಿಗೆ ಪುನೀತ್‍ಗೆ ಆ್ಯಕ್ಷನ್ ಕಟ್ ಹೇಳಿದ್ದರು.  ಈ ಚಿತ್ರದಲ್ಲಿ ಪುನೀತ್‌ ವಿಶೇಷ ಸ್ಟಂಟ್ಸ್‌, ಹೈವೋಲ್ಟೇಜ್‌ ಆ್ಯಕ್ಷನ್‌ ಜೊತೆಗೆ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾಲಿವುಡ್‌ ನಟಿ ಪ್ರಿಯಾ ಆನಂದ್ (Priya Anand)​ ಜೇಮ್ಸ್​ನಲ್ಲಿ ನಾಯಕಿಯಾಗಿ ಎರಡನೇ ಬಾರಿಗೆ ಪುನೀತ್ ಜೊತೆ ನಟಿಸುತ್ತಿದ್ದಾರೆ. 'ರಾಜಕುಮಾರ' (Rajakumara) ಸಿನಿಮಾದಲ್ಲಿ ಪುನೀತ್​ ಜೊತೆ ಪ್ರಿಯಾ ಆನಂದ್​ ಅಭಿನಯಿಸಿದ್ದರು.

Tap to resize

Latest Videos

undefined

Puneeth Rajkumar death ಸ್ಯಾಂಡಲ್‌ವುಡ್ ಪವರ್ ಸ್ಟಾರ್ ನಿಧನಕ್ಕೆ ಗಣ್ಯರ ಸಂತಾಪ

'ರಾಜಕುಮಾರ' ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ, ಹಿರಿಯ ತಮಿಳು ನಟ ಶರತ್ ಕುಮಾರ್ (Sarathkumar) ಈ ಚಿತ್ರದಲ್ಲಿ ಸ್ಟೈಲಿಶ್ ವಿಲನ್ (Vilain) ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಕ್ರಮಣಕಾರ ಸ್ವಭಾವದ ಪಾತ್ರ ಎನ್ನಲಾಗಿದೆ. ಬಹುತೇಕ ಮಾತಿನ ಭಾಗದ ಚಿತ್ರೀಕರಣ ಮುಗಿದಿದ್ದು, ಹಾಡುಗಳು ಬಾಕಿ ಇವೆ. ಮಂಗಳೂರು ಹಾಗೂ ವಿದೇಶಗಳಲ್ಲಿ ಹಾಡುಗಳನ್ನು ಚಿತ್ರೀಕರಿಸುವ ಪ್ಲ್ಯಾನ್‌ ಅನ್ನು ಚಿತ್ರತಂಡ ಹಾಕಿಕೊಂಡಿದೆ. ಅಲ್ಲದೇ ಚಿತ್ರದ ಸ್ಯಾಟಲೈಟ್ ಹಕ್ಕುಗಳು 15 ಕೋಟಿಗೆ ಮಾರಾಟವಾಗಿದೆ. 

ಇದುವರೆಗೆ ಮಾರಾಟವಾದ ಪುನೀತ್ ಅವರ ಚಿತ್ರಗಳಲ್ಲೇ ಇದು ಅತ್ಯಧಿಕ ಮೊತ್ತ ಎನ್ನಲಾಗುತ್ತಿದೆ.  ಚಿತ್ರಕ್ಕೆ ಎ. ಹರ್ಷ ನೃತ್ಯ ನಿರ್ದೇಶಿಸಲಿದ್ದು, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿಗಳನ್ನು ನಿರ್ದೇಶಿಸಲಿದ್ದಾರೆ ಹಾಗೂ ನಿರ್ಮಾಪಕ ಕಿಶೋರ್ ಪತಿಕೊಂಡ (Kishor Patikonda) ಬಂಡವಾಳ ಹೂಡಿದ್ದಾರೆ. 'ಟಗರು' ಖ್ಯಾತಿಯ ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಷ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ ಸೇರಿದಂತೆ ದೀಪು ಎಸ್‌.ಕುಮಾರ್‌ ಸಂಕಲನ ಇರುವ ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣವಿದೆ.

Puneeth Rajkumar Death:ಪುನೀತ್ ರಾಜ್‌ಕುಮಾರ್ ಬೆಸ್ಟ್‌ ನಟ ಪ್ರಶಸ್ತಿ ಪಡೆದ ಚಿತ್ರಗಳಿವು!

ಈ ಮಧ್ಯೆ  'ಜೇಮ್ಸ್‌' ಚಿತ್ರದ ಪೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ (Viral) ಆಗಿದೆ. ಹೌದು! 'ಜೇಮ್ಸ್' ಚಿತ್ರದ ಚಿತ್ರೀಕರಣದ ವೇಳೆ ಪುನೀತ್ ಜೊತೆ ವಿದೇಶಿ ಹುಡುಗಿಯರು ಕ್ಲಿಕ್ಕಿಸಿಕೊಂಡಿರುವ ಫೋಟೋ ವೈರಲ್ ಆಗಿದೆ. ಹಾಗೂ ಈ ಇಬ್ಬರು ಹುಡುಗಿಯರು ಗ್ರೇ ಕಲರ್ ಶಾರ್ಟ್ ಟಾಪ್, ಬ್ಲಾಕ್ ಕಲರ್ ಪ್ಯಾಂಟ್ ಹಾಗೂ ಬ್ಲಾಕ್ ಕಲರ್ ಜಾಕೆಟ್ ತೊಟ್ಟು, ಕೈಯಲ್ಲಿ ಗನ್ ಹಿಡಿದುಕೊಂಡು ಪುನೀತ್ ಅಕ್ಕಪಕ್ಕ ನಿಂತು ಪೋಸ್ (Pose) ನೀಡಿದ್ದರು.

"

click me!