
ಬೆಂಗಳೂರು: ಕನ್ನಡ ಮತ್ತು ತುಳು ಚಿತ್ರರಂಗದಲ್ಲಿ ಜನಪ್ರಿಯತೆ ಹೊಂದಿರುವ ನಟ ಸೂರ್ಯೋದಯ್ ಪುತ್ರ ಮಯೂರ್ (20) ಬ್ಯಾಡರಹಳ್ಳಿ ನ್ಯೂ ಲಿಂಕ್ ರಸ್ತೆಯಲ್ಲಿ ಶುಕ್ರವಾರ ರಾತ್ರ ಅಪಘಾತದಿಂದ ಮೃತಪಟ್ಟಿದ್ದಾರೆ.
20 ವರ್ಷ ಮಯೂರ್ ಸ್ನೇಹಿತರ ಜೊತೆ ಡ್ಯೂಕ್ ಬೈಕ್‌ನಲ್ಲಿ ಓವರ್ ಸ್ಪೀಡಲ್ಲಿ ಬರುತ್ತಿದ್ದ ಕಾರಣ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದ್ದಾನೆ, ಎನ್ನಲಾಗಿದೆ. ಸ್ಥಳದಲ್ಲಿಯೇ ಮಯೂರ್ ಕೊನೆಯುಸಿರೆಳೆದಿದ್ದಾನೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮ್ಯಾನ್‌ಹೋಲ್ ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಯ್ತು: ಸಂಚಾರಿ ವಿಜಯ್ ಸ್ನೇಹಿತನ ಸ್ಪಷ್ಟನೆ!
ಮಯೂರ್ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಮಾಡಿಸಲು ಕಳುಹಿಸಲಾಗಿತ್ತು. ರಸ್ತೆ ಅಪಘಾತದಲ್ಲಿ ಯಾರ ತಪ್ಪಿದೆ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೆಲವು ದಿನಗಳ ಹಿಂದೆ ನಟ ಸಂಚಾರಿ ವಿಜಯ್ ಕೂಡ ರಸ್ತೆ ಅಪಘಾತದಲ್ಲಿ ನಿಧನರಾದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.