Amulya Pregnant: ಅಮೂಲ್ಯ ಬೇಬಿ ಬಂಪ್ ಫೋಟೋಶೂಟ್ ವೈರಲ್‌!

Suvarna News   | Asianet News
Published : Jan 15, 2022, 11:17 PM ISTUpdated : Jan 15, 2022, 11:19 PM IST
Amulya Pregnant: ಅಮೂಲ್ಯ ಬೇಬಿ ಬಂಪ್ ಫೋಟೋಶೂಟ್ ವೈರಲ್‌!

ಸಾರಾಂಶ

ಸ್ಯಾಂಡಲ್‍ವುಡ್‌ನ ನಟಿ ಅಮೂಲ್ಯ ಅವರು ತುಂಬು ಗರ್ಭಿಣಿ ಎನ್ನುವುದು ಗೊತ್ತಿರುವ ವಿಚಾರವಾಗಿದೆ. ಇದೀಗ ಅವರು ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

ಸ್ಯಾಂಡಲ್‍ವುಡ್‌ನ (Sandalwood) ನಟಿ ಅಮೂಲ್ಯ (Amulya) ಅವರು ತುಂಬು ಗರ್ಭಿಣಿ ಎನ್ನುವುದು ಗೊತ್ತಿರುವ ವಿಚಾರವಾಗಿದೆ. ಇದೀಗ ಅವರು ಬೇಬಿ ಬಂಪ್ ಫೋಟೋಶೂಟ್ (Baby Bump Photoshoot) ಮಾಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋಗಳು ಸಖತ್ ವೈರಲ್ (Viral) ಆಗುತ್ತಿದೆ. ಹೌದು! ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ ಎನ್ನುವ ವಿಚಾರ ಎಲ್ಲರಿಗೂ ತಿಳಿದಿದೆ. ಇದೀಗ ತುಂಬು ಗರ್ಭಿಣಿಯಾಗಿರುವ ನಟಿ ಅಮೂಲ್ಯ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ (Instagram) ಹೃದಯದ ಎಮೋಜಿಯೊಂದಿಗೆ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ತಾವು ತಾಯಿಯಾಗುತ್ತಿರುವ ವಿಚಾರವನ್ನು ಸ್ವತಃ ಅಮೂಲ್ಯ ಅವರೇ ಈ ಹಿಂದೆ ತಿಳಿಸಿದ್ದರು. ಪತಿ ಜಗದೀಶ್ (Jagadish) ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ ಎಂದು ಬರೆದುಕೊಂಡಿದ್ದರು. ಈಗ ಬೇಬಿ ಬಂಪ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ಅವರು 'ಚೆಲುವಿನ ಚಿತ್ತಾರ' ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ಚಿಕ್ಕ ವಯಸ್ಸಿನಲ್ಲಿಯೇ ಸ್ಟಾರ್ ನಟರೊಂದಿಗೆ ಅಭಿನಯಿಸಿದ ಕೀರ್ತಿ ಇವರದ್ದಾಗಿದೆ.

Amulya Pregnant: 2022ರಲ್ಲಿ ಕುಟುಂಬಕ್ಕೆ ಹೊಸ ಅತಿಥಿ, ಅಮೂಲ್ಯ ಜಗದೀಶ್ ಈಗ ಮಮ್ಮಿ!

ಇತ್ತ ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ 2017ರಲ್ಲಿ ರಾಜಕೀಯ ಹಿನ್ನೆಲೆ ಇರುವ ಕುಟುಂಬದ ಜಗದೀಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದಿಚುಂಚುನಗಿರಿಯ (Adichunchanagiri) ಕಾಲಭೈರವೇಶ್ವರ ಸನ್ನಿಧಿಯಲ್ಲಿ ಮದುವೆ ಕಾರ್ಯಕ್ರಮ ನಡೆದಿತ್ತು. ಇಬ್ಬರೂ ಒಕ್ಕಲಿಗರಾಗಿದ್ದು, ಆ  ಸಂಪ್ರದಾಯದಂತೆ, ಮದುವೆ ಅದ್ಧೂರಿಯಾಗಿ ನಡೆದಿತ್ತು. ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಸ್ವಾಮಿಗಳು (Nirmalanandanatha Swamiji) ನವ ಜೋಡಿಯನ್ನು ಆಶೀರ್ವಾದ ಮಾಡಿದ್ದರು. 
 


ಮದುವೆ ಆದ ನಂತರ ಅಮೂಲ್ಯ ಲೈಮ್‌ಲೈಟ್‌ನಿಂದ ಕೊಂಚ ದೂರ ಉಳಿದರು. ಮಾಸ್ತಿಗುಡಿ (Mastigudi) ಸಿನಿಮಾ ನಂತರ ಯಾವ ಪ್ರಾಜೆಕ್ಟ್‌ಗೂ ಸಹಿ ಮಾಡಿರಲಿಲ್ಲ. ಕೆಲವೊಂದು ಸಂದರ್ಶನಗಳಲ್ಲಿ ಕಥೆ ಹುಡುಕುತ್ತಿರುವುದಾಗಿ ಹೇಳಿದ್ದರಷ್ಟೆ. ಸದ್ಯ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ. ಕನ್ನಡದ ಹಲವಾರು ಸಿನಿಮಾಗಳಲ್ಲಿ ಅಮೂಲ್ಯ ನಟಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಈ ಮೂಲಕ ಅವರು ಸಂಸಾರದ ಕಡೆಗೆ ಅವರು ಹೆಚ್ಚು ಗಮನ ನೀಡಿದ್ದಾರೆ. ಈಗ ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Jolly ಡೇ: ಅಗ್ನಿಸಾಕ್ಷಿ ವೈಷ್ಣವಿ ಗೌಡ, ನಟಿ ಅಮ್ಯೂಲ ಲಂಚ್ ಔಟಿಂಗ್

ಹೊಸ ಅತಿಥಿಗಳ ಆಗಮನ: ಅಮೂಲ್ಯ ಜಗದೀಶ್ ಮನೆಗೆ ಅತಿಥಿಗಳ ಆಗಮನವಾಗಿದೆ. ಹೌದು! ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಮೂಲ್ಯ ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯವನ್ನು ತಿಳಿಸಿದ್ದು, ನಮ್ಮ ಮನೆಗೆ ಸಂಕ್ರಾಂತಿ ಹಬ್ಬದ ದಿನ ಗಂಗೆ ಮತ್ತು ದ್ರೌಪದಿ ಎಂಬ ಹೆಸರಿನ ಹೊಸ ಅತಿಥಿಗಳ ಆಗಮನವಾಗಿದೆ ಎಂದು ಹಸುಗಳಿಗೆ ಪೂಜೆ ಮಾಡುತ್ತಿರುವ ಫೋಟೊವನ್ನು ಅಮೂಲ್ಯ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಈ ಪೋಟೋದಲ್ಲಿ ಅಮೂಲ್ಯ ಅವರ ಪತಿ ಜಗದೀಶ್ ಹಸುವನ್ನು ಹಿಡಿದು ನಿಂತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಟಾಕ್ಸಿಕ್ ಪೋಸ್ಟರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದ ಯಶ್, ಸಿನಿಮಾ ಬಿಡುಗಡೆ ಕೌಂಟ್‌ಡೌನ್ ಶುರು
ಕನ್ನಡಿಗರ ಪ್ರೀತಿಯ ಪುಟ್ಟಿ ಯಾಕ್ ಹೀಗಾದ್ರು? Rukmini Vasanth ನ್ಯೂ ಲುಕ್ ವೈರಲ್