
ಚಿಕ್ಕಣ್ಣ ನಾಯಕನಾಗಿ ನಟಿಸಿರುವ ‘ಲಕ್ಷ್ಮೀಪುತ್ರ’ದ ಟ್ರೇಲರನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡಿದರು. ನ. 27ರಂದು ಈ ಸಿನಿಮಾ ತೆರೆಗೆ ಬರಲಿದೆ. ಎ.ಪಿ. ಅರ್ಜುನ್ ಕಥೆ, ಚಿತ್ರಕಥೆ, ಸಾಹಿತ್ಯ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಅನ್ನಪೂರ್ಣ ಎ.ಪಿ. ಅರ್ಜುನ್ ನಿರ್ಮಾಣ ಮಾಡಿದ್ದು, ರವಿಕುಮಾರ್ ಸಹ ನಿರ್ಮಾಪಕರಾಗಿದ್ದಾರೆ. ವಿಜಯ್ ಎಸ್. ಸ್ವಾಮಿ ಚೊಚ್ಚಲ ನಿರ್ದೇಶನದ ಈ ಚಿತ್ರದಲ್ಲಿ ಚಿಕ್ಕಣ್ಣ ಹಳ್ಳಿ ಹುಡುಗನ ಗೆಟಪ್‌ನಲ್ಲಿ ಮಿಂಚಿದ್ದು, ತಾರಾ ಅವರ ತಾಯಿಯ ಪಾತ್ರಕ್ಕೆ ಜೀವ ತುಂಬಿದ್ದಾರೆ.
ಟ್ರೇಲರ್ ಬಿಡುಗಡೆ ಮಾಡಿದ ಶಿವರಾಜ್‌ಕುಮಾರ್, ‘ಚಿಕ್ಕಣ್ಣ ಈ ಚಿತ್ರದಲ್ಲಿ ತುಂಬಾ ಲೀಲಾಜಾಲವಾಗಿ ಡ್ಯಾನ್ಸ್ ಮಾಡಿದ್ದಾರೆ. ಅವರ ಡ್ಯಾನ್ಸ್ ನೋಡಿದರೆ ನನಗೆ ಪ್ರಭುದೇವ ನೆನಪಾಗುತ್ತಾರೆ. ಚಿಕ್ಕಣ್ಣ ಅವರ ಹಾಸ್ಯದಲ್ಲಿ ಆಡಂಬರವಿಲ್ಲ, ಬಹಳ ಸಟಲ್ ಆಗಿ ನಟಿಸುತ್ತಾರೆ. ಬರೆದಿಟ್ಟುಕೊಳ್ಳಿ, ಇನ್ನೆರಡು-ಮೂರು ವರ್ಷಗಳಲ್ಲಿ ಚಿಕ್ಕಣ್ಣ ದೊಡ್ಡ ಸೂಪರ್ ಸ್ಟಾರ್ ಆಗುತ್ತಾರೆ’ ಎಂದರು. ನಾಯಕಿ ವಂದಿತಾ ಹಾಗೂ ತಾರಾ ಅಭಿನಯಕ್ಕೂ ಮೆಚ್ಚುಗೆ ಸೂಚಿಸಿದರು.
ತಂದೆ-ತಾಯಿ ಮಾಡಿದ ಪುಣ್ಯ
ಶಿವಣ್ಣನ ಮಾತುಗಳಿಗೆ ಭಾವುಕರಾದ ಚಿಕ್ಕಣ್ಣ, ‘ಅಣ್ಣಾವ್ರ ಮಗನ ಬಾಯಲ್ಲಿ ಇಂತಹ ಮಾತು ಕೇಳಿರುವುದು ನಮ್ಮ ತಂದೆ-ತಾಯಿ ಮಾಡಿದ ಪುಣ್ಯ. ಈ ಮಾತು ಕೇಳಿದಾಗಲೇ ನಾನು ಸೂಪರ್ ಸ್ಟಾರ್ ಆದಷ್ಟೇ ಖುಷಿಯಾಯಿತು. ಇದು ಕೇವಲ ಕಾಮಿಡಿ ಅಥವಾ ಕಮರ್ಷಿಯಲ್ ಸಿನಿಮಾವಲ್ಲ. ಪ್ರತಿಯೊಬ್ಬ ಮಧ್ಯಮ ವರ್ಗದ ಹುಡುಗನ ಬದುಕಿನ ನೈಜ ಘಟನೆಗಳ ಕಥೆ’ ಎಂದರು.
ಇನ್ನು ಚಿತ್ರದ ನಾಯಕಿ ವಂದಿತಾ ಗೌಡ ಕೂಡ ಸಿನಿಮಾದ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಚಿತ್ರ ಅತ್ಯುತ್ತಮವಾಗಿ ಮೂಡಿಬಂದಿದ್ದು, ಕಲಾವಿದರ ಬೆಳವಣಿಗೆಗೆ ಪ್ರೇಕ್ಷಕರ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಶ್ರೀರಕ್ಷೆ ಎಂದು ಹೇಳಿದ್ದಾರೆ. ಪ್ರಶಾಂತ್ ರಾಜಪ್ಪ ಮತ್ತು ವಿಜಯ್ ಈಶ್ವರ್ ಸಂ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.