
ಬೆಂಗಳೂರು (ಮೇ 5): ಕನ್ನಡ ಚಿತ್ರರಂಗದ ಜನಪ್ರಿಯ ನಟ ಹಾಗೂ ನಿರ್ದೇಶಕ ಉಪೇಂದ್ರ ಅವರು ಓವರ್ ಅಸಿಡಿಟಿಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವುದು ತಿಳಿದುಬಂದಿದೆ. ಉಪೇಂದ್ರ ಅವರು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಯಲ್ಲಿ ಕೆಲಕಾಲ ಚಿಕಿತ್ಸೆ ಪಡೆದಿದ್ದು, ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಪ್ತ ಮೂಲಗಳು ತಿಳಿಸಿದ್ದಾರೆ.
ವಿಶೇಷವೆಂದರೆ, ಉಪೇಂದ್ರ ಅವರು ತಮ್ಮ ಬಹು ನಿರೀಕ್ಷಿತ 'UI' ಸಿನಿಮಾದ ಚಿತ್ರೀಕರಣದ ಸಮಯದಲ್ಲಿಯೂ ಇದೇ ರೀತಿಯ ಅಸ್ವಸ್ಥತೆಯನ್ನು ಅನುಭವಿಸಿದ್ದರು. ದೀರ್ಘ ಸಮಯದ ಚಿತ್ರೀಕರಣ, ಉದ್ಯೋಗದ ಒತ್ತಡ ಮತ್ತು ಆಹಾರದ ಅವ್ಯವಸ್ಥೆ ಸೇರಿದಂತೆ ಹಲವು ಕಾರಣಗಳಿಂದ ಈ ಆರೋಗ್ಯ ಸಮಸ್ಯೆ ಉಂಟಾಗಿರಬಹುದೆಂಬ ಅಂದಾಜು ವ್ಯಕ್ತವಾಗಿದೆ. ಆದರೆ ಅಭಿಮಾನಿಗಳು ಗಾಬರಿಯಾಗಬೇಕಾದ ಅಗತ್ಯವಿಲ್ಲ. ಚಿಕಿತ್ಸೆ ಬಳಿಕ ಉಪ್ಪಿ ಅವರು ಈಗ ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೆಲವು ದಿನ ವಿಶ್ರಾಂತಿಯ ಬಳಿಕ ಅವರು ಚೇತರಿಸಿಕೊಂಡು ತಮ್ಮ ಕೆಲಸಕ್ಕೆ ಹಿಂದಿರುಗುವ ಸಾಧ್ಯತೆ ಇದೆ.
ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಉಪೇಂದ್ರ ಅವರಿಗೆ ಬೇಗನೇ ಗುಣಮುಖರಾಗಲೆಂದು ಹಾರೈಸುತ್ತಿದ್ದಾರೆ. ಉಪೇಂದ್ರ ಅವರ ಆರೋಗ್ಯ ಚೇತರಿಕೆ ಆಗುತ್ತಿದೆ ಎಂದು ತಿಳಿದುಬಂದಿದ್ದು, ಶೀಘ್ರವೇ ಗುಣಮುಖರಾಗಿ ಸಿನಿಮಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ ಎಂದು ಹಾರೈಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.