
ಈ ಕುರಿತು ಮನೆ ಹತ್ತಿರ ಬರದಂತೆ ಪುನೀತ್ ಮನವಿ ಮಾಡಿಕೊಂಡಿದ್ದರು. ಆದರೂ ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ.
ಪುನೀತ್ ಹುಟ್ಟುಹಬ್ಬದ ಅಂಗವಾಗಿ ಏನೆಲ್ಲ ವಿಶೇಷತೆಗಳಿವೆ?
1. ನಿರ್ದೇಶಕ ಸಿಂಪಲ್ ಸುನಿ ಅವರು ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ಕಾಮನ್ ಡೀಪಿ ಬಿಡುಗಡೆ ಮಾಡಿದ್ದಾರೆ. ಫೇಸ್ಬುಟ್ ಟ್ವಿಟ್ಟರ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲ ತಾಣಗಳಲ್ಲಿ ಪವರ್ ಸ್ಟಾರ್ ಅಭಿಮಾನಿಗಳು ಈ ಕಾಮನ್ ಡೀಪಿ ಬಳಸುತ್ತಿದ್ದಾರೆ. ಆ ಮೂಲಕ ಸೋಷಿಯಲ್ ಮೀಡಿಯಾಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜನ್ಮ ದಿನವನ್ನು ಈಗಾಗಲೇ ಸಂಭ್ರಮಿಸಲು ಶುರು ಮಾಡಿದ್ದಾರೆ.
ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ 'ಪವರ್' ಫುಲ್ ಆಲ್ಬಂ ರಿಲೀಸ್!
2. ಸಂತೋಷ್ ಆನಂದ್‌ರಾಮ್ ನಿರ್ದೇಶನದ ಬಹು ನಿರೀಕ್ಷೆಯ ‘ಯುವರತ್ನ’ ಚಿತ್ರದ ಡೈಲಾಗ್ ಟೀಸರ್ ಬಿಡುಗಡೆ ಆಗಿದೆ. ಅಭಿಮಾನಿಗಳಿಗೆ ಕಿಕ್ ಕೊಡುವಂತೆ ಡೈಲಾಗ್ ಟೀಸರ್ ಬಂದಿದ್ದು, ಸಿಕ್ಕಾಪಟ್ಟೆಪವರ್ ಫುಲ್ಲಾಗಿದೆ ಎಂಬುದು ಟೀಸರ್ ನೋಡಿದವರು ಅಭಿಪ್ರಾಯ.
3. ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದ ಮೊದಲ ಮೋಷನ್ ಪೋಸ್ಟರ್ ಬಿಡುಗಡೆ ಕೂಡ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆ ಆಗುತ್ತಿದೆ. ಇಂದು ಬೆಳಗ್ಗೆ ಚಿತ್ರದ ಮೋಷನ್ ಪೋಸ್ಟರ್ ಅನಾವರಣವಾಗಲಿದೆ.
4. ಇಂದು ಬೆಳಗ್ಗೆ ಪುನೀತ್ ರಾಜ್‌ಕುಮಾರ್ ಕುಟುಂಬ ಸಮೇತರಾಗಿ ಕಂಠೀರವ ಸ್ಟುಡಿಯೋಗೆ ತೆರಳಿ ಅಲ್ಲಿ ಡಾ ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.
5. ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಅಪ್ಪು ಅವರ ಅಭಿಮಾನಿಗಳು ಹಲವು ರೀತಿಯ ಸಾಮಾಜಿಕ ಕಾರ್ಯಗಳನ್ನು ಆಯೋಜಿಸಿದ್ದಾರೆ.
ಈ ಕೆಲಸಕ್ಕಾಗಿ ಸಂಭಾವನೆಯನ್ನೇ ಪಡೆಯದ ಅಪ್ಪು, ನಿಜಕ್ಕೂ ಗ್ರೇಟ್!
6. ಕೊರೋನಾ ವೈರಸ್ ಎಫೆಕ್ಟ್ನಿಂದ ಈ ಬಾರಿ ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಳ್ಳಲು ನಿರ್ಧರಿಸಿರುವ ಪುನೀತ್ ಕುಮಾರ್ ಅವರು ದೊಡ್ಡ ಸಂಖ್ಯೆಯಲ್ಲಿ ಮನೆಯ ಬಳಿ ಅಭಿಮಾನಿಗಳು ಬಾರದಂತೆ ಮನವಿ ಮಾಡಿಕೊಂಡಿದ್ದಾರೆ. ನಿಮ್ಮ ಆರೋಗ್ಯವೇ ನನಗೆ ಆಶೀರ್ವಾದ. ನೀವು ಇದ್ದಲ್ಲೇ ನನಗೆ ಶುಭ ಕೋರಿ ಎಂಬ ಅಭಿಮಾನದ ಮಾತುಗಳನ್ನು ಒಳಗೊಂಡ ವಿಡಿಯೋವೊಂದನ್ನು ಪುನೀತ್ ಬಿಡುಗಡೆ ಮಾಡಿದ್ದಾರೆ.
7. ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಹೊಸ ಚಿತ್ರಗಳನ್ನು ಘೋಷಿಸುವ ಸಾಧ್ಯತೆಗಳಿವೆ.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.