Actor Sharan: ಕಾಮಿಡಿ ಅಧ್ಯಕ್ಷನ ಹೊಸ ಚಿತ್ರಕ್ಕೆ ನವನೀತ್‌ ನಿರ್ದೇಶನ

By Suvarna NewsFirst Published Dec 18, 2021, 10:48 PM IST
Highlights

ಕಾಮಿಡಿ ಕಿಂಗ್ ಅಧ್ಯಕ್ಷ ಶರಣ್ ಅಭಿನಯದ 'ಅವತಾರ ಪುರುಷ' ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರದ ಪ್ರಚಾರ ಕಾರ್ಯಗಳು ನಡೆಯುತ್ತಿವೆ. ಈ ನಡುವೆ ಶರಣ್ ಹೊಸ ಚಿತ್ರದಲ್ಲಿ ನಟಿಸುತ್ತಿದ್ದು, ಇತ್ತೀಚೆಗೆ ಚಿತ್ರದ ಮುಹೂರ್ತ ನಡೆದಿದೆ. 

ಸ್ಯಾಂಡಲ್‌ವುಡ್‌ನ ಕಾಮಿಡಿ ಕಿಂಗ್ ಅಧ್ಯಕ್ಷ ಶರಣ್ (Sharan) ಅಭಿನಯದ 'ಅವತಾರ ಪುರುಷ' (Avatar Purusha) ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರದ ಪ್ರಚಾರ ಕಾರ್ಯಗಳು ನಡೆಯುತ್ತಿವೆ. ಈ ನಡುವೆ ಶರಣ್ ಹೊಸ ಚಿತ್ರದಲ್ಲಿ ನಟಿಸುತ್ತಿದ್ದು, ಇತ್ತೀಚೆಗೆ ಚಿತ್ರದ ಮುಹೂರ್ತ (Muhurta) ನಡೆದಿದೆ. ಈ ಚಿತ್ರವನ್ನು 'ಕರ್ವ' ಖ್ಯಾತಿಯ ನವನೀತ್‌ (Navaneeth) ನಿರ್ದೇಶಿಸುತ್ತಿದ್ದಾರೆ. ತರುಣ್‌ ಟಾಕೀಸ್‌ನಡಿ ಚಿತ್ರ ನಿರ್ಮಾಣವಾಗುತ್ತಿದೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಮಾನಸ ತರುಣ್‌ (Manasa Tarun) ಆರಂಭ ಫ‌ಲಕ ತೋರಿದ್ದು, ನಿರ್ದೇಶಕ ತರುಣ್‌ ಸುಧೀರ್‌ (Tarun Sudhir) ಕ್ಯಾಮೆರಾ ಚಾಲನೆ ಮಾಡಿದರು.

ಈ ಹೊಸ ಚಿತ್ರದ ಟೈಟಲ್‌ನ್ನು (Title) ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. ಹಾರಾರ್‌ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ನವನೀತ್ ಕಥೆ, ಚಿತ್ರಕಥೆ ಬರೆದಿದ್ದಾರೆ. ಶರಣ್‌ ನಾಯಕರಾಗಿ ನಟಿಸುತ್ತಿದ್ದು, ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಬೆಂಗಳೂರು ಹಾಗೂ ಉತ್ತರಾಖಂಡ್‌ನಲ್ಲಿ ಚಿತ್ರೀಕರಣ ನಡೆಯಲಿದೆ. ಮಾಸಾಂತ್ಯಕ್ಕೆ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸದ್ಯ ನಟ ಶರಣ್‌ ಅಭಿನಯದ ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾ 'ಅವತಾರ್‌ ಪುರುಷ' (Avatara Purusha) ಚಿತ್ರವನ್ನು ಸಿಂಪಲ್ ಸುನಿ (Simple Suni) ನಿರ್ದೇಶಿಸುತ್ತಿದ್ದಾರೆ.  

Avatara Purusha: ಶರಣ್ ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಿಂಪಲ್ ಸುನಿ ಟ್ವೀಟ್

'ಅವತಾರ ಪುರುಷ' ಚಿತ್ರದ ಟೀಸರ್‌ (Teaser) ಹಾಗೂ ಟ್ರೇಲರ್‌ನಿಂದ (Trailer) ಈಗಾಗಲೇ ಸಾಕಷ್ಟು ಗಮನ ಸೆಳೆದಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಇರುವ ಚಿತ್ರದಲ್ಲಿ ಶರಣ್ ಅವರನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಮತ್ತು ಹೊಸ ಅವತಾರದಲ್ಲಿ ಕಾಣಬಹುದಾಗಿದೆ. ಮುಖ್ಯವಾಗಿ ಸಿಕ್ಕಾಪಟ್ಟೆ ಶಾಕ್‌ನೊಂದಿಗೆ ಭಯಮೂಡಿಸುವಂತಹ ಬ್ಲ್ಯಾಕ್ ಮ್ಯಾಜಿಕ್ (Black Maagic) ಚಿತ್ರಕಥೆ ಈ ಚಿತ್ರದಲ್ಲಿದೆ. ಇದೊಂದು ಬ್ಲಾಕ್‌ ಮ್ಯಾಜಿಕ್‌ ಕತೆ. ಕಾಮಿಡಿ, ಬ್ಲಾಕ್‌ ಮ್ಯಾಜಿಕ್‌ ಅಂಶಗಳ ಸುತ್ತ ಈ ಸಿನಿಮಾ ಸಾಗುತ್ತದೆ. 

