ಗೌರವ ಯಾವಾಗಲೂ ಪರಸ್ಪರ ಅಲ್ವಾ? ಸುಳ್ಳು ಸತ್ಯವಾಗುವುದಿಲ್ಲ : ಯುವ ರಾಜ್‌ಕುಮಾರ್

By Vaishnavi ChandrashekarFirst Published Dec 22, 2022, 4:41 PM IST
Highlights

ಅಪ್ಪು ಪರ ಧ್ವನಿ ಎತ್ತಿದ ಯುವ ರಾಜ್‌ಕುಮಾರ್. ಬರೆದುಕೊಂಡಿರುವ ಪೋಸ್ಟ್‌ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್.... 

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಕ್ಟೋಬರ್ 29,2021ರಂದು ಹೃದಯಾಘಾತದಿಂದ ಅಗಲಿದ್ದರು. ಅಪ್ಪು ಇಲ್ಲದೆ ಒಂದು ವರ್ಷ ಹೇಗೆ ಸಾಗಿತ್ತು ಅನ್ನೋದು ಯಾರಿಗೂ ಗೊತ್ತಿಲ್ಲ ಏಕೆಂದರೆ ಸಾಮಾಜಿಕ ಜಾಲತಾಣದಲ್ಲಿ,ರಸ್ತೆಗಳಲ್ಲಿ, ಅಂಗಡಿಗಳಲ್ಲಿ...ಎಲ್ಲಿ ನೋಡಿದ್ದರು ಪವರ್ ಫುಲ್ ಮ್ಯಾನ್ ಫೋಟೋ ಮತ್ತು ವಿಡಿಯೋಗಳು. ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ನಂತರ ಪುನೀತ್ ಗತ್ತು ಇಡೀ ಭಾರತಕ್ಕೆ ಗೊತ್ತು. ಈ ಸಮಯದಲ್ಲಿ ಪುನೀತ್ ವ್ಯಕ್ತಿತ್ವದ ಬಗ್ಗೆ ಹಾಗೂ ಅವರ ಅಭಿಮಾನಿಗಳ ಬಗ್ಗೆ ಕೆಲವೊಂದು ಅರೋಪಗಳು ಕೇಳಿ ಬಂದಿತ್ತು. ಈ ವಿಚಾರದ ಬಗ್ಗೆ ಯುವ ರಾಜ್‌ಕುಮಾರ್ ರಿಯಾಕ್ಟ್‌ ಮಾಡಿದ್ದಾರೆ.

ಯುವ ರಾಜ್‌ಕುಮಾರ್ ಪೋಸ್ಟ್‌: 

ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲು ನಾನು ತುಂಬಾ ಚಿಕ್ಕವನು ಆದ್ರೆ ತುಂಬಾ ಚಿಕ್ಕವನು ಆದರೆ ತುಂಬಾ ಹೆಮ್ಮೆಯಿಂದ ಒಂದು ವಿಷಯ ಹೇಳ್ಬೇಕೆಂದ್ರೆ...ನಮ್ಮ ಕುಟುಂಬದ ಅಭಿಮಾನಿಗಳು ನಮ್ಮ ತಾತನವರು ಕಾಲದಿಂದ ಇವತ್ತಿನವರೆಗೂ ಕನ್ನಡ ಚಿತ್ರರಂಗದ ಪ್ರತಿ ಕಲಾವಿದರಿಗೂ ಬೆಂಬಲವಾಗಿ ನಿಂತಿದ್ದಾರೆ. ಎಲ್ಲಾ ಸಂದರ್ಭದಲ್ಲೂ ಸಭ್ಯತೆ ಮತ್ತು ಘನತೆಯಿಂದಲೇ ನಡೆದುಕೊಂಡಿದ್ದಾರೆ. ಪ್ರತಿಯೊಬ್ಬರನ್ನು ಗೌರವದಿಂದ ಕಾಣುವ ಪ್ರೀತಿ ವಿಶ್ವಾಸವನ್ನು ಹಂಚುವ ಸಂಸ್ಕೃತಿಯುಳ್ಳ ಅಭಿಮಾನಿಗಳೇ ದೇವರು.

