ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ರಾಜ್‌ಕುಮಾರ್

By Suvarna News  |  First Published Oct 31, 2021, 4:34 PM IST

ಡಾ.ರಾಜ್‌ಕುಮಾರ್ ಅವರ ಇಡೀ ಕುಟುಂಬ ನೇತ್ರದಾನ ಮಾಡುವುದಕ್ಕೆ ಹಲವು ವರ್ಷಗಳ ಹಿಂದೆಯೇ ಸಹಿ ಮಾಡಿದ್ದರು. ಅಣ್ಣಾವ್ರು ಕೂಡ ನೇತ್ರದಾನ ಮಾಡಿ ಇಬ್ಬರಿಗೆ ಬೆಳಕಾಗಿ ಹೋದರು. ಹಾಗೆಯೇ ಪುನೀತ್ ಕೂಡ ನೇತ್ರದಾನ ಮಾಡಿದ್ದಾರೆ.


ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ( Puneeth Rajkumar) ಅಕಾಲಿಕ ನಿಧನದಿಂದ ಇಡೀ ಕರ್ನಾಟಕದಲ್ಲಿ ಸೂತಕದ ಛಾಯೆ ಆವರಿಸಿದೆ. ಕೋಟ್ಯಾಂತರ ಅಭಿಮಾನಿಗಳು ಪುನೀತ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಕೆಲ ಅಭಿಮಾನಿಗಳಿಗೂ ಹೃದಯಾಘಾತವಾಗಿದೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಹೊರ ರಾಜ್ಯ, ಹೊರ ದೇಶಗಳಲ್ಲೂ ಪುನೀತ್ ಅಭಿಮಾನಿಗಳನ್ನು ಹೊಂದಿದ್ದಾರೆ. ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

"

Tap to resize

Latest Videos

ಅಪ್ಪ ಡಾ.ರಾಜ್​ಕುಮಾರ್ (Dr.Rajkumar) ಹಾದಿಯಲ್ಲೇ ಸಾಗಿದ ಪುನೀತ್ ಕಣ್ಣುಗಳನ್ನು (Eye) ದಾನ ಮಾಡಿದ್ದಾರೆ. ಈ ಮೂಲಕ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ. ಇಬ್ಬರಿಗೆ ಪುನೀತ್ ರಾಜ್​ಕುಮಾರ್​ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಅಳವಡಿಕೆ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾರಾಯಣ ನೇತ್ರಾಲಯದಲ್ಲಿ ವೈದ್ಯರು ನಿನ್ನೆ ಒಬ್ಬರಿಗೆ, ಇಂದು ಮತ್ತೊಬ್ಬರಿಗೆ ಪುನೀತ್ ಕಣ್ಣುಗಳನ್ನು ಅಳವಡಿಸಿದ್ದಾರೆ. ಈ ಬಗ್ಗೆ ನಾರಾಯಣ ನೇತ್ರಾಲಯ ವೈದ್ಯರು ಮಂಗಳವಾರ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.

I Love You ಚಿನ್ನ: ಜಗ್ಗೇಶ್ ಬಿಚ್ಚಿಟ್ಟ ಪುನೀತ್ ನೆನಪು

ಇತ್ತೀಚೆಗಷ್ಟೇ ನಾರಾಯಣ ನೇತ್ರಾಲಯ (Narayana Nethralaya) ಮುಖ್ಯಸ್ಥ ಡಾ.ಭುಜಂಗಶೆಟ್ಟಿ (Dr.Bhujanga Shetty), ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಪುನೀತ್‌ ಅವರ ಕಣ್ಣುಗಳಿಂದ ಮೂರ್ನಾಲ್ಕು ಮಂದಿಗೆ ದೃಷ್ಟಿ ನೀಡಲು ಪ್ರಯತ್ನ ಶುರು ಮಾಡಿದ್ದೇವೆ. ಪುನೀತ್‌ ಅವರ ದಾನ ಮಾಡಿದ ಕಣ್ಣುಗಳನ್ನು ಅಳವಡಿಸಲು ಮೂರ್ನಾಲ್ಕು ಮಂದಿಗೆ ಬರಲು ಸೂಚಿಸಿದ್ದೇವೆ. ಕಣ್ಣುಗಳನ್ನು ಎರಡು ಭಾಗಗಳಾಗಿ ವಿಂಗಡಿಸಿ ಒಂದೇ ಕಣ್ಣನ್ನು ಇಬ್ಬರಿಗೆ ಅಳವಡಿಕೆ ಮಾಡಬಹುದಾದ ಅತ್ಯಾಧುನಿಕ ತಂತ್ರಜ್ಞಾನ ಬಂದಿದೆ. ಇದರ ಸಹಕಾರದಿಂದ ಕಣ್ಣಿನ ಮುಂಭಾಗ ಹಾನಿಗೊಳಗಾದವರಿಗೆ ಮುಂಭಾಗ ಹಾಗೂ ಹಿಂಭಾಗ ಹಾನಿಗೊಳಗಾದವರಿಗೆ ಹಿಂಭಾಗ ಅಳವಡಿಕೆ ಮಾಡಲು ಚಿಂತನೆ ನಡೆಸಿದ್ದೇವೆ. 