ಇದು ವೆಬ್‌ ಸರಣಿಗೆ ಮಾಡಿಕೊಂಡಿದ್ದ ಕತೆಯಾಗಿದ್ದರಿಂದ ಅದನ್ನು ಸಿನಿಮಾ ಮಾಡಲು ಹೊರಟಾಗ ಒಂದೇ ಕಂತಿನಲ್ಲಿ ಹೇಳುವುದು ಕಷ್ಟಎನಿಸಿತು. ಹೀಗಾಗಿ ಆರಂಭದಲ್ಲೇ ಎರಡು ಪಾರ್ಟ್‌ಗಳಲ್ಲಿ ಸಿನಿಮಾ ಮಾಡುವ ಪ್ಲಾನ್‌ ಮಾಡಿಕೊಂಡು ಚಿತ್ರ ಆರಂಭಿಸಲಾಯಿತು ಎಂದು ನಿರ್ದೇಶಕ ಸಿಂಪಲ್ ಸುನಿ ಈ ಹಿಂದೆ ಹೇಳಿದ್ದರು. ಇತ್ತೀಚೆಗೆ ಚಿತ್ರದ  'ಲಡ್ಡೂ ಬಂದು ಬಾಯಿಗೆ ಬಿತ್ತಾ' (Laddoo) ಹಾಡು ಬಿಡುಗಡೆಯಾಗಿದೆ. ಶರಣ್ ಹಾಗೂ ಆಶಿಕಾ ಕಾಂಬಿನೇಷನ್‌ ಕೆಮಿಸ್ಟ್ರಿ ಹಾಡಿನಲ್ಲಿ ಸಖತ್ ವರ್ಕೌಟ್ ಆಗಿದ್ದು, ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದಿದೆ. 'ಅವತಾರ ಪುರುಷ' ಚಿತ್ರದ ಟೀಸರ್‌ ಹಾಗೂ ಟ್ರೇಲರ್‌ನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿದೆ.

ನಮ್ಮ ಜೀವನದ ಪ್ರತಿ ಘಳಿಗೆಯಲ್ಲೂ ಮಕ್ಕಳು ಅತ್ಯಮೂಲ್ಯ: ನಟ ಶರಣ್

'ಅವತಾರಪುರುಷ' ಚಿತ್ರ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. 'ಅವತಾರ ಪುರುಷ 1' ಮತ್ತು 'ಅವತಾರ ಪುರುಷ 2' ಹೆಸರಿನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಆದರೆ, ಚಿತ್ರದ ಟ್ಯಾಗ್‌ಲೈನ್  ಮಾತ್ರ ಬೇರೆ ಬೇರೆ ಇಡಲಾಗುತ್ತಿದೆ. ಮೊದಲ ಭಾಗಕ್ಕೆ ಅಷ್ಟದಿಗ್ಬಂಧನ ಮಂಡಲಕ ಹಾಗೂ ಎರಡನೇ ಪಾರ್ಟ್‌ಗೆ  ತ್ರಿಶಂಕು ಎನ್ನುವ ಟ್ಯಾಗ್‌ಲೈನ್ ಇಡಲಾಗಿದೆ. ಇನ್ನು ಈ ಚಿತ್ರವು ಪುಷ್ಕರ್ ಫಿಲಂಸ್ ಬ್ಯಾನರ್‌ನಡಿ ಪುಷ್ಕರ್ ಮಲ್ಲಿಕಾರ್ಜುನಯ್ಯ (Pushkara Mallikarjunaiah) ನಿರ್ಮಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ವಿಕ್ರಮ್ ಮೊರ್ ಅವರು ಚಿತ್ರಕ್ಕೆ ನೃತ್ಯ ಸಂಯೋಜನೆ ಮಾಡಿದ್ದಾರೆ. ವಿಲಿಯಮ್ ಡೇವಿಡ್ ಛಾಯಾಗ್ರಹಣದಲ್ಲಿ 'ಅವತಾರ ಪುರುಷ'  ಚಿತ್ರ ಮೂಡಿ ಬಂದಿದೆ. 
 

click me!