
ಭಾರತೀಯ ಚಿತ್ರರಂಗವೇ ಸ್ಯಾಂಡಲ್‌ವುಡ್‌ನತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಕೆಜಿಎಫ್. ಸ್ಯಾಂಡಲ್‌ವುಡ್‌ನಲ್ಲಿ ಐತಿಹಾಸಿಕ ದಾಖಲೆಯನ್ನೇ ಬರೆದಿದೆ. ಯಶ್ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಾತಾದರು. ಇದೀಗ ಈ ಚಿತ್ರದ ಚಾಪ್ಟರ್ - 2 ತೆರೆಗೆ ಬರುತ್ತಿದೆ. ಸಹಜವಾಗಿ ನಿರೀಕ್ಷೆ ಹೆಚ್ಚಾಗಿದೆ.
'ದಬಾಂಗ್ 3' ನಂತರ ಬಾಲಿವುಡ್‌ನಲ್ಲೇ ಹೆಚ್ಚು ಬ್ಯುಸಿ ಆಗ್ತಾರಾ ಕಿಚ್ಚ ಸುದೀಪ್?
ಈಗ ಕೆಜಿಎಫ್ ಚಾಪ್ಟರ್- 2 ಶೂಟಿಂಗ್ ಶುರುವಾಗಿದೆ. ಈಗಾಗಲೇ ಸಂಜಯ್ ದತ್, ರವೀನಾ ಟಂಡನ್ ಕೂಡಾ ಭಾಗಿಯಾಗುತ್ತಿದ್ದಾರೆ. ಯಶ್ ಪಾತ್ರದ ಬಗ್ಗೆ ಸಹಜ ಕುತೂಹಲ ಹೆಚ್ಚಾಗಿದೆ. ಕೆಜಿಎಫ್ -2 ಚಿತ್ರತಂಡದಿಂದ ಹೊಸ ಸುದ್ದಿಯೊಂದು ಹೊರ ಬಿದ್ದಿದೆ.
ಡಿಸೆಂಬರ್ 14ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:
ಕೆಜಿಎಫ್- 2 ಚಿತ್ರದ ಫಸ್ಟ್ ಲುಕ್ ಡಿಸಂಬರ್ 21 ರ ಸಂಜೆ 5.45 ಕ್ಕೆ ರಿಲೀಸ್ ಆಗಲಿದೆ. ಕನ್ನಡ, ತೆಲುಗು, ಹಿಂದಿ ಹಾಗೂ ಮಲಯಾಳಂನಲ್ಲಿ ಭಾಷೆಯಲ್ಲಿ ರಿಲೀಸ್ ಆಗಲಿದೆ.
ಕೆಜಿಎಫ್ ತಂಡ ಡಿಸಂಬರ್ 21 ರಂದೇ ಫಸ್ಟ್ ಲುಕ್ ರಿಲೀಸ್ ಮಾಡಲು ಕಾರಣವಿದೆ. ಕೆಜಿಎಫ್ ಚಾಪ್ಟರ್ 1 ಇದೇ ದಿನ ರಿಲೀಸ್ ಆಗಿ ಭರ್ಜರಿ ಯಶಸ್ಸು ಕಂಡಿತ್ತು. ಅದೇ ರೀತಿ ಇದೂ ಕೂಡಾ ಸಕ್ಸಸ್ ಆಗಲಿ ಎಂದು ಡಿಸಂಬರ್ 21 ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.