Prajwal Devaraj: ಡೈನಾಮಿಕ್ ಪ್ರಿನ್ಸ್ ನಟನೆಯ 'ಗಣ' ಚಿತ್ರಕ್ಕೆ ಮುಹೂರ್ತ

Suvarna News   | Asianet News
Published : Jan 04, 2022, 04:13 PM ISTUpdated : Jan 04, 2022, 04:18 PM IST
Prajwal Devaraj: ಡೈನಾಮಿಕ್ ಪ್ರಿನ್ಸ್ ನಟನೆಯ 'ಗಣ' ಚಿತ್ರಕ್ಕೆ ಮುಹೂರ್ತ

ಸಾರಾಂಶ

ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್  ಪ್ರಜ್ವಲ್‌ ದೇವರಾಜ್‌ ನಟನೆಯ 'ಗಣ' ಚಿತ್ರಕ್ಕೆ ಇತ್ತೀಚೆಗಷ್ಟೆ ಆರ್‌ಪಿಸಿ ಲೇಔಟ್‌ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮುಹೂರ್ತ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಅವರು ಕ್ಲಾಪ್‌ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ಕೊಟ್ಟರು. 

ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್  ಪ್ರಜ್ವಲ್‌ ದೇವರಾಜ್‌ (Prajwal Devaraj) ನಟನೆಯ 'ಗಣ' (Gana) ಚಿತ್ರಕ್ಕೆ ಇತ್ತೀಚೆಗಷ್ಟೆ ಆರ್‌ಪಿಸಿ ಲೇಔಟ್‌ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮುಹೂರ್ತ (Muhurtha) ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಅವರು ಕ್ಲಾಪ್‌ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ಕೊಟ್ಟರು. ಪ್ರಜ್ವಲ್‌ ಪತ್ನಿ ರಾಗಿಣಿ ಚಂದ್ರನ್‌ (Ragini Chandran) ಕ್ಯಾಮೆರಾ ಚಾಲನೆ ಮಾಡಿರು. ಆಕ್ಷನ್‌ ಥ್ರಿಲ್ಲರ್‌ ಕತೆಯನ್ನು ಹೊಂದಿರುವ ಈ ಚಿತ್ರವನ್ನು ಹರಿ ಪ್ರಸಾದ್‌ ಜಕ್ಕ (Hari Prasad Jakka) ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾಸ್ ಅವರಿಗೆ ಕನ್ನಡದಲ್ಲಿ ಮೊದಲ ಚಿತ್ರ.

ಚರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರು. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ (Anoop Seelin) ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ‌‌. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಇದೇ ಮೊದಲ ಬಾರಿಗೆ ಸಾರಾ ಹರೀಶ್ (Sarah Harish) (ಭರತ ಬಾಹುಬಲಿ ಖ್ಯಾತಿ) ನಟಿಸುತ್ತಿದ್ದಾರೆ. ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಫೆಬ್ರವರಿ ಮೊದಲವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Devaraj In Mafia: ಪುತ್ರ ಪ್ರಜ್ವಲ್‌ ಜೊತೆ ಮತ್ತೆ ದೇವರಾಜ್ ಖಾಕಿ ಖದರ್!

ಪ್ರಜ್ವಲ್ ದೇವರಾಜ್ಅವರು ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ವಾರವಷ್ಟೇ ಅವರ ನಟನೆಯ 'ಅರ್ಜುನ್ ಗೌಡ' (Arjun Gowda) ಸಿನಿಮಾ ತೆರೆಕಂಡಿದೆ. ಹಾಗೂ ಇತ್ತೀಚೆಗಷ್ಟೇ 'ಮಾಫಿಯಾ' (Mafia) ಸಿನಿಮಾಕ್ಕೆ ಚಾಲನೆ ಕೊಟ್ಟಿದ್ದರು ಪ್ರಜ್ವಲ್. 'ಮಮ್ಮಿ' ಖ್ಯಾತಿಯ ಲೋಹಿತ್ (Lohith) ನಿರ್ದೇಶನ ಮಾಡುತ್ತಿರುವ ಈ ಸಿನಿಮಾವನ್ನು ಬೆಂಗಳೂರು ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ 40-50% ಶೂಟಿಂಗ್ ಕೂಡ ಮುಕ್ತಾಯಗೊಂಡಿದೆ. ನಟಿ ಅದಿತಿ ಪ್ರಭುದೇವ (Aditi Prabhudeva) ಇದೇ ಮೊದಲ ಬಾರಿಗೆ ಪ್ರಜ್ವಲ್‌ ದೇವರಾಜ್‌ಗೆ ನಾಯಕಿಯಾಗಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. 