ಈ ಮೂಲಕ ಮೂರ್ನಾಲ್ಕು ಮಂದಿಗೆ ದೃಷ್ಟಿ ನೀಡಲು ಯೋಚಿಸಿದ್ದೇವೆ. ಭಾನುವಾರ ಈ ಸಂಬಂಧ ಅಂತಿಮ ಪ್ರಕ್ರಿಯೆ ನಡೆಯಲಿದೆ. ಭಾನುವಾರ ಪುನೀತ್‌ ಅವರ ಅಂತ್ಯಸಂಸ್ಕಾರ ಮುಗಿದ ಬಳಿಕ ನಾವೇ ಖುದ್ದು ಎಲ್ಲಾ ಮಾಹಿತಿಯನ್ನೂ ಒದಗಿಸುತ್ತೇವೆ ಎಂದು ಹೇಳಿದ್ದರು. ಮುಖ್ಯವಾಗಿ ಡಾ.ರಾಜ್‌ಕುಮಾರ್ ಅವರ ಇಡೀ ಕುಟುಂಬ ನೇತ್ರದಾನ ಮಾಡುವುದಕ್ಕೆ ಹಲವು ವರ್ಷಗಳ ಹಿಂದೆಯೇ ಸಹಿ ಮಾಡಿದ್ದರು. ಅಣ್ಣಾವ್ರು ಕೂಡ ನೇತ್ರದಾನ ಮಾಡಿ ಇಬ್ಬರಿಗೆ ಬೆಳಕಾಗಿ ಹೋದರು. ಹಾಗೆಯೇ ಪುನೀತ್ ಕೂಡ ನೇತ್ರದಾನ ಮಾಡಿದ್ದಾರೆ. ಅಭಿಮಾನಿಗಳು ಹಾಗೂ ಕನ್ನಡಿಗರನ್ನು ದೇವರಂತೆ ಪೂಜಿಸುವ ಡಾ. ರಾಜ್‌ ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಮುಂದಿನ ಆರಾಧನೆಗೆ ಬರ್ತೆನೆ: ಪುನೀತ್

ಇನ್ನು ಪುನೀತ್ 29 ಚಲನಚಿತ್ರಗಳಲ್ಲಿ ನಾಯಕ ನಟರಾಗಿ ಅಭಿನಯಿಸಿದ್ದಿ, ಬಾಲ್ಯದಲ್ಲಿ ಅವರು ಅನೇಕ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಸಂತ ಗೀತ (1980), ಭಾಗ್ಯವಂತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983), ಭಕ್ತ ಪ್ರಹ್ಲಾದ, ಯಾರಿವನು ಮತ್ತು ಬೆಟ್ಟದ ಹೂವು (1985) ಚಿತ್ರಗಳಲ್ಲಿ ಅವರ ಅಭಿನಯವು ಪ್ರಶಂಸೆಗೆ ಪಾತ್ರವಾಯಿತು. ಬೆಟ್ಟದ ಹೂವು ಚಿತ್ರದಲ್ಲಿನ ರಾಮು ಪಾತ್ರಕ್ಕಾಗಿ ಅವರು ಅತ್ಯುತ್ತಮ ಬಾಲ ಕಲಾವಿದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದರು. ಚಲಿಸುವ ಮೋಡಗಳು ಮತ್ತು ಎರಡು ನಕ್ಷತ್ರಗಳು ಚಿತ್ರಕ್ಕಾಗಿ ಕರ್ನಾಟಕ ರಾಜ್ಯ ಅತ್ಯುತ್ತಮ ಬಾಲ ಕಲಾವಿದ ಪ್ರಶಸ್ತಿಯನ್ನು ಪಡೆದರು.

"

click me!