ಆದರೆ, ಗೌರವ ಯಾವಾಗಲೂ ಪರಸ್ಪರ ಅಲ್ವಾ? ಅಪ್ಪು ಚಿಕ್ಕಪ್ಪನ ನಡವಳಿಕೆ, ಸಾಮಾಜಿಕ ಪ್ರಜ್ಞೆ, ಮಹಿಳೆಯರನ್ನು ಗೌರವಿಸುವುದು, ಎಲ್ಲರಿನ್ನೂ ಪ್ರೀತಿಸುವ ಅವರ ವ್ಯಕ್ತಿತ್ವದ ಬಗ್ಗೆ ಪ್ರತಿಯೊಬ್ಬರಿಗೂ ಚೆನ್ನಾಗಿಯೇ ತಿಳಿದಿದೆ. ಅವರ ವ್ಯಕ್ತಿತ್ವ ಎಂದೆಂದಿಗೂ ಎಲ್ಲರಿಗೂ ಮಾದರಿಯಾಗಿ ಇರುತ್ತದೆ. ಅವರ ಬಗ್ಗೆ ಅಗೌರವದಿಂದ ಅವಹೇಳನಕಾರಿಯಾಗಿ ಮಾತನಾಡಿ ಅವರ ಅಭಿಮಾನಿಗಳನ್ನು ಕೆಣಕಿದರೆ ಅವರ ಭಾವನೆಗಳನ್ನು ನೋಯಿಸಿದರೆ, ಅಭಿಮಾನಿಗಳು ನಿರ್ದಿಷ್ಟ ರೀತಿಯಲ್ಲಿ ಪ್ರತಿಕ್ರಿಯಿಸುವುದು 'ಬಹಿಂರಗವಾಗಿಯೇ' ವಿನಃ ನಡೆಯುವ ಪ್ರತಿಯೊಂದು ಘಟನೆಗೂ ಅವರೇ ಕಾರಣಕರ್ತರು ಅಗೋದಿಲ್ಲ.

ನಡೆದಿರುವ ಕೃತ್ಯ ಖಂಡನೀಯ. ಯಾರೋ ಮಾಡಿದ ತಪ್ಪನ್ನು ಮತ್ತೊಬ್ಬರ ಮೇಲೆ ಹಾಕುವುದರಿಂದ 'ಸುಳ್ಳು ಸತ್ಯವಾಗುವುದಿಲ್ಲ' ಪೊಲೀಸ್‌ ತನಿಖೆ ನಡೆಯುತ್ತಿದೆ, ತಪ್ಪಿತಸ್ಥ ಯಾರೇ ಆಗಿದ್ದರೂ ಅವರಿಗೆ ಶಿಕ್ಷೆ ಖಂಡಿತ ಆಗುತ್ತದೆ. ಕಾಣದ ಕೈಗಳು ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರೂ ಕಾಣುವ ಬುದ್ಧಿ ನಮ್ಮದಾಗಿರಲಿ. ನನ್ನ ಚಿಕ್ಕಪ್ಪನ ಧ್ವನಿ ಎಂದಿಗೂ ಸತ್ಯದ ಪರವೆ, ಅವರ ಧ್ವನಿ ನಮ್ಮೆಲ್ಲರ ಶಕ್ತಿ. ಗುರುಯಾರ ಆಶೀರ್ವಾದ ಎಲ್ಲರ ಮೇಲೆ ಸದಾ ಸಂಪೂರ್ಣವಾಗಿ ಇರಲಿ. ಜೈ ಹಿಂದ್ ಜೈ ಕರ್ನಾಟಕ ಮಾತೆ

ಕನ್ನಡಕ್ಕೆ ಬರ್ತಾರಾ ವಿಶಾಲ್?: ಶಕ್ತಿಧಾಮಕ್ಕೆ ಭೇಟಿ ನೀಡಿ ಹೇಳಿದ್ದೇನು?

click me!