'ಮಾಫಿಯಾ' ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದು ಆಕ್ಷನ್ ಪ್ರಧಾನ ಕಥೆಯ ಚಿತ್ರವಾಗಿದೆ. ಅಂಡರ್‌ವರ್ಲ್ಡ್ ಸ್ಟೋರಿಯೂ ಚಿತ್ರದಲ್ಲಿದೆ. ಇದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಎಂಟರ್‌ಟೈನರ್‌. ಆರಂಭದಲ್ಲಿ ಪ್ರಜ್ವಲ್‌ ಅವರನ್ನು ಕಂಡರೆ ಭಯವಿತ್ತು. ಈಗ ಒಳ್ಳೆಯ ಸ್ನೇಹವಿದೆ. ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಆ ನಂತರ ರಾಮೋಜಿ ರಾವ್‌ ಫಿಲಂ ಸಿಟಿಯಲ್ಲಿ ಪ್ಲ್ಯಾನ್‌ ಮಾಡಿದ್ದೇವೆ' ಎಂದು ಚಿತ್ರದ ಬಗ್ಗೆ ನಿರ್ದೇಶಕ ಲೋಹಿತ್ ಹೇಳಿದ್ದಾರೆ. ನಾನು ಈ ಹಿಂದೆ ಲೋಹಿತ್‌ ಮಾಡಿರುವ ಚಿತ್ರಗಳನ್ನು ನೋಡಿದ್ದೇನೆ. ಸಾಕಷ್ಟು ಅಧ್ಯಯನ ಮಾಡಿಯೇ ಅವರು ಸ್ಕ್ರಿಪ್ಟ್ ಮಾಡಿದ್ದಾರೆ.

Mafia: ಪ್ರಜ್ವಲ್ ದೇವರಾಜ್-ಅದಿತಿ ಪ್ರಭುದೇವ ಹೊಸ ಚಿತ್ರಕ್ಕೆ ಮುಹೂರ್ತ

'ಮಾಫಿಯಾ' ಅಂದಾಗ ಕೇವಲ ಹೊಡೆದಾಟ ಬಡಿದಾಟದ ಸಿನಿಮಾನಾ ಎಂಬ ಭಾವನೆ ಬರಬಹುದು. ಖಂಡಿತಾ ಅಲ್ಲ, ಸಾಕಷ್ಟು ಹೊಸ ವಿಚಾರಗಳನ್ನು ಹೇಳಿದ್ದಾರೆ. ಇದು ಬೇರೆ ತರಹದ ಮಾಫಿಯಾ ಎಂದು ಪ್ರಜ್ವಲ್‌ ದೇವರಾಜ್‌ ಹೇಳಿದ್ದಾರೆ.ಇದರ ಜೊತೆಗೆ 'ವೀರಂ' (Veeram) ಸಿನಿಮಾದ ಶೂಟಿಂಗ್ ಕೂಡ ಕಂಪ್ಲೀಟ್ ಮಾಡಿದ್ದಾರೆ. ಪ್ರಜ್ವಲ್‌ಗೆ ನಾಯಕಿಯಾಗಿ ರಚಿತಾ ರಾಮ್ (Rachita Ram) ಕಾಣಿಸಿಕೊಂಡಿದ್ದಾರೆ. 'ಖದರ್' ಕುಮಾರ್ ಅದರ ನಿರ್ದೇಶಕರು. ರಾಮ್ ನಾರಾಯಣ್ ನಿರ್ದೇಶನದಲ್ಲಿ 'ಅಬ್ಬರ' ಸಿನಿಮಾದಲ್ಲೂ ಪ್ರಜ್ವಲ್ ನಟಿಸಿದ್ದಾರೆ. ಇವೆರಡೂ ಸಿನಿಮಾಗಳ ಶೂಟಿಂಗ್ ಆಗಲೇ ಮುಕ್ತಾಯವಾಗಿ, ರಿಲೀಸ್‌ಗೆ ಸಿದ್ಧತೆ ನಡೆಯುತ್ತಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೆಡ್ಡಿಂಗ್ ಸೀಸನ್ ಶುರು, ಆದ್ರೆ ನನ್ನ ಮದುವೆ...... ಏನ್ ಹೇಳಿದ್ರು Sanvi Sudeep
ಡಿಸೆಂಬರ್‌ಗೆ ಸ್ಯಾಂಡಲ್‌ವುಡ್‌ ದಬ್ಬಾಳಿಕೆ: ಡೆವಿಲ್‌, 45, ಮಾರ್ಕ್‌ ಮೂವರು ಸೂಪರ್‌ಸ್ಟಾರ್‌ಗಳ ಮಹಾಯುದ್ಧ